Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಟೀಮ್ ಇಂಡಿಯಾ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್

KL Rahul is ‘Healing’ well after undergoing appendicitis surgery

ಐಪಿಎಲ್‌ 2021ರ ಆವೃತ್ತಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದ ಕೆಎಲ್ ರಾಹುಲ್ ಅನಾರೋಗ್ಯಕ್ಕೆ ತುತ್ತಾಗಿ ಐಪಿಎಲ್‌ನಿಂದ ಹೊರಗುಳಿದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಕೆಎಲ್ ರಾಹುಲ್ ಚೇತರಿಸಿಕೊಳ್ಳುತ್ತಿದ್ದು ಇಂಗ್ಲೆಂಡ್ ಪ್ರವಾಸಕ್ಕೆ ಸಿದ್ಧರಾಗುತ್ತಿದ್ದಾರೆ.

ಐಪಿಎಲ್ ಟೂರ್ನಿಯ ಸಂದರ್ಭದಲ್ಲಿ ಹೊಟ್ಟೆನೋವಿಗೆ ಒಳಗಾದ ಕೆಎಲ್ ರಾಹುಲ್‌ ಅಪೆಂಡಿಸಿಟೀಸ್‌ಗೆ ಒಳಗಾಗಿದ್ದರು. ಹೀಗಾಗಿ ಅವರು ಮುಂಬೈಗೆ ತೆರಳಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಒಂದು ವಾರದ ವಿಶ್ರಾಂತಿಯ ನಂತರ ರಾಹುಲ್ ಈಗ ಸಂಪೂರ್ಣ ಚೇತರಿಕೆಯ ಹಾದಿಯಲ್ಲಿದ್ದಾರೆ.

ಇಂಗ್ಲೆಂಡ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ಹಾಗೂ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಕೆಎಲ್ ರಾಹುಲ್ ಆಯ್ಕೆಯಾಗಿದ್ದಾರೆ. ಆದರೆ ಶಸ್ತ್ರಚಿಕಿತ್ಸೆಗೆ ಒಳಗಾದ ಹಿನ್ನೆಲೆಯಲ್ಲಿ ರಾಹುಲ್ ಇಂಗ್ಲೆಂಡ್‌ಗೆ ತೆರಳುವ ಮುನ್ನ ಫಿಟ್‌ನೆಸ್ ಸಾಬೀತುಪಡಿಸಬೇಕಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಕೆಎಲ್ ರಾಹುಲ್ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ನಾಯಿಗಳೊಂದಿಗೆ ಕಾಲ ಕಳೆಯುತ್ತಿರುವ ಕೆಎಲ್ ರಾಹುಲ್ "ಹೀಲಿಂಗ್" ಎಂದು ಬರೆದುಕೊಂಡಿದ್ದಾರೆ.

ಇಂಗ್ಲೆಂಡ್‌ಗೆ ತೆರಳುವ ಭಾರತೀಯ ತಂಡ ಮೊದಲಿಗೆ ಮುಂಬೈಗೆ ತೆರಳಿ ಕ್ವಾರಂಟೈನ್‌ಗೆ ಒಳಗಾಗಲಿದ್ದಾರೆ. ಅದಾದ ನಂತರ ಎಲ್ಲಾ ಆಟಗಾರರು ಜೂನ್ 2 ರಂದು ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಲಿದ್ದಾರೆ. ಜೂನ್ 18-22ರ ವರೆಗೆ WTC ಫೈನಲ್ ಪಂದ್ಯ ನಡೆಯಲಿದ್ದು ಅದಾದ ನಂತರ ಆಗಸ್ಟ್ 4 ರಿಂದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಆರಂಭವಾಗಲಿದೆ.

ಇಂಗ್ಲೆಂಡ್ ಪ್ರಬಾಸಕ್ಕೆ ಆಯ್ಕೆಯಾದ ತಂಡ
ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಕ್ಯಾಪ್ಟನ್), ಅಜಿಂಕ್ಯ ರಹಾನೆ (ಉಪನಾಯಕ), ಹನುಮಾ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ಆರ್.ಅಶ್ವಿನ್, ರವೀಂದ್ರ ಜಡೇಜಾ, ಆಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್. ಶಮಿ, ಮೊಹಮದ್ ಸಿರಾಜ್, ಶಾರ್ದುಲ್ ಠಾಕೂರ್, ಉಮೇಶ್ ಯಾದವ್, ಕೆಎಲ್ ರಾಹುಲ್ , ವೃದ್ಧಿಮಾನ್ ಸಾಹಾ

Story first published: Friday, May 14, 2021, 8:58 [IST]
Other articles published on May 14, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+