Final IPL 2024: ಕೆಕೆಆರ್-ಎಸ್‌ಆರ್‌ಹೆಚ್ ನಡುವೆ ಫೈನಲ್ ಹಣಾಹಣಿ; ಟಾಸ್ ವರದಿ, ಆಡುವ 11ರ ಬಳಗ
ಮೇ 26 ಭಾನುವಾರ, ವಿಶ್ವದ ಅತ್ಯಂತ ಶ್ರೀಮಂತ ಫ್ರಾಂಚೈಸಿ ಕ್ರಿಕೆಟ್ ಲೀಗ್‌ಯಾದ ಐಪಿಎಲ್ 2024ರ ಫೈನಲ್ ಪಂದ್ಯದಲ್ಲಿ ಬಲಿಷ್ಠ ತಂಡಗಳಾದ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಸನ್ ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ಮುಖಾಮುಖಿಯಾಗಿವೆ.
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಕೆಕೆಆರ್ ಹಾಗು ಎಸ್‌ಆರ್‌ಹೆಚ್ ನಡುವಿನ ಹೈವೋಲ್ಟೇಜ್ ಪಂದ್ಯ ಆರಂಭವಾಗಿದೆ. ಮೊದಲು ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಶ್ರೇಯಸ್ ಅಯ್ಯರ್ ಮುನ್ನೆಡೆಸುತ್ತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಬೌಲಿಂಗ್ ಮಾಡಲಿದೆ.

ಲೀಗ್ ಹಂತದಲ್ಲಿ ಎರಡು ತಂಡಗಳು ಅದ್ಭುತ ಪ್ರದರ್ಶನ ನೀಡಿವೆ. ಉಭಯ ತಂಡಗಳಲ್ಲಿ ಸ್ಪೋಟಕ ಬ್ಯಾಟರ್‌ಗಳಿದ್ದು, ಬೌಲಿಂಗ್‌ನಲ್ಲಿಯೂ ಬಲ ಪ್ರದರ್ಶನ ಮಾಡಲು ಬೌಲರ್ಸ್ ಸಿದ್ದರಾಗಿದ್ದಾರೆ. ಇಂದಿನ ಫೈನಲ್ ಪಂದ್ಯ ಅಭಿಮಾನಿಗಳಿಗೆ ಕುತೂಹಲ ಹೆಚ್ಚಿಸಿದೆ.
ಕೆಕೆಆರ್ vs ಎಸ್‌ಆರ್‌ಹೆಚ್ ಪಂದ್ಯದ ಟಿವಿ,ಲೈವ್ ಸ್ಟ್ರೀಮಿಂಗ್ ವಿವರ
ಕೋಲ್ಕತ್ತಾ ನೈಟ್ ರೈಡರ್ಸ್ vs ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಆರಂಭವಾಗಿರುವ ಐಪಿಎಲ್ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದು, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಫ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.
ಕೆಕೆಆರ್ vs ಎಸ್‌ಆರ್‌ಹೆಚ್ ಆಡುವ 11ರ ಬಳಗ
ಕೋಲ್ಕತ್ತಾ ನೈಟ್ ರೈಡರ್ಸ್ ತಂಡ: ರಹಮಾನುಲ್ಲಾ ಗುರ್ಬಾಜ್ (ವಿ.ಕೀ), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.
ಸನ್ ರೈಸರ್ಸ್ ಹೈದರಾಬಾದ್ ತಂಡ: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್(ವಿ.ಕೀ), ಶಹಬಾಜ್ ಅಹ್ಮದ್, ಪ್ಯಾಟ್ ಕಮ್ಮಿನ್ಸ್(ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ ನಟರಾಜನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications