ಇನ್ನು ಈತನಿಗೆ ಭಾರತ ಟೆಸ್ಟ್ ತಂಡದಲ್ಲಿ ಉಳಿಗಾಲವಿಲ್ಲ ಎಂದ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್

ಟೀಂ ಇಂಡಿಯಾ ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ 3 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಸರಣಿಯನ್ನು 2-0 ಅಂತರದಲ್ಲಿ ವಶಪಡಿಸಿಕೊಂಡಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿಯನ್ನು ಸುಲಭವಾಗಿಸಿಕೊಂಡಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ಸರಣಿಯಲ್ಲಿ ತಂಡವನ್ನು ಮುನ್ನಡೆಸಿದ್ದರು.
ಆದರೆ, ಬಾಂಗ್ಲಾದೇಶದ ವಿರುದ್ಧದ ಸರಣಿಯಲ್ಲಿ ಹಲವು ಆಟಗಾರರು ಕಳಪೆ ಪ್ರದರ್ಶನ ನೀಡುವ ಮೂಲಕ ಸಾಕಷ್ಟು ಟೀಕೆಗೆ ಗುರಿಯಾದರು. ಅದರಲ್ಲೂ ತಂಡದ ನಾಯಕತ್ವ ವಹಿಸಿಕೊಂಡಿದ್ದ ಕೆಎಲ್ ರಾಹುಲ್ ಬ್ಯಾಟಿಂಗ್‌ನಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದಾರೆ.
ಕೆಎಲ್ ರಾಹುಲ್ ಬಗ್ಗೆ ಮಾತನಾಡಿರುವ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್, ಮುಂದಿನ ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್ ಪ್ಲೇಯಿಂಗ್ XIನಲ್ಲಿ ಇರುವುದಿಲ್ಲ ಎಂದು ಹೇಳಿದ್ದಾರೆ. ಕೆಎಲ್ ರಾಹುಲ್ ಬದಲಿಗೆ ಶುಭಮನ್ ಗಿಲ್ ತಂಡದಲ್ಲಿ ಆಡಲಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಮುಂಬರುವ ನಾಲ್ಕು ಪಂದ್ಯಗಳ ತವರು ಟೆಸ್ಟ್ ಸರಣಿಯಲ್ಲಿ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಶುಭಮನ್ ಗಿಲ್ ಇನ್ನಿಂಗ್ಸ್ ತೆರೆಯಬಹುದು ಎಂದು ಭಾರತದ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಭವಿಷ್ಯ ನುಡಿದಿದ್ದಾರೆ.

ರಾಹುಲ್ ತಂಡದಿಂದ ಹೊರಗುಳಿಯಲಿದ್ದಾರೆ
"ನನ್ನ ಅಭಿಪ್ರಾಯದಲ್ಲಿ ಕೆಎಲ್ ರಾಹುಲ್ ಯಾವುದೇ ಅನುಮಾನವಿಲ್ಲದೇ ತಂಡದಿಂದ ಹೊರಹೋಗಬೇಕು. ಅವರು ಬ್ಯಾಟರ್ ಆಗಿ ಕೆಟ್ಟ ಸರಣಿಯನ್ನು ಹೊಂದಿದ್ದರು. ರೋಹಿತ್ ಶರ್ಮಾ ತಂಡಕ್ಕೆ ವಾಪಸಾದ ನಂತರ ಕೆಎಲ್ ರಾಹುಲ್ ಸ್ಥಾನವನ್ನು ಬಿಟ್ಟುಕೊಡಬೇಕು" ಎಂದು ಜಾಫರ್ ಹೇಳಿದರು.
ಬಾಂಗ್ಲಾದೇಶದ ವಿರುದ್ಧದ ಎರಡು ಟೆಸ್ಟ್‌ಗಳಲ್ಲಿ ರಾಹುಲ್ 22 ಮತ್ತು 23 ಮತ್ತು 10 ಮತ್ತು ಎರಡು ರನ್ ಗಳಿಸಿದರು. 2022 ರಲ್ಲಿ ಕೆಎಲ್ ರಾಹುಲ್ ನಾಲ್ಕು ಟೆಸ್ಟ್‌ಗಳಲ್ಲಿ 17.13 ರ ಸರಾಸರಿಯಲ್ಲಿ 137 ರನ್ ಗಳಿಸಿದರು.
IND Vs BAN 2nd Test : ಅಶ್ವಿನ್-ಅಯ್ಯರ್ ಅಮೋಘ ಜೊತೆಯಾಟ, ಭಾರತಕ್ಕೆ 3 ವಿಕೆಟ್‌ಗಳ ರೋಚಕ ಜಯ

ಶುಭಮನ್ ಗಿಲ್ ಉತ್ತಮ ಪ್ರದರ್ಶನ
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡದಲ್ಲಿ ಅವಕಾಶ ಪಡೆದ ಶುಭಮನ್ ಗಿಲ್ ಬಾಂಗ್ಲಾದೇಶದ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದರು. ಚಟ್ಟೋಗ್ರಾಮ್‌ನಲ್ಲಿ ನಡೆದ ಸರಣಿಯ ಮೊದಲನೇ ಟೆಸ್ಟ್‌ನಲ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ ಶುಭಮನ್ ಗಿಲ್ ಚೊಚ್ಚಲ ಶತಕ ದಾಖಲಿಸಿದರು.
ಆದರೆ, ಎರಡನೇ ಟೆಸ್ಟ್‌ನಲ್ಲಿ ಎರಡು ಇನ್ನಿಂಗ್ಸ್‌ಗಳಲ್ಲಿ ಕೇವಲ 27 ರನ್ ಗಳಿಸಿದರು. ಕೆಎಲ್ ರಾಹುಲ್ ಸತತವಾಗಿ ವಿಫಲವಾಗುತ್ತಿರುವುದು, ಶುಭಮನ್ ಗಿಲ್ ಉತ್ತಮ ರನ್ ಗಳಿಸುತ್ತಿರುವುದರಿಂದ ರಾಹುಲ್ ಬದಲಾಗಿ ಶುಭಮನ್ ಗಿಲ್‌ಗೆ ಮುಂದಿನ ದಿನಗಳಲ್ಲಿ ಅವಕಾಶ ಸಿಗುವ ಸಾಧ್ಯತೆ ಇದೆ.

ರಕ್ಷಣಾತ್ಮಕವಾಗಿ ಆಡುವ ಅಗತ್ಯವಿಲ್ಲ
ಬಾಂಗ್ಲಾದೇಶದ ವಿರುದ್ಧದ ಎರಡನೇ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ 145 ರನ್‌ಗಳನ್ನು ಬೆನ್ನಟ್ಟಿದ ಭಾರತ ತಂಡ ರಕ್ಷಣಾತ್ಮಕ ಆಟವಾಡಲು ಹೋಗಿ ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು.
ಮೂರನೇ ದಿನದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡ ಆರಂಭದಲ್ಲೇ ಆಘಾತ ಅನುಭವಿಸಿತು. ಶುಭಮನ್ ಗಿಲ್ ಮತ್ತು ರಾಹುಲ್ ರನ್ ಗಳಿಸುವ ಉದ್ದೇಶವನ್ನೇ ತೋರಲಿಲ್ಲ, ಅಂತಿಮವಾಗಿ ಇಬ್ಬರೂ ವಿಕೆಟ್ ಒಪ್ಪಿಸುವ ಮೂಲಕ ತಂಡವನ್ನು ಇಕ್ಕಟ್ಟಿಗೆ ಸಿಲುಕಿಸಿದರು. ಭಾರತದ ಈ ಬ್ಯಾಟಿಂಗ್ ವಿಧಾನದ ಬಗ್ಗೆ ವಾಸಿಂ ಜಾಫರ್ ಬೇಸರ ವ್ಯಕ್ತಪಡಿಸಿದ್ದಾರೆ.
145 ರನ್‌ಗಳ ಗುರಿಯನ್ನು ಬೆನ್ನತ್ತಿದಾ ಭಾರತ ಅಷ್ಟೊಂದು ರಕ್ಷಣಾತ್ಮಕವಾಗಿ ಆಡುವ ಅಗತ್ಯವಿರಲಿಲ್ಲ. ಬೌಂಡರಿಗಳನ್ನು ಗಳಿಸಿದ್ದರೆ ಎದುರಾಳಿಗಳ ಮೇಲೆ ಒತ್ತಡ ಬೀಳುತ್ತಿತ್ತು, ಸುಲಭವಾಗಿ ರನ್ ಗಳಿಸಬಹುದಾಗಿತ್ತು ಎಂದು ಹೇಳಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications