Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2024: 'ಗೋ ಗ್ರೀನ್' ಪಂದ್ಯದಲ್ಲಿ ಕೆಕೆಆರ್ ಮಣಿಸುವುದೇ ಆರ್‌ಸಿಬಿ?; ಟಾಸ್ ವರದಿ, ಆಡುವ 11ರ ಬಳಗ

ಭಾನುವಾರ, ಏಪ್ರಿಲ್ 21ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 36ನೇ ಪಂದ್ಯದಲ್ಲಿ ಬಲಿಷ್ಠ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ದುರ್ಬಲವಾಗಿ ಕಾಣುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣಸಾಡುತ್ತಿವೆ.

ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬೌಲಿಂಗ್ ಮಾಡುವ ನಿರ್ಧಾರ ಮಾಡಿದ್ದಾರೆ. ಹೀಗಾಗಿ ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

KKR vs RCB IPL 2024 Kolkata Knight Riders vs Royal Challengers Bengaluru Toss Report Playing 11

ಕೆಕೆಆರ್ ತಂಡ ಐಪಿಎಲ್ 2024ರಲ್ಲಿ ಆಡಿದ 6 ಪಂದ್ಯಗಳಲ್ಲಿ 4 ಗೆಲುವು ಮತ್ತು 2 ಸೋಲು ಕಂಡಿದ್ದು, 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಇನ್ನು ಆರ್‌ಸಿಬಿ ತಂಡ ಆಡಿದ 7 ಪಂದ್ಯಗಳಲ್ಲಿ 6 ಸೋಲು ಮತ್ತು 1 ಗೆಲುವು ಸಾಧಿಸಿದ್ದು, ಕೇವಲ 2 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಇದೀಗ ಶ್ರೇಯಸ್ ಅಯ್ಯರ್ ನಾಯಕತ್ವದ ಕೆಕೆಆರ್ ತಂಡ ಈ ಪಂದ್ಯದ ಮೂಲಕ ತಮ್ಮ ಹಿಂದಿನ ಪ್ರದರ್ಶನವನ್ನು ಪುನರಾವರ್ತಿಸಲು ಮತ್ತು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ಎದುರು ನೋಡುತ್ತಿದೆ.

KKR vs RCB IPL 2024 Kolkata Knight Riders vs Royal Challengers Bengaluru Toss Report Playing 11

ಮತ್ತೊಂದೆಡೆ, ಹಸಿರು ಜೆರ್ಸಿಯೊಂದಿಗೆ ಮೈದಾನಕ್ಕಿಳಿಯುತ್ತಿರುವ ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ತಂಡ ಹಿಂದಿನ ಸೋಲಿಗೆ ಸೇಡು ತೀರಿಸಿಕೊಳ್ಳಲು ಮತ್ತು ಪಂದ್ಯಾವಳಿಯಲ್ಲಿ ಪ್ಲೇಆಫ್ ಭರವಸೆಯನ್ನು ಜೀವಂತವಾಗಿರಿಸಿಕೊಳ್ಳಲು ಉತ್ಸುಕವಾಗಿದೆ.

ಈ ಪಂದ್ಯದಲ್ಲಿ ಆರ್‌ಸಿಬಿ ತಂಡ ಮೂರು ಬದಲಾವಣೆಗಳನ್ನು ಮಾಡಿದ್ದು, ಕ್ಯಾಮೆರಾನ್ ಗ್ರೀನ್, ಮೊಹಮ್ಮದ್ ಸಿರಾಜ್ ಮತ್ತು ಕರ್ಣ್ ಶರ್ಮಾ ಆಡುವ 11ರ ಬಳಗಕ್ಕೆ ಮರಳಿದ್ದಾರೆ.

ಕೆಕೆಆರ್ vs ಆರ್‌ಸಿಬಿ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ಮಾಹಿತಿ

ಐಪಿಎಲ್ 2024ರ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಮಾಡಲಾಗುತ್ತದೆ.

KKR vs RCB IPL 2024 Kolkata Knight Riders vs Royal Challengers Bengaluru Toss Report Playing 11

ಕೆಕೆಆರ್ vs ಆರ್‌ಸಿಬಿ ಆಡುವ 11ರ ಬಳಗ

ಕೋಲ್ಕತ್ತಾ ನೈಟ್ ರೈಡರ್ಸ್: ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಸುನಿಲ್ ನರೈನ್, ಆಂಗ್ಕ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ರಿಂಕು ಸಿಂಗ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ವಿಲ್ ಜ್ಯಾಕ್ಸ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಲಾಕಿ ಫರ್ಗುಸನ್, ಯಶ್ ದಯಾಳ್, ಮೊಹಮ್ಮದ್ ಸಿರಾಜ್.

Story first published: Sunday, April 21, 2024, 15:05 [IST]
Other articles published on Apr 21, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+