For Quick Alerts
ALLOW NOTIFICATIONS  
For Daily Alerts
 

ವಿರಾಟ್‌ ದಾಖಲೆ ಅಳಿಸಿದ ಕನ್ನಡಿಗ ಕೆಎಲ್ ರಾಹುಲ್‌

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಏಕದಿನ ಪಂದ್ಯ ವಡೋದರಾದಲ್ಲಿ ನಡೆದಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಸಂಘಟಿತ ಆಟದ ಪ್ರದರ್ಶನ ನೀಡಿ ಜಯ ಸಾಧಿಸಿತು. ಭಾನುವಾರ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ 4 ವಿಕೆಟ್‌ಗಳ ಜಯ ದಾಖಲಿಸಿತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಭರವಸೆಯ ಬ್ಯಾಟರ್‌ ಕೆಎಲ್ ರಾಹುಲ್‌ ಅಜೇಯ 29 ರನ್‌ ಬಾರಿಸಿ ಜಯದಲ್ಲಿ ಮಿಂಚಿದರು. ಈ ಚಿಕ್ಕ ಇನಿಂಗ್ಸ್‌ ಮೂಲಕ ರಾಹುಲ್‌, ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಮುರಿದಿದ್ದಾರೆ.

ಭಾರತದ ಪರ ಪದಾರ್ಪಣೆ ಮಾಡಿದಾಗಿನಿಂದಲೂ ತಂಡದ ಪರ ಹಲವು ಪಾತ್ರಗಳನ್ನು ವಹಿಸಿದ್ದಾರೆ. ಆರಂಭಿಕರಾಗಿ ಕಣಕ್ಕೆ ಇಳಿದು ಸೈ ಎನಿಸಿಕೊಂಡಿದ್ದರು. ಬಳಿಕ ನಾಲ್ಕನೇ ಕ್ರಮಾಂಕದಲ್ಲೂ ಬ್ಯಾಟ್ ಮಾಡಿದ್ದರು. ಈಗ ವಿಕೆಟ್‌ ಕೀಪರ್ ಪ್ಲಸ್‌ ಫಿನಿಷರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಅವರು ಟೀಮ್ ಇಂಡಿಯಾಗೆ ಜಯದ ಮಾಲೆ ತೊಡಿಸಿದರು.

KL Rahul Breaks Virat Kohli s Record as India Beats New Zealand in Vadodara ODI Chase

ಮೊದಲ ಏಕದಿನ ಪಂದ್ಯದಲ್ಲಿ ರಾಹುಲ್‌ ಆರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿ 21 ಎಸೆತಗಳಲ್ಲಿ 2 ಬೌಂಡರಿ, 1 ಸಿಕ್ಸರ್‌ ನೆರವಿನಿಂದ ಅಜೇಯ 29 ರನ್‌ ಬಾರಿಸಿದರು. ಈ ಪಂದ್ಯದಲ್ಲಿ ಸಿಕ್ಸರ್ ಬಾರಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟ ರಾಹುಲ್‌ ದೊಡ್ಡ ದಾಖಲೆಯನ್ನು ಬರೆದರು. ಈ ಮೂಲಕ ರಾಹುಲ್‌, ವಿರಾಟ್‌ ಕೊಹ್ಲಿ ದಾಖಲೆಯನ್ನು ಮೀರಿ ನಿಂತರು.

ಧೋನಿಗೆ ಅಗ್ರ ಸ್ಥಾನ

ಭಾರತದ ಪರ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ ಸಿಕ್ಸರ್ ಬಾರಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ಅಗ್ರ ಸ್ಥಾನ. ಇವರು ಏಕದಿನ ಕ್ರಿಕೆಟ್‌ನಲ್ಲಿ ಒಟ್ಟು 9 ಬಾರಿ ಸಿಕ್ಸರ್‌ ಬಾರಿಸುವುದರೊಂದಿಗೆ ಗೆಲುವು ದಾಖಲಿಸಿದ್ದರು. ಈ ಪಟ್ಟಿಯಲ್ಲಿ ಈಗ ಕೆಎಲ್ ರಾಹುಲ್‌ ಎರಡನೇ ಸ್ಥಾನದಲ್ಲಿದ್ದಾರೆ. ರಾಹುಲ್‌ ಆರು ಬಾರಿ ಸಿಕ್ಸರ್ ಬಾರಿಸಿ ತಂಡವನ್ನು ಗೆಲುವಿನ ದಡ ದಾಟಿಸಿದ್ದಾರೆ. ಈ ಲೆಕ್ಕಾಚಾರದಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಇವರು ಐದು ಬಾರಿ ಸಿಕ್ಸರ್ ಬಾರಿಸಿ ತಂಡಕ್ಕೆ ಗೆಲುವಿನ ಮಾಲೆ ತೊಡಿಸಿದ್ದಾರೆ.

ಟೀಮ್ ಇಂಡಿಯಾ ಸಾಧನೆ

ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ, ನ್ಯೂಜಿಲೆಂಡ್ ನೀಡಿದ್ದ 300ಕ್ಕೂ ಹೆಚ್ಚು ರನ್‌ಗಳ ಗುರಿಯನ್ನು ಅತಿ ಹೆಚ್ಚು ಬಾರಿ ಯಶಸ್ವಿಯಾಗಿ ಬೆನ್ನಟ್ಟಿದ ದಾಖಲೆ ಬರೆದಿದೆ. ಏಕದಿನ ಕ್ರಿಕೆಟ್‌ನಲ್ಲಿ 20 ಬಾರಿ 300ಕ್ಕೂ ಹೆಚ್ಚು ರನ್‌ಗಳ ಗುರಿಯನ್ನು ಬೆನ್ನಟ್ಟಿದೆ. ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಇಂಗ್ಲೆಂಡ್‌ ಎರಡನೇ ಸ್ಥಾನದಲ್ಲಿದ್ದು, 15 ಬಾರಿ ಈ ಸಾಧನೆ ಮಾಡಿದೆ. ಆಸ್ಟ್ರೇಲಿಯಾ 14, ಪಾಕಿಸ್ತಾನ 12, ನ್ಯೂಜಿಲೆಂಡ್‌ 11 ಬಾರಿ ಈ ಸಾಧನೆ ಮಾಡಿದೆ.

Story first published: Monday, January 12, 2026, 20:50 [IST]
Other articles published on Jan 12, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+