KKR vs SRH: ಹ್ಯಾರಿ ಬ್ರೂಕ್ 100, ಐಡೆನ್ ಮಾರ್ಕ್ರಮ್ 50: ಕೊಲ್ಕತ್ತಾಗೆ ಗೆಲ್ಲಲು 229 ರನ್‌ಗಳ ಬೃಹತ್ ಗುರಿ
ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆಯುತ್ತಿರುವ ಕೆಕೆಆರ್ vs ಸನ್‌ರೈಸರ್ಸ್ ಹೈದರಾಬಾದ್ ಪಂದ್ಯದಲ್ಲಿ ಐಡೆನ್ ಮಾರ್ಕ್ರಮ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ಅಮೋಘ ಪ್ರದರ್ಶನ ನೀಡಿದೆ. ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರವಾಗಿ ಆರಂಭಿಕ ಆಟಗಾರ ಹ್ಯಾರಿ ಬ್ರೂಕ್ ಸ್ಪೋಟಕ ಶತಕ ಸಿಡಿಸಿದ್ದಾರೆ. ಈ ಮೂಲಕ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಮೊದಲ ಶತಕ ಸಿಡಿಸಿದ ಆಟಗಾರ ಎನಿಸಿದ್ದಾರೆ.
ಸನ್‌ರೈಸರ್ಸ್ ತಂಡದ ಆಟಗಾರ ಹ್ಯಾರಿ ಬ್ರೂಕ್ ಐಪಿಎಲ್‌ನಲ್ಲಿ ಪರಿಣಾಮಕಾರಿ ಪ್ರದರ್ಶನ ನೀಡುವಲ್ಲಿ ಈವರೆಗೆ ವಿಫಲವಾಗಿದ್ದರು. ಆದರೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ತಮ್ಮ ಸಾಮರ್ಥ್ಯವ್ನು ಪ್ರದರ್ಶಿಸುವಲ್ಲಿ ಅವರು ಸಫಲವಾಗಿದ್ದಾರೆ. ಆರಂಭಿಕನಾಗಿ ಕಣಕ್ಕಿಳಿದು ಅಮೋಘ ಪ್ರದರ್ಶಿಸಿದ ಅವರು 55 ಎಸೆತಗಳನ್ನು ಎದುರಿಸಿದ ಅವರು 12 ಬೌಂಡರಿ ಹಾಗೂ 3 ಸಿಕ್ಸರ್ ಸಿಡಿಸಿದ್ದು 181.82ರ ಸ್ಟ್ರೈಕ್‌ರೇಟ್‌ನಲ್ಲಿ ಭರ್ತಿ 100 ರನ್ ಸಿಡಿಸಿದರು.

ಇನ್ನು ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಐಡೆನ್ ಮಾರ್ಕ್ರಮ್ ಕೂಡ ಅಬ್ಬರಿಸಿದರು. 26 ಎಸೆತಗಳನ್ನು ಎದುರಿಸಿದ ಅವರು 2 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್ ಸಿಡಿಸಿದ್ದು 50 ರನ್‌ಗಳಿಸಿ ಔಟಾದರು. 192.31ರಸ್ಟ್ರೈಕ್‌ರೇಟ್‌ನಲ್ಲಿ ಅವರು ಬ್ಯಾಟ್ ಬೀಸಿದ್ದಾರೆ. ಉಳಿದಂತೆ ಅಭಿಶೇಕ್ ಶರ್ಮಾ 17 ಎಸೆತಗಳಲ್ಲಿ 32 ರನ್ ಸಿಡಿಸಿದ್ದು ಹೆನ್ರಿಕ್ ಕ್ಲಾಸೆನ್ 6 ಎಸೆತಗಳಲ್ಲಿ 16 ರನ್ ಬಾರಿಸಿದರು.
ಸನ್ ರೈಸರ್ಸ್ ಹೈದರಾಬಾದ್ ಆಡುವ ಬಳಗ: ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಐಡನ್ ಮಾರ್ಕ್ರಾಮ್(ನಾಯಕ), ಅಭಿಷೇಕ್ ಶರ್ಮಾ, ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಉಮ್ರಾನ್ ಮಲಿಕ್, ಟಿ ನಟರಾಜನ್
ಬೆಂಚ್: ಆದಿಲ್ ರಶೀದ್, ಅಕೇಲ್ ಹೊಸೈನ್, ಗ್ಲೆನ್ ಫಿಲಿಪ್ಸ್, ಸಮರ್ಥ್ ವ್ಯಾಸ್, ಅನ್ಮೋಲ್ಪ್ರೀತ್ ಸಿಂಗ್, ಮಯಾಂಕ್ ದಾಗರ್, ಉಪೇಂದ್ರ ಯಾದವ್, ಕಾರ್ತಿಕ್ ತ್ಯಾಗಿ, ಸನ್ವಿರ್ ಸಿಂಗ್, ಫಜಲ್ಹಕ್ ಫಾರೂಕಿ, ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ವಿವ್ರಾಂತ್ ಶರ್ಮಾ, ವಾಷಿಂಗ್ಟನ್ ಸುಂದರ್
ಕೋಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ : ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಎನ್ ಜಗದೀಸನ್, ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಸುಯಶ್ ಶರ್ಮಾ, ಲಾಕಿ ಫರ್ಗುಸನ್, ವರುಣ್ ಚಕ್ರವರ್ತಿ
ಬೆಂಚ್: ವೆಂಕಟೇಶ್ ಅಯ್ಯರ್, ಅನುಕೂಲ್ ರಾಯ್, ವೈಭವ್ ಅರೋರಾ, ಡೇವಿಡ್ ವೈಸ್, ಮನದೀಪ್ ಸಿಂಗ್, ಟಿಮ್ ಸೌಥಿ, ಜೇಸನ್ ರಾಯ್, ಲಿಟ್ಟನ್ ದಾಸ್, ಕುಲ್ವಂತ್ ಖೆಜ್ರೋಲಿಯಾ, ಹರ್ಷಿತ್ ರಾಣಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications