ವೈವಾಹಿಕ ಜೀವನಕ್ಕೆ ಕಾಲಿಟ್ಟ ಕೆಎಲ್ ರಾಹುಲ್- ಅಥಿಯಾ ಶೆಟ್ಟಿ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಟೀಮ್ ಇಂಡಿಯಾದ ಕ್ರಿಕೆಟಿಗ ಕೆಎಲ್ ರಾಹುಲ್ ಹಾಗೂ ಬಾಲಿವುಡ್ ನಟಿ ಅಥಿಯಾ ಶೆಟ್ಟಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಾಲಿವುಡ್ ನಟ ಸುನಿಲ್ ಶೆಟ್ಟಿ ಪುತ್ರಿಯಾಗಿರುವ ಅಥಿಯಾ ಶೆಟ್ಟಿ ಜೊತೆಗೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಕೆಎಲ್ ರಾಹುಲ್ ಪ್ರೀತಿಯಲ್ಲಿದ್ದರು. ಇದೀಗ ಪುಣೆಯ ಖಂಡಾಲದಲ್ಲಿರುವ ಸುನಿಲ್ ಶೆಟ್ಟಿ ಅವರ ಫಾರ್ಮ್ ಹೌಸ್‌ನಲ್ಲಿ ಎರಡು ಕುಟಂಬಗಳ ಆಪ್ತರ ಸಮ್ಮುಖದಲ್ಲಿ ಈ ವಿವಾಹ ನಡೆದಿದೆ.
ಸೋಮವಾರ ಸಂಜೆ ಕೆಎಲ್ ರಾಹುಲ್ ಹಾಗೂ ಅಥಿಯಾ ಶೆಟ್ಟಿ ಇಬ್ಬರು ಕೂಡ ತಮ್ಮ ಸಮಾಜಿಕ ಜಾಲತಾಣಗಳ ಖಾತೆಯಲ್ಲಿ ಮದುವೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. "ಇಂದು ನಮ್ಮ ಪ್ರೀತಿ ಪಾತ್ರ ಸಮ್ಮುಖದಲ್ಲಿ ನಮ್ಮ ಮನೆಯಲ್ಲಿಯೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದೇವೆ. ಈ ದಾಂಪತ್ಯ ಜೀವನಕ್ಕೆ ನಿಮ್ಮೆಲ್ಲರ ಹಾರೈಕೆಗಳನ್ನು ಕೋಡುತ್ತಿದ್ದೇವೆ" ಎಂದು ಆಥಿಯಾ ಶೆಟ್ಟಿ ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಕೆಎಲ್ ರಾಹುಲ್ ಫೋಟೊ ಹಂಚಿಕೊಂಡು "ನಿನ್ನ ಬೆಳಕಿನಲ್ಲಿ ಹೇಗೆ ಪ್ರೀತಿಸಬೇಕೆಂಬುದನ್ನು ಕಲಿತಿದ್ದೇನೆ. ಇಂದು ನಮ್ಮ ಅತ್ಯಂತ ಪ್ರೀತಿ ಪಾತ್ರರ ಸಮ್ಮುಖದಲ್ಲಿ ಅತ್ಯಂತ ಸಂತಸ ಹಾಗೂ ನೆಮ್ಮದಿ ನೀಡುವ ಮನೆಯಲ್ಲಿ ವಿವಾಹವಾಗಿದ್ದೇವೆ. ಕೃತಜ್ಞತೆ ಮತ್ತು ಪ್ರೀತಿಯಿಂದ ತುಂಬಿದ ಹೃದಯದಿಂದ ಈ ದಾಂಪತ್ಯ ಜೀವನಕ್ಕೆ ನಿಮ್ಮ ಆಶೀರ್ವಾದವನ್ನು ಬಯಸುತ್ತೇವೆ" ಎಂದು ಬರೆದುಕೊಂಡಿದ್ದಾರೆ.
ಬಹಳ ಸಮಯಗಳಿಂದ ಈ ಜೋಡಿಯ ವಿವಾಹದ ಬಗ್ಗೆ ಸಾಕಷ್ಟು ವಿಚಾರಗಳು ಸುದ್ದಿಯಾಗಿತ್ತಿತ್ತು. ಆದರೆ ಈ ಬಗ್ಗೆ ಯಾವುದೇ ಖಚಿತ ಮಾಹಿತಿ ಲಭ್ಯವಾಗಿರಲಿಲ್ಲ. ಆದರೆ ಕಳೆದ ಕೆಲ ತಿಮಗಳ ಹಿಂದೆ ಅತಿಯಾ ಶೆಟ್ಟಿ ತಂದೆ ಸುನಿಲ್ ಶೆಟ್ಟಿ ಕೆಎಲ್ ರಾಹುಲ್ ಹಾಗೂ ಅಥಿಯಾ ಶೆಟ್ಟಿ ವಿವಾಹವಾಗಲಿರುವ ಬಗ್ಗೆ ಅಧಿಕರತವಾಗಿ ಹೇಳಿಕೆ ನೀಡಿದ್ದರು. ಇದೀಗ ಎರಡು ಕುಟುಂಬಗಳ ಆಪ್ತರ ಸಮ್ಮುಖದಲ್ಲಿ ವಿವಾಹ ನೆರವೇರಿದೆ.
ಮೂಲಗಳ ಮಾಹಿತಿಯ ಪ್ರಕಾರ ಈ ಮದುವೆ ಕಾರ್ಯಕ್ರಮಕ್ಕೆ ಅತಿಥಿಗಳಿಗೆ ಫೋನ್ ಬಳಸದಂತೆ ತಿಳಿಸಲಾಗಿತ್ತು. ಅಲ್ಲದೆ ವಿವಾಹದ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳದಂತೆ ಅತಿಥಿಗಳಲ್ಲಿ ಮನವಿ ಮಾಡಿಕೊಳ್ಳಲಾಗಿತ್ತು. ಮದುವೆಗೂ ಮುನ್ನಾದಿನ ಪಾಪಾರಾಜಿಗಳ ಜೊತೆಗೆ ಮಾತನಾಡಿದ್ದ ಸುನಿಲ್ ಶೆಟ್ಟಿ ಮದುವೆಯ ಕಾರ್ಯಕ್ರಮದ ಬಳಿಕ ನವವಿವಾಹಿತ ಜೋಡಿಯ ಫೋಟೋಗೆ ಅವಕಾಶ ನೀಡುವುದಾಗಿ ತಿಳಿಸಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications