ಕರ್ನಾಟಕದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆಡುತ್ತಿದ್ದಾರೆ. ಸೋಮವಾರ ಹೈದರಾಬಾದ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಸನ್‌ರೈಸರ್ಸ್ ಹೈದರಾಬಾದ್ ತಂಡದ ಸವಾಲು ಎದುರಿಸಲಿದೆ. ಈ ವೇಳೆ ಕೆಎಲ್ ರಾಹುಲ್ ದೊಡ್ಡ ದಾಖಲೆಯನ್ನು ಬರೆಯುವ ಹೊಸ್ತಿಲಲ್ಲಿ ನಿಂತಿದ್ದಾರೆ. ಹಾಗಿದ್ದರೆ ಅವರು ಬರೆಯಲಿರುವ ದಾಖಲೆ ಏನು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಬ್ಯಾಟ್ ಮಾಡುತ್ತಿರುವ ಕೆಎಲ್ ರಾಹುಲ್ ಅಮೋಘ ಬ್ಯಾಟಿಂಗ್ ನಡೆಡುತ್ತಿದ್ದಾರೆ. ಇವರು ಪ್ರಸಕ್ತ ಐಪಿಎಲ್‌ನಲ್ಲಿ ಕ್ಲಾಸಿಕ್ ಫಾರ್ಮ್‌ನಲ್ಲಿದ್ದಾರೆ. ಇದೇ ಫಾರ್ಮ್‌ನ್ನು ಇವರು ಸನ್ ತಂಡದ ವಿರುದ್ಧವೂ ಮುಂದುವರೆಸಿದ್ದೇ ಆದಲ್ಲಿ ದೊಡ್ಡ ದಾಖಲೆಯನ್ನು ನಿರ್ಮಿಸುವ ದಾಖಲೆಯನ್ನು ಹೊಂದಿದ್ದಾರೆ. ಈ ಪಂದ್ಯದಲ್ಲಿ ಇವರು 43 ರನ್ ಬಾರಿಸಿದ್ದೇ ಆದಲ್ಲಿ, ಚೇಸಿಂಗ್ ಸ್ಟಾರ್ ಖ್ಯಾತಿಯ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಅಳಿಸಿ ಹಾಕಬಹುದು.

ಈಗಾಗಲೇ ಐಪಿಎಲ್‌ನಲ್ಲಿ ಹಲವು ದಾಖಲೆಗಳನ್ನು ಹೊಂದಿರುವ ಕೆಎಲ್ ರಾಹುಲ್ ಈಗ ಮತ್ತೊಂದು ದಾಖಲೆಯನ್ನು ನಿರ್ಮಿಸಲಿದ್ದಾರೆ. ಸದ್ಯ ಐಪಿಎಲ್‌ನಲ್ಲಿ ಕೆಎಲ್ ರಾಹುಲ್ ಇದುವರೆಗೆ 132 ಇನ್ನಿಂಗ್ಸ್‌ಗಳಲ್ಲಿ 5054 ರನ್ ಗಳಿಸಿದ್ದಾರೆ. ಇವರು ಡೆಲ್ಲಿ ತಂಡದ ಪರ ಎಲ್‌ಎಸ್‌ಜಿ, ಪಂಜಾಬ್ ಕಿಂಗ್ಸ್, ಆರ್‌ಸಿಬಿ ಮತ್ತು ಹೈದರಾಬಾದ್ ಪರ ಆಡಿದ್ದಾರೆ. ರಾಹುಲ್ ಟಿ20 ಕ್ರಿಕೆಟ್‌ನಲ್ಲಿ 8 ಸಾವಿರ ರನ್‌ಗಳನ್ನು ಪೂರ್ಣಗೊಳಿಸುವ ಸನಿಹದಲ್ಲಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ರಾಹುಲ್ ಇದುವರೆಗೆ 222 ಇನ್ನಿಂಗ್ಸ್‌ಗಳಲ್ಲಿ 7957 ರನ್ ಗಳಿಸಿದ್ದು, ಇನ್ನೂ 43 ರನ್ ಸಿಡಿಸಿದ್ದೇ ಆದಲ್ಲಿ ದೊಡ್ಡ ದಾಖಲೆಯನ್ನು ನಿರ್ಮಿಸಬಹುದಾಗಿದೆ.
ಕೆಎಲ್ ರಾಹುಲ್ ಈ ದಾಖಲೆಯನ್ನು ಸನ್ ವಿರುದ್ಧದ ಪಂದ್ಯದಲ್ಲಿ ನಿರ್ಮಿಸಿದ್ದೇ ಆದಲ್ಲಿ ಟಿ20 ಕ್ರಿಕೆಟ್‌ನಲ್ಲಿ 8 ಸಾವಿರ ರನ್‌ಗಳನ್ನು ವೇಗವಾಗಿ ಕಲೆ ಹಾಕಿದ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಇನ್ನು ವಿಶ್ವ ಕ್ರಿಕೆಟ್‌ನಲ್ಲಿ ಈ ದಾಖಲೆಯನ್ನು ಕ್ರಿಸ್ ಗೇಲ್ ಮಾಡಿದ್ದರು. ಇವರು 213 ಇನಿಂಗ್ಸ್‌ಗಳಲ್ಲೇ ಈ ದಾಖಲೆ ನಿರ್ಮಿಸಿದ್ದರು. ಇವರ ನಂತರದ ಸ್ಥಾನದಲ್ಲಿ ಪಾಕ್ ತಂಡದ ಬಾಬರ್ ಅಜಮ್ ಇದ್ದಾರೆ. ಇವರು 218 ಇನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಸದ್ಯ ಮೂರನೇ ಸ್ಥಾನದಲ್ಲಿದ್ದಾರೆ. ಚೇಸಿಂಗ್ ಸ್ಟಾರ್ 243 ಇನಿಂಗ್ಸ್‌ಗಳಲ್ಲಿ 8 ಸಾವಿರ ರನ್ ಕಲೆ ಹಾಕಿದ್ದಾರೆ. ಕೆಎಲ್ ರಾಹುಲ್ ಸನ್ ವಿರುದ್ಧ ಪಂದ್ಯದಲ್ಲಿ ಈ ಸಾಧನೆಯನ್ನು ಮಾಡಿದ್ದೇ ಆದಲ್ಲಿ ದೊಡ್ಡ ಮೈಲುಗಲ್ಲು ತಲುಪು ಬಹುದು.
ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಕಳೆದ ಆವೃತ್ತಿಯಲ್ಲಿ ಆಡಿದ್ದ ಕೆಎಲ್ ರಾಹುಲ್ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿದ್ದಾರೆ. ಇವರು ಆಡಿದ 9 ಪಂದ್ಯಗಳಲ್ಲಿ 53ರ ಸರಾಸರಿಯಲ್ಲಿ 254 ರನ್ ಸಿಡಿಸಿದ್ದಾರೆ. ಇದರಲ್ಲಿ 3 ಅರ್ಧಶತಕಗಳು ಸಹ ಸೇರಿವೆ.