ಆರಂಭಿಕನಾಗಿ ವಿರಾಟ್ ಕೊಹ್ಲಿ ಮಾಡದ ಸಾಧನೆ ಮಾಡಿದ ಕೆಎಲ್ ರಾಹುಲ್
ಇಂಡಿಯನ್ ಪ್ರೀಮಿಯರ್ ಲೀಗ್‌ನ 19 ನೇ ಋತುವಿನಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಶುಕ್ರವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಾಹುಲ್ ಕಮಾಲ್ ಬ್ಯಾಟಿಂಗ್ ಪ್ರದರ್ಶನ ನೀಡಿದರು. ರಾಜಸ್ಥಾನ ರಾಯಲ್ಸ್ ನೀಡಿದ್ದ 226 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಪರ ರಾಹುಲ್ ಅವರ 40 ಎಸೆತಗಳಲ್ಲಿ 75 ರನ್ ಸಿಡಿಸಿ ತಂಡದ ಜಯದಲ್ಲಿ ಮಿಂಚಿದರು. ಈ ಅಮೋಘ ಇನಿಂಗ್ಸ್‌ನಲ್ಲಿ ಕೆಎಲ್ ರಾಹುಲ್ 6 ಬೌಂಡರಿ, 5 ಸಿಕ್ಸರ್ ಬಾರಿಸಿ ಈ ಮೂಲಕ ಕ್ಲಾಸಿಕ್ ಇನಿಂಗ್ಸ್ ಮೂಲಕ ರಾಹುಲ್ ದೊಡ್ಡ ದಾಖಲೆಯನ್ನು ಬರೆದರು.
ಶುಕ್ರವಾರ ನಡೆದ ಪಂದ್ಯದಲ್ಲಿ ರಾಹುಲ್ ಐದು ಸಿಕ್ಸರ್ ಬಾರಿಸಿದರು. ಈ ಮೂಲಕ ದೊಡ್ಡ ಮೈಲಿಗಲ್ಲು ಮುಟ್ಟಿದರು. ಐಪಿಎಲ್‌ನಲ್ಲಿ ಆರಂಭಿಕರಾಗಿ 200 ಸಿಕ್ಸರ್‌ಗಳನ್ನು ಸಿಡಿಸಿದ ಹೆಗ್ಗಳಿಕೆ ತಮ್ಮದಾಗಿಸಿಕೊಂಡರು. ಈ ಮೂಲಕ ಈ ಲೀಗ್‌ನಲ್ಲಿ 200ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಐಪಿಎಲ್‌ನಲ್ಲಿ ಆರಂಭಿಕಾಗಿ ಕಣಕ್ಕೆ ಇಳಿದು ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಕೀರ್ತಿ ವೆಸ್ಟ್ ಇಂಡೀಸ್ ತಂಡದ ದೈತ್ಯ ಆಟಗಾರ ಕ್ರಿಸ್ ಗೇಲ್ ಅವರಿಗೆ ಸಲ್ಲುತ್ತದೆ. ಗೇಲ್ ಆರಂಭಿಕರಾಗಿ 326 ಸಿಕ್ಸರ್ ಸಿಡಿಸಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ಎರಡನೇ ಸ್ಥಾನದಲ್ಲಿದ್ದಾರೆ. ಇವರು 210 ಸಿಕ್ಸರ್ ಸಿಡಿಸಿದ್ದಾರೆ. ಈಗ ಮೂರನೇ ಸ್ಥಾನದಲ್ಲಿ ರಾಹುಲ್ ಕಾಣಿಸಿಕೊಂಡಿದ್ದಾರೆ.
ರಾಹುಲ್ ಐಪಿಎಲ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಆಗಿ 112 ಪಂದ್ಯಗಳನ್ನು ಆಡಿದ್ದಾರೆ, ಆರು ಶತಕಗಳು ಮತ್ತು 39 ಅರ್ಧಶತಕಗಳು ಸೇರಿದಂತೆ 50.01 ಸರಾಸರಿಯಲ್ಲಿ 4851 ರನ್ ಗಳಿಸಿದ್ದಾರೆ ಮತ್ತು 203 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.
ಐಪಿಎಲ್‌ನಲ್ಲಿ ಆರಂಭಿಕ ಆಟಗಾರನಾಗಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್ಸ್
ಕ್ರಿಸ್ ಗೇಲ್ - 326 ಸಿಕ್ಸರ್
ಡೇವಿಡ್ ವಾರ್ನರ್ - 210 ಸಿಕ್ಸರ್
ಕೆಎಲ್ ರಾಹುಲ್ - 203 ಸಿಕ್ಸರ್
ವಿರಾಟ್ ಕೊಹ್ಲಿ - 192 ಸಿಕ್ಸರ್
ಫಾಫ್ ಡು ಪ್ಲೆಸಿಸ್ - 159 ಸಿಕ್ಸರ್
ಮತ್ತೊಂದು ದಾಖಲೆ ಮೇಲೆ ಕೆಎಲ್ ಕಣ್ಣು
ಕೆಎಲ್ ರಾಹುಲ್ ಐಪಿಎಲ್‌ನಲ್ಲಿ ಅಮೋಘ ಬ್ಯಾಟಿಂಗ್ ನಡೆಸುತ್ತಿರುವ ಆಟಗಾರ. ಇವರು ಐಪಿಎಲ್‌ನಲ್ಲಿ ಮತ್ತೊಂದು ದೊಡ್ಡ ಮೈಲಿಗಲ್ಲು ಮುಟ್ಟಲು 149 ರನ್‌ಗಳ ಅವಶ್ಯಕತೆ ಇದೆ. ಇವರು ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆರಂಭಿಕರಾಗಿ 5 ಸಾವಿರ ರನ್ ಕಲೆ ಹಾಕುವ ಸನಿಹದಲ್ಲಿದ್ದಾರೆ. ಈ ಸಾಧನೆಯನ್ನು ರಾಹುಲ್ ಮಾಡಿದ್ದೇ ಆದಲ್ಲಿ, ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೂರನೇ ಭಾರತೀಯ ಆರಂಭಿಕ ಆಟಗಾರ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಳ್ಳಲಿದ್ದಾರೆ. ಇವರಿಗಿಂತ ಮೊದಲು, ಈ ಸಾಧನೆಯನ್ನು ಶಿಖರ್ ಧವನ್ ಮತ್ತು ವಿರಾಟ್ ಕೊಹ್ಲಿ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications