KKR vs RR IPL 2024: ಟೇಬಲ್ ಟಾಪರ್ ಸ್ಥಾನಕ್ಕಾಗಿ ಹಣಾಹಣಿ; ಟಾಸ್ ವರದಿ, ಆಡುವ 11ರ ಬಳಗ
ಮಂಗಳವಾರ, ಏಪ್ರಿಲ್ 16ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 31ನೇ ಪಂದ್ಯದಲ್ಲಿ ಆತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ತಂಡಗಳು ರೋಚಕ ಕಾಳಗ ನಡೆಸುತ್ತಿವೆ.
ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಮಾಡುವ ನಿರ್ಧಾರ ಮಾಡಿದರು. ಹೀಗಾಗಿ ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದರು ಮತ್ತು ಆವೃತ್ತಿಯ ನಾಲ್ಕನೇ ಗೆಲುವು ಪಡೆದಿದೆ.
ಮತ್ತೊಂದೆಡೆ, ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತನ್ನ ಹಿಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮೂರು ವಿಕೆಟ್‌ಗಳಿಂದ ಸೋಲಿಸಿತು ಮತ್ತು ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ.

ಪ್ರಸ್ತುತ, ಕೆಕೆಆರ್ ತಂಡ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಅಗ್ರಸ್ಥಾನಕ್ಕೇರಲು ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಲು ಉತ್ಸುಕವಾಗಿದೆ. ಐಪಿಎಲ್ 2024ರ ಅಗ್ರ ಎರಡು ತಂಡಗಳು ಪರಸ್ಪರ ವಿರುದ್ಧ ಹಣಾಹಣಿ ನಡೆಸುತ್ತಿರುವ ಕಾರಣ, ಇದು ರೋಚಕ ಪಂದ್ಯಕ್ಕೆ ಸಾಕ್ಷಿಯಾಗಿದೆ.
ಕೆಕೆಆರ್ vs ಆರ್‌ಆರ್ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ಮಾಹಿತಿ
ಐಪಿಎಲ್ 2024ರ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಹೈ-ವೋಲ್ಟೇಜ್ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರವಾಗಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಇರಲಿದೆ.
ಕೆಕೆಆರ್ vs ಆರ್‌ಆರ್ ಆಡುವ 11ರ ಬಳಗ
ಕೋಲ್ಕತ್ತಾ ನೈಟ್ ರೈಡರ್ಸ್: ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಸುನಿಲ್ ನರೈನ್, ಆಂಗ್‌ಕ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ.
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ/ ವಿಕೆಟ್ ಕೀಪರ್), ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಕುಲದೀಪ್ ಸೇನ್, ಯುಜ್ವೇಂದ್ರ ಚಹಾಲ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications