Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

KL Rahul: 'ಕೆಎಲ್ ರಾಹುಲ್ ಕೆರಿಯರ್ ಹಾಳು ಮಾಡಬೇಡಿ'; ಗಂಭೀರ್ ವಿರುದ್ಧ ಫ್ಯಾನ್ಸ್ ಗರಂ

ಟೀಮ್ ಇಂಡಿಯಾದ ಹೆಡ್‌ ಕೋಚ್ ಗೌತಮ್ ಗಂಭೀರ್ ವಿರುದ್ಧ ಕೆಎಲ್ ರಾಹುಲ್ ಅಭಿಮಾನಿಗಳು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೆಎಲ್ ರಾಹುಲ್ ತಂಡದಲ್ಲಿ ತಮ್ಮ ಸ್ಥಾನಕ್ಕಾಗಿ ನಿರಂತರವಾಗಿ ಹೋರಾಡುತ್ತಿದ್ದಾರೆ. ಇದಾದ ನಂತರ ರಾಹುಲ್ ಅವರ ಅಭಿಮಾನಿಗಳು ಗೌತಮ್ ಗಂಭೀರ್ ಮೇಲೆ ಕೋಪಗೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಅವರ ವೃತ್ತಿಜೀವನವನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.

ಭಾರತ ತಂಡಕ್ಕೆ ಪ್ರವೇಶಿಸಿ 10 ವರ್ಷಗಳು ಕಳೆದರೂ ಕೆಎಲ್ ರಾಹುಲ್ ಶಾಶ್ವತ ಸ್ಥಾನ ಪಡೆಯಲು ಕಷ್ಟಪಡುತ್ತಿದ್ದಾರೆ. ರಾಹುಲ್ ಚೆನ್ನಾಗಿ ಆಡುತ್ತಿದ್ದಾರೆ, ಆದರೆ ಅವಕಾಶ ಸಿಕ್ಕಾಗಲೆಲ್ಲಾ ವಿಫಲರಾಗುತ್ತಾರೆ. ಇದಕ್ಕೆ ಕಾರಣ ಬ್ಯಾಟಿಂಗ್ ಕ್ರಮಾಂಕದಲ್ಲಿನ ನಿರಂತರ ಬದಲಾವಣೆ. ರಾಹುಲ್ ಆರಂಭಿಕ ಬ್ಯಾಟರ್ ಆಗಿ ಮತ್ತು ಐದನೇ ಕ್ರಮಾಂಕದಲ್ಲಿ ಉತ್ತಮ ದಾಖಲೆಯನ್ನು ಹೊಂದಿದ್ದಾರೆ. ಆದರೆ ಕ್ರಿಕೆಟ್ ತಜ್ಞರು ಅವರ ನಿಲುವನ್ನು ಬದಲಾಯಿಸುವುದರಿಂದ ಅವರ ಆತ್ಮವಿಶ್ವಾಸ ಕಡಿಮೆಯಾಗುತ್ತಿದೆ ಎಂದು ಅಭಿಪ್ರಾ ವ್ಯಕ್ತಪಡಿಸಿದ್ದಾರೆ.

KL Rahul fans are expressing their anger against Gautam Gambhir

ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಭಾರತ ಮತ್ತು ಇಂಗ್ಲೆಂಡ್ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದೆ. ಎರಡು ಪಂದ್ಯಗಳು ಈಗಾಗಲೇ ಮುಗಿದಿದ್ದು, ಒಂದು ಪಂದ್ಯ ಬಾಕಿ ಇರುವಂತೆಯೇ ಭಾರತ ಸರಣಿಯನ್ನು ಗೆದ್ದುಕೊಂಡಿದೆ. ಆದರೆ ಈ ಎರಡೂ ಪಂದ್ಯಗಳಲ್ಲಿ ರಾಹುಲ್ ನಿರೀಕ್ಷೆಯಂತೆ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದ ರಾಹುಲ್ ಮೊದಲ ಎರಡು ಪಂದ್ಯಗಳಲ್ಲಿ ಕ್ರಮವಾಗಿ 2 ಮತ್ತು 10 ರನ್‌ಗಳಿಗೆ ಔಟಾದರು.

ಗಂಭೀರ್ ವಿರುದ್ಧ ಆಕ್ರೋಶ

ರಾಹುಲ್ ಅವರ ನಿರಂತರ ವೈಫಲ್ಯಕ್ಕೆ ಕೋಚ್ ಗಂಭೀರ್ ಅವರೇ ಕಾರಣ ಎಂದು ಅಭಿಮಾನಿಗಳು ಆರೋಪಿಸಿದ್ದಾರೆ. ರಾಹುಲ್ ಅವರ ಬ್ಯಾಟಿಂಗ್ ಕ್ರಮಾಂಕವನ್ನು ಉದ್ದೇಶಪೂರ್ವಕವಾಗಿ ಬದಲಾಯಿಸಲಾಗುತ್ತಿದೆ. ಇದರೊಂದಿಗೆ ಅವರು ಅವರ ಕ್ರಿಕೆಟ್ ವೃತ್ತಿಜೀವನವನ್ನು ಕೊನೆಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ರಾಹುಲ್ ಅವರನ್ನು ಪರಿಚಯವಿಲ್ಲದ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲು ಕಳುಹಿಸುವ ಮೂಲಕ ಅವರನ್ನು ತಂಡದಿಂದ ಹೊರಗಿಡುವ ಪಿತೂರಿ ಇದೆ. ರಾಹುಲ್ ಅವರನ್ನು ಮೂರ್ಖರನ್ನಾಗಿ ಮಾಡಲಾಗುತ್ತಿದೆ ಎಂದು ಅಭಿಮಾನಿಗಳಿ ದೂರಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಗಂಭೀರ್ ಅವರನ್ನು ಗುರಿಯಾಗಿಸಿಕೊಂಡು ಟ್ರೋಲ್ ಮಾಡಲಾಗುತ್ತಿದೆ.

ಮಾಜಿ ಕ್ರಿಕೆಟಿಗರಿಂದ ಟೀಕೆ

ಮತ್ತೊಂದೆಡೆ, ಮಾಜಿ ಕ್ರಿಕೆಟಿಗರು ಕೂಡ ಗಂಭೀರ್ ಅವರ ನಡೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ದೊಡ್ಡ ಗಣೇಶ್, ಕೃಷ್ಣಮಾಚಾರಿ ಶ್ರೀಕಾಂತ್ ಮತ್ತು ಜಹೀರ್ ಖಾನ್ ಗಂಭೀರ್ ನಿರ್ಧಾರವನ್ನು ಪ್ರಶ್ನಿಸಿದ್ದಾರೆ. ಐದನೇ ಸ್ಥಾನದಲ್ಲಿರುವ ರಾಹುಲ್ ಅವರ ದಾಖಲೆ ಅತ್ಯುತ್ತಮವಾಗಿದ್ದರೂ ಅವರನ್ನು ಈ ರೀತಿ ನಡೆಸಿಕೊಳ್ಳುವುದು ತಪ್ಪು ಎಂದು ಹೇಳಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ರಿಷಬ್ ಪಂತ್ ಬದಲಿಗೆ ಕೆಎಲ್ ರಾಹುಲ್ ವಿಕೆಟ್‌ಕೀಪರ್ ಮತ್ತು ಬ್ಯಾಟರ್ ಆಗಿ ಆಡಲಿದ್ದಾರೆ. ಈ ಮೆಗಾ ಟೂರ್ನಿಯಲ್ಲಿ ಕೆಎಲ್ ರಾಹುಲ್ ಅವರ ಪಾತ್ರ ಪ್ರಮುಖವಾಗಿದೆ. ಮಧ್ಯಮ ಕ್ರಮಾಂಕ ಬ್ಯಾಟಿಂಗ್ ವಿಭಾಗದ ಜವಾಬ್ದಾರಿಯನ್ನು ಹೊತ್ತಿಕೊಂಡಿದ್ದಾರೆ. ಹೀಗಾಗಿ ಅವರ ಪ್ರದರ್ಶನದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

Story first published: Wednesday, February 12, 2025, 8:01 [IST]
Other articles published on Feb 12, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+