ಪಂಜಾಬ್ ಕಿಂಗ್ಸ್ ನಾಯಕ ಕೆಎಲ್ ರಾಹುಲ್ ಆಸ್ಪತ್ರೆಗೆ ದಾಖಲು

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಪಂಜಾಬ್ ಕಿಂಗ್ಸ್ ನಾಯಕರಾಗಿರುವ ಕನ್ನಡಿಗ ಕೆಎಲ್ ರಾಹುಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರುಳುವಾಳಕ್ಕೆ (ಅಪೆಂಡಿಸಿಟಿಸ್) ತುತ್ತಾಗಿರುವ ರಾಹುಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶೀಘ್ರ ಶಸ್ತ್ರ ಚಿಕಿತ್ಸೆಗೂ ಒಳಗಾಗಲಿದ್ದಾರೆ. ಈ ಸೀಸನ್‌ನಲ್ಲಿ ಗೆಲುವಿನ ಲಯಕ್ಕೆ ಬಂದಿರುವ ಪಂಜಾಬ್‌ಗೆ ರಾಹುಲ್ ಅಸ್ವಸ್ಥ್ಯ ಹಿನ್ನಡೆಯ ಸಂಗತಿಯಾಗಿ ಕಾಣಿಸಿದೆ.
ಕಳೆದ ರಾತ್ರಿ ಅಂದರೆ ಮೇ 1ರಂದು ಕೆಎಲ್ ರಾಹುಲ್‌ಗೆ ಕಿಬ್ಬೊಟ್ಟೆ ಭಾಗದಲ್ಲಿ ನೋವಿನ ಅನುಭವವಾಗಿತ್ತು. ಔಷಧಿಗೆ ಸ್ಪಂದಿಸದಿದ್ದಾಗ ಬಯೋ ಬಬಲ್ ಒಳಗಿದ್ದ ತುರ್ತು ಚಿಕಿತ್ಸಾ ವಿಭಾಗಕ್ಕೆ ಅವರನ್ನು ಕರೆದೊಯ್ದು ಪರಿಶೀಲಿಸಲಾಗಿತ್ತು. ಆಗ ಅವರಿಗೆ ಅಪೆಂಡಿಸಿಟಿಸ್ ಇರುವುದು ಪತ್ತೆಯಾಗಿದೆ.
ಶಸ್ತ್ರ ಚಿಕಿತ್ಸೆಗೆ ದಾಖಲು
ರಾಹುಲ್ ಅವರು ಆಸ್ಪತ್ರೆಗೆ ದಾಖಲಾಗಿರುವ ಸಂಗತಿಯನ್ನು ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಭಾನುವಾರ (ಮೇ 2) ಹೇಳಿದೆ. ರಾಹುಲ್ ಅವರನ್ನು ಮುನ್ನೆಚ್ಚರಿಕೆಯೊಂದಿಗೆ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಂಜಾಬ್ ಟ್ವೀಟ್ ಮೂಲಕ ತಿಳಿಸಿದೆ.

ಸ್ಫೋಟಕ ಬ್ಯಾಟಿಂಗ್ ನೀಡಿದ್ದ ರಾಹುಲ್
ಹೊಟ್ಟೆ ಭಾಗದಲ್ಲಿ ನೋವು ಕಾಣಿಸಿಕೊಳ್ಳುವುದಕ್ಕೂ ಮುನ್ನ ಅಂದರೆ ಏಪ್ರಿಲ್ 30ರಂದು ಐಪಿಎಲ್ 26ನೇ ಪಂದ್ಯದಲ್ಲಿ ರಾಹುಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೇವಲ 57 ಎಸೆತಗಳಲ್ಲಿ 91 ರನ್ ಕೊಡುಗೆ ನೀಡಿದ್ದರು. ಈ ಪಂದ್ಯದಲ್ಲಿ ಪಂಜಾಬ್ 34 ರನ್‌ಗಳಿಂದ ಗೆದ್ದಿತ್ತು.

ಪ್ರಮುಖ ಪಂದ್ಯಕ್ಕೆ ಹಿನ್ನಡೆ
ಪಂಜಾಬ್ ಕಿಂಗ್ಸ್ ತಂಡ ಆಡಿರುವ 7 ಪಂದ್ಯಗಳಲ್ಲಿ 3ರಲ್ಲಿ ಗೆದ್ದು ಸದ್ಯ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಮೇ 2ರಂದು ಅಹ್ಮದಾಬಾದ್‌ನಲ್ಲಿ ನಡೆಯಲಿರುವ 29ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕೂ ಮುನ್ನ ಪಂಜಾಬ್‌ಗೆ ಹಿನ್ನಡೆಯ ಸಂಗತಿ ಕೇಳಿ ಬಂದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications