KKR vs RR IPL 2024: ಸುನಿಲ್ ನರೈನ್ ಚೊಚ್ಚಲ ಐಪಿಎಲ್ ಶತಕ; ರಾಜಸ್ಥಾನ್‌ಗೆ ಬೃಹತ್ ಗುರಿ ನೀಡಿದ ಕೋಲ್ಕತ್ತಾ
ಮಂಗಳವಾರ, ಏಪ್ರಿಲ್ 16ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 31ನೇ ಪಂದ್ಯದಲ್ಲಿ ಆತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಬೃಹತ್ ಮೊತ್ತ ಕಲೆಹಾಕಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಸುನಿಲ್ ನರೈನ್ ಅವರ ಭರ್ಜರಿ ಶತಕದ ನೆರವಿನಿಂದ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 223 ರನ್ ಗಳಿಸಿದ್ದು, ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 224 ರನ್‌ಗಳ ಗುರಿ ನೀಡಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ಇನ್ನಿಂಗ್ಸ್ ಆರಂಭಿಸಿದ ಸುನಿಲ್ ನರೈನ್ ಮತ್ತು ಫಿಲ್ ಸಾಲ್ಟ್ ಜೋಡಿ ಮೊದಲ ವಿಕೆಟ್‌ಗೆ 3.3 ಓವರ್‌ಗಳಲ್ಲಿ 21 ರನ್‌ಗಳ ಜೊತೆಯಾಟ ನೀಡಿದರು. ಈ ವೇಳೆ 10 ರನ್ ಗಳಿಸಿದ್ದ ಫಿಲ್ ಸಾಲ್ಟ್ ಔಟಾದರು.
ಸ್ಫೋಟಕ ಆರಂಭಿಕ ಸುನಿಲ್ ನರೈನ್ ಐಪಿಎಲ್‌ನಲ್ಲಿ ತಮ್ಮ ಚೊಚ್ಚಲ ಶತಕ ಬಾರಿಸಿದರು. ಕೇವಲ 56 ಎಸೆತಗಳಲ್ಲಿ 13 ಬೌಂಡರಿ ಹಾಗೂ 6 ಸಿಕ್ಸರ್‌ಗಳ ಸಮೇತ 109 ರನ್ ಬಾರಿಸಿದರು.
ನಂತರ ಬಂದ ಆಂಗ್‌ಕ್ರಿಶ್ ರಘುವಂಶಿ 18 ಎಸೆತಗಳಲ್ಲಿ 5 ಬೌಂಡರಿ ಸಮೇತ 30 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆ ಬಳಿಕ ನಾಯಕ ಶ್ರೇಯಸ್ ಅಯ್ಯರ್ 7 ಎಸೆತಗಳಲ್ಲಿ 11 ರನ್, ಆಂಡ್ರೆ ರಸೆಲ್ 13 ರನ್, ಕೊನೆಯಲ್ಲಿ ರಿಂಕು ಸಿಂಗ್ ಅಜೇಯ 20 ರನ್, ವೆಂಕಟೇಶ್ ಅಯ್ಯರ್ 8 ರನ್ ಗಳಿಸಿ ತಂಡದ ಮೊತ್ತವನ್ನು 220ರ ಗಡಿ ದಾಟಿಸಿದರು.
ಬೌಲಿಂಗ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅವೇಶ್ ಖಾನ್ 4 ಓವರ್‌ಗಳಲ್ಲಿ 35 ರನ್ ನೀಡಿ 2 ವಿಕೆಟ್ ಪಡೆದರೆ, ಕುಲದೀಪ ಸೇನ್ 4 ಓವರ್‌ಗಳಲ್ಲಿ 46 ರನ್ ನೀಡಿ 2 ವಿಕೆಟ್ ಕಬಳಿಸಿದರು. ಉಳಿದಂತೆ ಟ್ರೆಂಟ್ ಬೌಲ್ಟ್ ಮತ್ತು ಯುಜ್ವೇಂದ್ರ ಚಹಾಲ್ ತಲಾ ಒಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications