ನವೆಂಬರ್ 14 ರಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡವುಣ ಟೆಸ್ಟ್ ಸರಣಿ ಕೋಲ್ಕತ್ತಾದಲ್ಲಿ ನಡೆಯಲಿದೆ. ಈ ಟೆಸ್ಟ್ ಸರಣಿಯಲ್ಲಿ ಉಭಯ ತಂಡಗಳು ನಡುವಣ 2 ಪಂದ್ಯಗಳು ನಡೆಯಲಿವೆ. ಈ ಸರಣಿಯಲ್ಲಿ ಉಭಯ ತಂಡಗಳ ಸ್ಟಾರ್ ಆಟಗಾರರು ಕಣಕ್ಕೆ ಇಳಿಯಲಿದೆ. ಟೀಮ್ ಇಂಡಿಯಾದ ಪರ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಟಗರ ಕೆಎಲ್ ರಾಹುಲ್ ಕಣಕ್ಕೆ ಇಳಿಯಲಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ರಾಹುಲ್ ಅಮೋಘ ಫಾರ್ಮ್‌ನಲ್ಲಿದ್ದಾರೆ. ಇವರ ಈ ಫಾರ್ಮ್ ಎದುರಾಳಿಗಳಿಗೆ ಕಂಠಕವಾಗಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್ ಅಂಗಳಕ್ಕೆ ಇಳಿಯಲಿದ್ದಾರೆ. ಈ ವೇಳೆ ಇವರ ಕಣ್ಣುಗಳು ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ದಾಖಲೆಯ ಮೇಲೆ ನೆಟ್ಟಿವೆ. ಈ ವೇಳೆ ಸ್ಥಿರ ಪ್ರದರ್ಶನ ನೀಡಿ ತಂಡಕ್ಕೆ ನೆರವಾಗುವ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ರಾಹುಲ್ ಇಂಗ್ಲೆಂಡ್ ಪ್ರವಾಸದಲ್ಲಿ ಅಬ್ಬರದ ಪ್ರದರ್ಶನ ನೀಡಿ ಆರಂಭಿಕ ಸ್ಲಾಟ್ ಫಿಕ್ಸ್ ಮಾಡಿಕೊಂಡಿದ್ದರು. ರಾಹುಲ್ ಈ ಸರಣಿಯಲ್ಲಿ 500ಕ್ಕೂ ಹೆಚ್ಚು ರನ್ ಬಾರಿಸಿ ಆರ್ಭಟಿಸಿದ್ದರು.

ಈ ಹಿಂದೆ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಶತಕ ಬಾರಿಸಿದ್ದ ರಾಹುಲ್, ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲೂ ಇದೇ ಪ್ರದರ್ಶನ ನೀಡುವ ವಿಶ್ವಾಸ ಹೊಂದಿದ್ದಾರೆ. ಈ ಸರಣಿಯಲ್ಲಿ ರಾಹುಲ್ 2 ಶತಕ ಬಾರಿಸುವಲ್ಲಿ ಯಶಸ್ವಿಯಾದರೆ, ದೊಡ್ಡ ದಾಖಲೆಯನ್ನು ಬರೆಯಲಿದ್ದಾರೆ. ಟೀಮ್ ಇಂಡಿಯಾದ ಮಾಜಿ ನಾಯಕರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರ ಸಾಧನೆಯನ್ನು ಅಳಿಸಿ ಹಾಕಲಿದ್ದಾರೆ. ಇವರಿಬ್ಬರೂ ದಕ್ಷಿಣ ಆಫ್ರಿಕಾ ವಿರುದ್ಧ ತಲಾ 3 ಶತಕಗವನ್ನು ಬಾರಿಸಿದ್ದಾರೆ.
ರಾಹುಲ್ ದಕ್ಷಿಣ ಆಫ್ರಿಕಾ ವಿರುದ್ಧ ಈಗಾಗಲೇ ಟೆಸ್ಟ್‌ನಲ್ಲಿ 2 ಶತಕ ಬಾರಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಅತಿ ಹೆಚ್ಚು ಶತಕವನ್ನು ಬಾರಿಸಿದ ಹೆಗ್ಗಳಿಕೆ ಟೀಮ್ ಇಂಡಿಯಾದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಅವರಿಗೆ ಸಲ್ಲುತ್ತದೆ. ಇವರು ದಕ್ಷಿಣ ಆಫ್ರಿಕಾ ವಿರುದ್ಧ 7 ಶತಕಗಳನ್ನು ಸಿಡಿಸಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ವೀರೇಂದ್ರ ಸೆಹ್ವಾಗ್ 2ನೇ ಸ್ಥಾನದಲ್ಲಿದ್ದು, ಇವರ ಬುಟ್ಟಿಯಲ್ಲಿ 5 ಶತಕಗಳು ಇವೆ. ಟೀಮ್ ಇಂಡಿಯಾದ ಮಾಜಿ ನಾಯಕ ಮೊಹಮ್ಮದ್ ಅಜರುದ್ಧಿನ್ ಸಹ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, ಇವರು 4 ಶತಕ ಬಾರಿಸಿದ್ದಾರೆ.
ಕೆಎಲ್ ರಾಹುಲ್ ದಕ್ಷಿಣ ಆಫ್ರಿಕಾವ ವಿರುದ್ಧ ಸಾಧಾರಣ ಪ್ರದರ್ಶನ ನೀಡಿದ್ದಾರೆ. ಇವರು ದಕ್ಷಿಣ ಆಫ್ರಿಕಾ 13 ಇನಿಂಗ್ಸ್ ಗಳಲ್ಲಿ 369 ರನ್ ಗಳಿಸಿದ್ದಾರೆ. ಈ ವೇಳೆ ಇವರ ಸರಾಸರಿ 28.38 ಆಗಿದೆ. ಇನ್ನು ಇದೇ ಸರಣಿಯಲ್ಲಿ ರಾಹುಲ್ ದಕ್ಷಿಣ ಆಫ್ರಿಕಾ ವಿರುದ್ಧ 41 ರನ್ ಬಾರಿಸುವಲ್ಲಿ ಯಶಸ್ವಿಯಾದರೆ, ಟೀಮ್ ಇಂಡಿಯಾ ಕೋಚ್ ಸಾಧನೆಯನ್ನು ಮೀರಿ ನಿಲ್ಲಬಹುದು. ಗಂಭೀರ್ ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ 10 ಪಂದ್ಯಗಳಲ್ಲಿ 409 ರನ್ ಗಳಿಸಿದ್ದಾರೆ.