Champions Trophy 2025: ಈ ಆಟಗಾರರು ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕೆ, ಇಂಗ್ಲೆಂಡ್ ವಿರುದ್ಧ ವಿಶ್ರಾಂತಿ
ಟೀಮ್ ಇಂಡಿಯಾ ಸದ್ಯ ಆಸ್ಟ್ರೇಲಿಯಾ ಪ್ರವಾಸವನ್ನು ಮುಗಿಸಿದೆ. ಈ ಸರಣಿಯ ಬಳಿಕ ಟೀಮ್ ಇಂಡಿಯಾದ ಆಟಗಾರರು ಮುಂದಿನ ಸರಣಿಯ ಮೇಲೆ ಕಣ್ಣು ನೆಟ್ಟಿದ್ದಾರೆ. ಸ್ಟಾರ್ ಆಟಗಾರರು ವಿಶ್ರಾಂತಿಯ ಮೊರೆ ಹೋಗಿದ್ದರೆ, ಇನ್ನು ಕೆಲವು ಆಟಗಾರರು ಭಾರತದಲ್ಲಿ ನಡೆಯುತ್ತಿರುವ ದೇಶೀಯ ಟೂರ್ನಿಯಲ್ಲಿ ಭಾಗವಹಿಸುತ್ತಿದ್ದಾರೆ. ಈ ಮೂಲಕ ತಮ್ಮನ್ನು ತಾವು ಫಿಟ್ ಆಗಿ ಇರಿಸಿಕೊಳ್ಳಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ.
ಇದೇ ಜನವರಿ 22 ರಿಂದ ಭಾರತ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಹಾಗೂ ಏಕದಿನ ಸರಣಿಗಳನ್ನು ಆಡಲಿದೆ. ಈ ಸರಣಿಗೆ ತಂಡವನ್ನು ಪ್ರಕಟಿಸ ಬೇಕಿದೆ. ಈ ನಿಟ್ಟಿನಲ್ಲಿ ಯಾವ ಆಟಗಾರನಿಗೆ ಈ ತಂಡದಲ್ಲಿ ಸ್ಥಾನ ಲಭಿಸುತ್ತದೆ ಎಂಬ ಲೆಕ್ಕಾಚಾರವನ್ನು ಆರಂಭಿಸಿದ್ದಾರೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಮೊದಲು 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಬಳಿಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಈ ವೇಳೆ ಯಾವೆಲ್ಲಾ ಹಿರಿಯ ಆಟಗಾರರಿಗೆ ಅವಕಾಶ ಸಿಗುತ್ತದೆ ಎಂಬ ಪ್ರಶ್ನೆ ಮೂಡಿದೆ.

ಇವರಿಗೆ ವಿಶ್ರಾಂತಿ ಸಾಧ್ಯತೆ?
ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಏಕದಿನ ಸರಣಿಗೆ ಭಾರತ ಹಲವು ಆಟಗಾರರಿಗೆ ಆಡುವ ತಂಡದಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ. ಇನ್ನು ಆಸ್ಟ್ರೇಲಿಯಾ ಪ್ರವಾಸದಲ್ಲಿ ಆಡಿ ಸೈ ಎನಿಸಿಕೊಂಡ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ಟೀಮ್ ಇಂಡಿಯಾ ತನ್ನ ಕೆಲವು ಸ್ಟಾರ್ ಅಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.
ಆಸ್ಟ್ರೇಲಿಯಾ ಪ್ರವಾಸದಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದ ವಿರಾಟ್ ಕೊಹ್ಲಿ ಅವರು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಮೈದಾನಕ್ಕೆ ಇಳಿಯುವುದು ಡೌಟ್. ಇನ್ನು ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ತಂಡದ ಭರವಸೆ ಉಳಿಸಿದ್ದ ಕೆಎಲ್ ರಾಹುಲ್ ಸಹ ನೇರವಾಗಿ ಚಾಂಪಿಯನ್ಸ್ ಟ್ರೋಫಿ ತಂಡದಲ್ಲೇ ಸ್ಥಾನ ಪಡೆಯಬಹುದು.

ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಆರಂಭವಾಗಲಿದೆ. ಈ ಟ್ರೋಫಿಯನ್ನು ಈ ಬಾರಿ ಪಾಕಿಸ್ತಾನ ಆಯೋಜಿಸುತ್ತಿದೆ. ಆದರೆ ಭಾರತ ಪಾಕಿಸ್ತಾನ ಪ್ರವಾಸ ಬೆಳೆಸುತ್ತಿಲ್ಲ. ಹೀಗಾಗಿ ಟೀಮ್ ಇಂಡಿಯಾದ ಪಂದ್ಯಗಳೆಲ್ಲಾ ದುಬೈನಲ್ಲಿ ನಡೆಯಲಿವೆ. ಈ ಟೂರ್ನಿಗೆ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ತಂಡವನ್ನು ಸೇರುವ ಸಾಧ್ಯತೆ ಇದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಣ ಟಿ20 ಸರಣಿ
ಮೊದಲ ಪಂದ್ಯ, ಜ.22, ಕೋಲ್ಕತ್ತಾ
ಎರಡನೇ ಪಂದ್ಯ, ಜ.25, ಚೆನ್ನೈ,
ಮೂರನೇ ಪಂದ್ಯ, ಜ.28, ರಾಜಕೋಟ್,
ನಾಲ್ಕನೇ ಪಂದ್ಯ, ಜ.31, ಪುಣೆ,
ಐದನೇ ಪಂದ್ಯ, ಫೆ.2, ಮುಂಬೈ
ಭಾರತ ಇಂಗ್ಲೆಂಡ್ ನಡುವಣ ಏಕದಿನ ಸರಣಿಯ ವೇಳಾ ಪಟ್ಟಿ
ಮೊದ ಪಂದ್ಯ, ಫೆ.6, ನಾಗ್ಪುರ್,
ಎರಡನೇ ಪಂದ್ಯ, ಫೆ.9, ಕಟಕ್,
ಮೂರನೇ ಪಂದ್ಯ, ಜ.12, ಅಹಮದಾಬಾದ್,
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications