KL Rahul: ಟೀಮ್ ಇಂಡಿಯಾಕ್ಕೆ ಗುಡ್ ನ್ಯೂಸ್: ಕನ್ನಡಿಗ ಮೊದಲ ಟೆಸ್ಟ್ ಆಡುವುದು ಫಿಕ್ಸ್!
ಇನ್ನೇನು ಕೆಲವೇ ದಿನಗಳಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್ ಗವಾಸ್ಕರ್ ಸರಣಿ ನಡೆಯಲಿದೆ. ಈ ಸರಣಿಯಲ್ಲಿ ಭಾಗವಹಿಸಲು ಟೀಮ್ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸ ಬೆಳೆಸಲಿದೆ. ಈ ಸರಣಿಯಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಟೀಮ್ ಇಂಡಿಯಾ ಶ್ರಮ ವಹಿಸುತ್ತಿದೆ. ಟೀಮ್ ಇಂಡಿಯಾದ ಮ್ಯಾನೇಜ್ಮೆಂಟ್‌ಗೆ ಒಂದು ತಲೆನೋವಾಗಿ ಕಾಡುತ್ತಿದೆ. ಗಾಯ ಭಾರತದ ಆಟಗಾರರನ್ನು ಬಹುವಾಗಿ ಕಾಡುತ್ತಿದೆ. ಗಾಯಕ್ಕೆ ತುತ್ತಾಗಿರುವ ಆಟಗಾರರು ಮೊದಲ ಟೆಸ್ಟ್ ಪಂದ್ಯವನ್ನು ಆಡುವುದು ಡೌಟ್ ಎನ್ನಲಾಗುತ್ತಿದೆ.
ಟೀಮ್ ಇಂಡಿಯಾದಲ್ಲಿ ಶುಭಮನ್ ಗಿಲ್, ಕೆಎಲ್ ರಾಹುಲ್ ಮತ್ತು ಸರ್ಫರಾಜ್ ಖಾನ್ ಗಾಯಕ್ಕೆ ತುತ್ತಾಗಿದ್ದಾರೆ. ಆದರೆ ಈಗ ಈ ಮೂವರಲ್ಲಿ ಒಬ್ಬರು ಫಿಟ್ ಆಗಿದ್ದಾರೆ ಎಂಬ ಮಾಹಿತಿ ತಿಳಿದು ಬರುತ್ತಿದೆ. ಈ ಮೂವರು ಆಟಗಾರರಲ್ಲಿ ಒಬ್ಬರು ಪೂರ್ಣ ಫಿಟ್ ಆಗಿದ್ದಾರೆ. ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾದ ಭರವಸೆಯ ಆಟಗಾರ ಮೈದಾನಕ್ಕೆ ಇಳಿಯುವುದು ಕನ್ಫರ್ಮ್ ಆಗಿದೆ.

ರಾಹುಲ್ ಫಿಟ್..
ಟೀಮ್ ಇಂಡಿಯಾಗೆ ಈ ಸರಣಿ ಮಹತ್ವದಾಗಿದೆ. ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದ್ದೇ ಆದಲ್ಲಿ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ತಲುಪಲು ಸಹಾಯಕವಾಗುತ್ತದೆ. ತವರಿನಲ್ಲಿ ಟೀಮ್ ಇಂಡಿಯಾ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್ ಸೋಲು ಕಂಡ ಹಿನ್ನೆಲೆ, ಆಸ್ಟ್ರೇಲಿಯಾ ವಿರುದ್ಧ ನಾಲ್ಕು ಪಂದ್ಯ ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ.
ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯ ಪರ್ತ್‌ನಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಆಡುವುದು ಡೌಟ್. ಇವರು ಕೌಟುಂಬಿಕ ಕಾರಣಗಳಿಂದ ಮೊದಲ ಟೆಸ್ಟ್‌ನಲ್ಲಿ ಭಾಗುವಹಿಸುವುದಿಲ್ಲ. ಹೀಗಾಗಿ ಟೀಮ್ ಇಂಡಿಯಾ ಇನ್ನೊಬ್ಬ ಆರಂಭಿಕ ಆಟಗಾರನ ಹುಡುಕಾಟದಲ್ಲಿದೆ.

ಟೀಮ್ ಇಂಡಿಯಾ ಪರ ಇನಿಂಗ್ಸ್ ಆರಂಭಿಸುವ ಹೊಣೆಯನ್ನು ಕೆಎಲ್ ರಾಹುಲ್ ಹೊತ್ತುಕೊಳ್ಳುವ ಸಾಧ್ಯತೆ ಇದೆ. ಆದರೆ ಅವರು ಅಭ್ಯಾಸದ ವೇಳೆ ಗಾಯಕ್ಕೆ ತುತ್ತಾಗಿದ್ದು, ಮೊದಲ ಟೆಸ್ಟ್‌ನಲ್ಲಿ ಆಡುವುದು ಡೌಟ್ ಎಂದು ಹೇಳಲಾಗುತ್ತಿತ್ತು. ಆದರೆ ಈಗ ಬರುತ್ತಿರುವ ಮಾಹಿತಿಯ ಪ್ರಕಾರ ಕೆಎಲ್ ರಾಹುಲ್ ಫಿಟ್ ಆಗಿದ್ದು ಮೊದಲ ಪಂದ್ಯದಲ್ಲಿ ಆಡುವುದು ಕನ್ಫರ್ಮ್ ಎಂದು ಹೇಳಾಲಾಗುತ್ತಿದೆ.
ರೋಹಿತ್ ಶರ್ಮಾ ನವೆಂಬರ್ 15 ರ ರಾತ್ರಿ ಎರಡನೇ ಬಾರಿಗೆ ತಂದೆಯಾದರು. ಅವರ ಪತ್ನಿ ರಿತಿಕಾ ಸಜ್ದೇ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಮಯದಲ್ಲಿ ರೋಹಿತ್ ಶರ್ಮಾ ಅವರು ತಮ್ಮ ಕುಟುಂಬದೊಂದಿಗೆ ಇದ್ದಾರೆ. ರೋಹಿತ್ ಶರ್ಮಾ ಪರ್ತ್ ಟೆಸ್ಟ್ ನಿಂದ ಹೊರಗುಳಿಯಬಹುದು ಎಂದು ಹೇಳಲಾಗುತ್ತಿದೆ.
ಇಂತಹ ಪರಿಸ್ಥಿತಿಯಲ್ಲಿ ರೋಹಿತ್ ಶರ್ಮಾ ಬದಲಿಗೆ ಕೆಎಲ್ ರಾಹುಲ್ ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿಯಬಹುದು. ಟೀಮ್ ಇಂಡಿಯಾ ಪರ ಈಗಾಗಲೇ ಇನಿಂಗ್ಸ್ ಆರಂಭಿಸಿದ್ದು, ಇವರು ಮತ್ತೊಮ್ಮೆ ಯಶಸ್ವಿ ಜೈಸ್ವಾಲ್ ಪರ ಕಣಕ್ಕೆ ಇಳಿಯಬಹುದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications