
ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆಎಲ್ ರಾಹುಲ್ ಭಾರತೀಯ ಆಟಗಾರರ ಪೈಕಿ ಟಿ20 ಕ್ರಿಕೆಟ್‌ನಲ್ಲಿ ಮಹತ್ವದ ದಾಖಲೆಯಿಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಸನ್‌ರೈಸರ್ಸ್ ವಿರುದ್ಧದ ಪಂದ್ಯದಲ್ಲಿ ಕೆಎಲ್ ರಾಹುಲ್ ಐಪಿಎಲ್‌ನಲ್ಲಿ 5000 ರನ್‌ಗಳ ಮೈಲುಗಲ್ಲು ದಾಟಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಈ ಮಹತ್ವದ ಮೈಲಿಗಲ್ಲನ್ನು ವೇಗವಾಗಿ ದಾಟಿದ ಭಾರತೀಯ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ.
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಕೆಎಲ್ ರಾಹುಲ್ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದರು. ಆದರೆ ಕೇವಲ 4 ರನ್‌ಗಳಿಸಿ ಭುವನೇಶ್ವರ್ ಕುಮಾರ್‌ಗೆ ವಿಕೆಟ್ ಒಪ್ಪಿಸಿದರು. ಆದರೆ ಅಷ್ಟರಲ್ಲಿ ಪಂಜಾಬ್ ನಾಯಕ ಈ ಮಹತ್ವದ ಸಾಧನೆಯನ್ನು ಮಾಡಿದ್ದಾರೆ.
ಟಿ20 ಕ್ರಿಕೆಟ್‌ನಲ್ಲಿ 5000 ರನ್‌ಗಳ ಮೈಲಿಗಲ್ಲು ತಲುಪಲು ಕೆಎಲ್ ರಾಹುಲ್ ಕೇವಲ 143 ಇನ್ನಿಂಗ್ಸ್‌ಗಳನ್ನು ಬಳಸಿದ್ದಾರೆ. ಭಾರತೀಯ ಕ್ರಿಕೆಟಿಗರ ಪೈಕಿ ಅತ್ಯಂತ ವೇಗವಾದ ಸಾಧನೆಯಾಗಿದೆ. ಈವರೆಗೆ ವಿರಾಟ್ ಕೊಹ್ಲಿ ಹೆಸರಿನಲ್ಲಿ ಈ ದಾಖಲೆಯಿತ್ತು. ಕೊಹ್ಲಿ ಈ ಸಾಧನೆಗೆ 167 ಇನ್ನಿಂಗ್ಸ್ ಬಳಸಿಕೊಂಡಿದ್ದರು. ಮೂರನೇ ಸ್ಥಾನದಲ್ಲಿ ಸುರೇಶ್ ರೈನಾ ಇದ್ದು ಅವರು 173 ಇನ್ನಿಂಗ್ಸ್ ಬಳಸಿದ್ದಾರೆ.
ಇನ್ನು ಟಿ20 ಕ್ರಿಕೆಟ್‌ನಲ್ಲಿ ಒಟ್ಟಾರೆಯಾಗಿ ಅತ್ಯಂತ ವೇಗವಾಗಿ 5000 ರನ್‌ಗಳ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಕ್ರಿಸ್ ಗೇಲ್ ಈ ಸಾಧನೆಗೆ ಕೇವಲ 132 ರನ್‌ಗಳನ್ನು ಬಳಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಸದ್ಯ ಅತಿ ಹೆಚ್ಚು ರನ್‌ಗಳಿಸಿದ ಆಟಗಾರ ಎಂಬ ದಾಖಲೆಯೂ ಕ್ರಿಸ್ ಗೇಲ್ ಅವರ ಹೆಸರಿನಲ್ಲಿಯೇ ಇದೆ.