IPL 2024: ಸಾಲ್ಟ್, ಅಯ್ಯರ್ ಭರ್ಜರಿ ಬ್ಯಾಟಿಂಗ್; ಸುಧಾರಿಸದ ಆರ್‌ಸಿಬಿ ಬೌಲಿಂಗ್; ಬೃಹತ್ ಗುರಿ ನೀಡಿದ ಕೆಕೆಆರ್
ಭಾನುವಾರ, ಏಪ್ರಿಲ್ 21ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 36ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಬೃಹತ್ ಮೊತ್ತ ದಾಖಲಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಫಿಲ್ ಸಾಲ್ಟ್ ಅವರ ಸ್ಫೋಟಕ ಬ್ಯಾಟಿಂಗ್ ಮತ್ತು ಶ್ರೇಯಸ್ ಅಯ್ಯರ್ ಅವರ ಅಮೋಘ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 222 ರನ್ ಗಳಿಸಿದ್ದು, ಆರ್‌ಸಿಬಿ ತಂಡಕ್ಕೆ 223 ರನ್‌ಗಳ ಸವಾಲಿನ ಗುರಿ ನೀಡಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಫಿಲ್ ಸಾಲ್ಟ್ ಮತ್ತು ಸುನಿಲ್ ನರೈನ್ ಸ್ಫೋಟಕ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 4.2 ಓವರ್‌ಗಳಲ್ಲಿ 56 ರನ್‌ಗಳ ಜೊತೆಯಾಟ ನಿರ್ಮಿಸಿದರು. ಈ ವೇಳೆ ಕೇವಲ 14 ಎಸೆತಗಳಲ್ಲಿ 7 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಸಮೇತ 48 ರನ್ ಗಳಿಸಿದ್ದ ಫಿಲ್ ಸಾಲ್ಟ್ ಔಟಾದರು.
ನಂತರ ಬಂದ ಆಂಗ್‌ಕ್ರಿಶ್ ರಘುವಂಶಿ ಕೇವಲ 3 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ಈ ಪಂದ್ಯದಲ್ಲಿ ಅಬ್ಬರಿಸಲು ವಿಫಲರಾದ ಆರಂಭಿಕ ಸುನಿಲ್ ನರೈನ್ 15 ಎಸೆತಗಳಲ್ಲಿ 10 ರನ್ ಗಳಿಸಿ ಪೆವಿಲಿಯನ್ ಸೇರಿದರು.

ಇನ್ನು ವೆಂಕಟೇಶ್ ಅಯ್ಯರ್ 8 ಎಸೆತಗಳಲ್ಲಿ 3 ಬೌಂಡರಿ ಸಮೇತ 16 ರನ್ ಗಳಿಸಿದರೆ, ನಾಯಕ ಶ್ರೇಯಸ್ ಅಯ್ಯರ್ 36 ಎಸೆತಗಳನ್ನು ಎದುರಿಸಿ 7 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 50 ರನ್ ಬಾರಿಸಿ ಈ ಋತುವಿನ ಮೊದಲ ಅರ್ಧಶತಕ ಗಳಿಸಿದರು.
ಕೊನೆಯಲ್ಲಿ ರಿಂಕು ಸಿಂಗ್ 16 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 24 ರನ್ ಗಳಿಸಿದರೆ, ಆಂಡ್ರೆ ರಸೆಲ್ 20 ಎಸೆತಗಳಲ್ಲಿ 4 ಬೌಂಡರಿ ಸಹಾಯದಿಂದ ಅಜೇಯ 27 ರನ್ ಮತ್ತು ರಮಣ್‌ದೀಪ್ ಸಿಂಗ್ 9 ಎಸೆತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್ ಸಮೇತ ಅಜೇಯ 24 ರನ್ ಬಾರಿಸಿದರು.
ಇನ್ನು ಬೌಲಿಂಗ್‌ನಲ್ಲಿ ಆರ್‌ಸಿಬಿ ತಂಡದ ಪರ ಕ್ಯಾಮೆರಾನ್ ಗ್ರೀನ್ 4 ಓವರ್‌ಗಳಲ್ಲಿ 35 ರನ್ ನೀಡಿ 2 ವಿಕೆಟ್ ಪಡೆದರೆ, ಯಶ್ ದಯಾಳ್ 4 ಓವರ್‌ಗಳಲ್ಲಿ 56 ರನ್ ನೀಡಿ 2 ವಿಕೆಟ್ ಕಬಳಿಸಿದರೂ ದುಬಾರಿಯಾದರು. ಉಳಿದಂತೆ ಮೊಹಮ್ಮದ್ ಸಿರಾಜ್ ಮತ್ತು ಲಾಕಿ ಫರ್ಗ್ಯುಸನ್ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications