KL Rahul: ವಿಜಯ್ ಹಜಾರೆ ಟ್ರೋಫಿ ಸಂಭಾವ್ಯ ತಂಡದಲ್ಲಿ ಕೆಎಲ್ ರಾಹುಲ್‌ಗೆ ಸ್ಥಾನ
ಭಾರತ ಸದ್ಯ ಆಸ್ಟ್ರೇಲಿಯಾ ಪ್ರವಾಸದಲ್ಲಿದೆ. ಈ ವೇಳೆ ಟೀಮ್ ಇಂಡಿಯಾ, ಆತಿಥೇಯ ತಂಡದ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಪಂದ್ಯವನ್ನು ಆಡುತ್ತಿದೆ. ಈ ಸರಣಿಯ ಫಲಿತಾಂಶ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಮೇಲೆ ನೇರ ಪರಿಣಾಮ ಬೀರಲಿದೆ. ಹೀಗಾಗಿ ಈ ಸರಣಿ ಉಭಯ ತಂಡಗಳಿಗೂ ಮಹತ್ವದಾಗಿದೆ. ಇನ್ನು ಟೀಮ್ ಇಂಡಿಯಾ ಮೂರನೇ ಟೆಸ್ಟ್‌ಗೆ ತಯಾರಿ ನಡೆಸಿದೆ. ಈ ವೇಳೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರನೊಬ್ಬ ಒಂದು ತಂಡದಲ್ಲಿ ಸ್ಥಾನ ಪಡೆದಿದ್ದಾನೆ. ಆ ಆಟಗಾರ ಯಾರು? ಅವರು ಸೇರಿದ ತಂಡ ಯಾವುದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಸದ್ಯ ದೇಶೀಯ ಟೂರ್ನಿಗಳು ನಡೆಯುತ್ತಿವೆ. ಈ ವೇಳೆ ಕರ್ನಾಟಕ ತಂಡ ಸಹ ರಣಜಿ ಹಾಗೂ ಸೈಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಿತ್ತು. ಈಗ ವಿಜಯ್ ಹಜಾರೆ ಏಕದಿನ ಸರಣಿಗೆ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ವಿಜಯ್ ಹಜಾರೆ ಸಂಭಾವ್ಯ ತಂಡವನ್ನು ಪ್ರಕಟಿಸಲಾಗಿದೆ. ಪ್ರಕಟಿತ ಸಂಭಾವ್ಯ ತಂಡದಲ್ಲಿ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಕರ್ನಾಟಕದ ಮೂವರು ಆಟಗಾರರು ಸ್ಥಾನ ಪಡೆದಿದ್ದಾರೆ.

ಆಸೀಸ್ ಸರಣಿಯಲ್ಲಿ ಆಡಿದವರಿಗೆ ಅವಕಾಶ
ಕರ್ನಾಟಕ ತನ್ನ 32 ಸದಸ್ಯರ ಸಂಭಾವ್ಯ ತಂಡವನ್ನು ಮಂಗಳವಾರ ಬಿಡುಗಡೆ ಮಾಡಿದೆ. ಈ ತಂಡದಲ್ಲಿ ಸ್ಟಾರ್ ಆಟಗಾರರಾದ ಕೆಎಲ್ ರಾಹುಲ್ ಸ್ಥಾನ ಪಡೆದಿದ್ದಾರೆ. ಅಲ್ಲದೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಸ್ಥಾನ ಪಡೆದಿರುವ ಪ್ರಸಿದ್ಧ ಕೃಷ್ಣ, ದೇವದತ್ ಪಡಿಕ್ಕಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ರಾಹುಲ್ ಸದ್ಯ ಟೀಮ್ ಇಂಡಿಯಾದ ಭಾಗವಾಗಿದ್ದಾರೆ. ಪ್ರಸಿದ್ಧ ಕೃಷ್ಣ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಇನ್ನು ದೇವದತ್ ಪಡಿಕ್ಕಲ್ ಪರ್ತ್‌ನಲ್ಲಿ ನಡೆದ ಪಂದ್ಯದಲ್ಲಿ ಮೈದಾನಕ್ಕೆ ಇಳಿದಿದ್ದರು.
ಸ್ಟಾರ್ ಆಟಗಾರನಿಗೆ ಅವಕಾಶ ಮಿಸ್
ಪ್ರಕಟಿತ ಸಂಭಾವ್ಯ ತಂಡದಲ್ಲಿ ಕರ್ನಾಟಕದ ಸ್ಟಾರ್ ಆಟಗಾರನಿಗೆ ಸ್ಥಾನ ನೀಡಲಾಗಿಲ್ಲ. ಈ ಮೊದಲು ಹಲವು ಟೂರ್ನಿಗಳಲ್ಲಿ ರಾಜ್ಯ ತಂಡವನ್ನು ಮುನ್ನಡೆಸಿದ್ದ ಮನೀಷ್ ಪಾಂಡೆ ಅವರನ್ನು ಕೈ ಬಿಡಲಾಗಿದೆ. ಇವರು 2007ರಿಂದ ಕರ್ನಾಟಕ ತಂಡದ ಪರ ಯೋಗದಾನ ನೀಡಿದ್ದರು. ಆದರೆ ಇವರನ್ನು ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಬದಲಿಗೆ ರಣಜಿ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿರುವ ಹಲವು ಯುವ ಆಟಗಾರರಿಗೆ ಸ್ಥಾನ ನೀಡಲಾಗಿದೆ.
ವಿಜಯ್ ಹಜಾರೆ ಟ್ರೋಫಿಗೆ ಸಂಭಾವ್ಯ ಕರ್ನಾಟಕ ತಂಡ: ಕೆ.ಎಲ್.ರಾಹುಲ್, ಮಯಾಂಕ್ ಅಗರ್ವಾಲ್, ಪ್ರಸಿದ್ಧ್ ಕೃಷ್ಣ, ದೇವದತ್ ಪಡಿಕ್ಕಲ್, ಎಲ್.ಆರ್.ಚೇತನ್, ಮೆಕ್ನೀಲ್ ನೊರೊನ್ಹಾ, ಶ್ರೇಯಸ್ ಗೋಪಾಲ್, ಕೆ.ಎಲ್.ಶ್ರೀಜಿತ್, ಅಭಿನವ್ ಮನೋಹರ್, ಮನೋಜ್ ಭಾಂಡಗೆ, ಹಾರ್ದಿಕ್ ರಾಜ್, ವಿ.ಕೌಶಿಕ್, ವಿದ್ಯಾಧರ್ ಪಾಟೀಲ್, ಶುಭಾಂಗ್ ಹೆಗ್ಡೆ, ಮೊಹ್ಲಾಷ್ ಶೆಟ್ಟಿ, ಆರ್. ಸ್ಮರಣ್, ಲವ್ನಿತ್ ಸಿಸೋಡಿಯಾ, ವಿ. ವೈಶಾಖ್, ಮನ್ವಂತ್ ಕುಮಾರ್, ಯಶೋವರ್ಧನ್ ಪರಂತಪ್, ಪ್ರವೀಣ್ ದುಬೆ, ಎಂ.ವೆಂಕಟೇಶ್, ನಿಕಿನ್. ಜೋಸ್, ಕೆ.ವಿ ಅನೀಶ್, ಕೆ. ಶಶಿಕುಮಾರ್, ಪಾರಸ್ ಗುರ್ಬಕ್ಸ್ ಆರ್ಯ, ಶಿಖರ್ ಶೆಟ್ಟಿ, ಕಿಶನ್ ಬೇಡರೆ, ಹರ್ಷಿಲ್ ಧರ್ಮನಿ, ವಿದಾವತ್ ಕವರಪ್ಪ, ಕೃತಿಕ್ ಕೃಷ್ಣ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications