ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಗಾಯಕ್ಕೊಳಗಾಗಿ ಹೊರಬಿದ್ದ ರಾಹುಲ್ ಈಗ ಹೇಗಿದ್ದಾರೆ? ಮುಂದಿನ ಸರಣಿಯಿಂದಲೂ ಹೊರಬೀಳ್ತಾರಾ ರಾಹುಲ್?

KL Rahul is recovering and likely to be available for Team India ahead of England tour

ಇಂಡಿಯನ್ ಪ್ರೀಮಿಯರ್ ಲೀಗ್ ಹದಿನೈದನೇ ಆವೃತ್ತಿ ಮುಕ್ತಾಯವಾದ ಬೆನ್ನಲ್ಲೇ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ 5 ಪಂದ್ಯಗಳ ಟಿ ಟ್ವೆಂಟಿ ಸರಣಿ ಆರಂಭವಾಗಿದೆ. ದಕ್ಷಿಣ ಆಫ್ರಿಕಾ ಭಾರತ ಪ್ರವಾಸವನ್ನು ಕೈಗೊಂಡಿದ್ದು, ಈ ಸರಣಿಯ ಮೊದಲೆರಡು ಪಂದ್ಯಗಳು ಈಗಾಗಲೇ ಮುಕ್ತಾಯಗೊಂಡಿವೆ. ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಪ್ರಥಮ ಪಂದ್ಯದಲ್ಲಿ ಜಯ ಗಳಿಸಿದ್ದ ದಕ್ಷಿಣ ಆಫ್ರಿಕಾ ಇದೀಗ ಕಟಕ್ ನಗರದ ಬಾಬರತಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿಯೂ ಗೆದ್ದು ಬೀಗಿದೆ. ಈ ಮೂಲಕ ಸರಣಿಯಲ್ಲಿ ದಕ್ಷಿಣ ಆಫ್ರಿಕಾ 2-0 ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದೆ.

ಟಿ20 ಕ್ರಿಕೆಟ್‌ನಲ್ಲಿ 10 ವರ್ಷಗಳ ಬಳಿಕ ಈ ವಿಶೇಷ ದಾಖಲೆ ಮಾಡಿದ ಭುವನೇಶ್ವರ್ ಕುಮಾರ್<br>ಟಿ20 ಕ್ರಿಕೆಟ್‌ನಲ್ಲಿ 10 ವರ್ಷಗಳ ಬಳಿಕ ಈ ವಿಶೇಷ ದಾಖಲೆ ಮಾಡಿದ ಭುವನೇಶ್ವರ್ ಕುಮಾರ್

ಹಿರಿಯ ಅನುಭವಿ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಮತ್ತು ಜಸ್ ಪ್ರೀತ್ ಬುಮ್ರಾ ಇಲ್ಲದೇ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲಲು ಪರದಾಡುತ್ತಿದೆ. ಇನ್ನು ಈ ನಾಲ್ವರು ಅನುಭವಿ ಕ್ರಿಕೆಟಿಗರು ವಿಶ್ರಾಂತಿಗೆಂದು ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಗುಳಿದಿದ್ದ ಕಾರಣ ಕೆ ಎಲ್ ರಾಹುಲ್ ಅವರನ್ನು ತಂಡದ ನಾಯಕನನ್ನಾಗಿ ಘೋಷಿಸಲಾಗಿತ್ತು. ಆದರೆ ಪ್ರಥಮ ಪಂದ್ಯ ಆರಂಭವಾಗುವ ಹಿಂದಿನ ದಿನ ಕೆಎಲ್ ರಾಹುಲ್ ತೊಡೆಸಂದಿನ ಗಾಯಕ್ಕೆ ಒಳಗಾದ ಕಾರಣ ಸರಣಿಯಿಂದಲೇ ಹೊರ ಬೀಳಬೇಕಾದ ಪರಿಸ್ಥಿತಿ ಎದುರಾಯಿತು.

ಟೆಸ್ಟ್ ಕ್ರಿಕೆಟ್‍ನಲ್ಲಿ 11ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅತಿಹೆಚ್ಚು ರನ್ ಬಾರಿಸಿರುವ ಆಟಗಾರ ಯಾರು?ಟೆಸ್ಟ್ ಕ್ರಿಕೆಟ್‍ನಲ್ಲಿ 11ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅತಿಹೆಚ್ಚು ರನ್ ಬಾರಿಸಿರುವ ಆಟಗಾರ ಯಾರು?

ಹೀಗಾಗಿ ಸರಣಿಯಲ್ಲಿ ತಂಡವನ್ನು ರಿಷಭ್ ಪಂತ್ ನಾಯಕನಾಗಿ ಮುನ್ನಡೆಸುತ್ತಿದ್ದು, ಹೇಳಿಕೊಳ್ಳುವಂಥ ಯಶಸ್ಸು ಸಾಧಿಸುವಲ್ಲಿ ವಿಫಲರಾಗಿದ್ದಾರೆ. ಇನ್ನು ಕೊಹ್ಲಿ, ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಅಲಭ್ಯತೆ ಅಭಿಮಾನಿಗಳಲ್ಲಿ ಕಾಡುತ್ತಿದ್ದು, ಗಾಯಕ್ಕೊಳಗಾಗಿ ತಂಡದಿಂದ ಹೊರಬಿದ್ದಿರುವ ಕೆಎಲ್ ರಾಹುಲ್ ಮುಂದಿನ ಇಂಗ್ಲೆಂಡ್ ಸರಣಿಗೆ ಲಭ್ಯರಾಗುತ್ತಾರಾ ಅಥವಾ ಇಲ್ಲವಾ ಎಂಬ ಆತಂಕವನ್ನು ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಈ ಕುರಿತಾಗಿ ಬಿಸಿಸಿಐನ ಆಯ್ಕೆ ಸಮಿತಿಯ ಹಿರಿಯ ಸದಸ್ಯರೋರ್ವರು ಇನ್ ಸೈಡ್ ಸ್ಪೋರ್ಟ್ಸ್ ವೆಬ್ ತಾಣದೊಂದಿಗೆ ಮಾತನಾಡಿದ್ದು, ಕೆಎಲ್ ರಾಹುಲ್ ಕುರಿತಾಗಿ ಈ ಕೆಳಕಂಡಂತೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಅಭ್ಯಾಸ ಪಂದ್ಯಕ್ಕೂ ಮುನ್ನವೇ ಸಿದ್ಧರಾಗಲಿದ್ದಾರೆ ಕೆಎಲ್ ರಾಹುಲ್

ಅಭ್ಯಾಸ ಪಂದ್ಯಕ್ಕೂ ಮುನ್ನವೇ ಸಿದ್ಧರಾಗಲಿದ್ದಾರೆ ಕೆಎಲ್ ರಾಹುಲ್

ಬಿಸಿಸಿಐ ಆಯ್ಕೆ ಸಮಿತಿಯ ಸದಸ್ಯರೊಬ್ಬರು ನೀಡಿರುವ ಮಾಹಿತಿ ಪ್ರಕಾರ ಕೆಎಲ್ ರಾಹುಲ್ ಸದ್ಯ ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಚೇತರಿಸಿಕೊಳ್ಳಲು ಆರಂಭಿಸಿದ್ದಾರೆ. ಹಾಗೂ ಕೆಎಲ್ ರಾಹುಲ್ ಗಾಯದ ಸಮಸ್ಯೆ ಊಹಿಸಿದಷ್ಟು ದೊಡ್ಡದೇನಲ್ಲ ಎಂದಿರುವ ಇವರು ಇಂಗ್ಲೆಂಡ್ ನೆಲದಲ್ಲಿ ನಡೆಯಲಿರುವ ಮೊದಲನೇ ಅಭ್ಯಾಸ ಪಂದ್ಯಕ್ಕೆ ವಾರ ಬಾಕಿ ಇರುವಾಗಲೇ ಕೆಎಲ್ ರಾಹುಲ್ ಸಂಪೂರ್ಣವಾಗಿ ಗುಣಮುಖರಾಗಿ ಫಿಟ್ ಆಗಲಿದ್ದಾರೆ ಎಂದು ತಜ್ಞರು ಹೇಳಿದ್ದಾರೆ ಎಂಬ ಮಾಹಿತಿಯನ್ನು ಈ ಸದಸ್ಯರೊಬ್ಬರು ಬಹಿರಂಗಪಡಿಸಿದ್ದಾರೆ.

ಈ ದಿನದಂದು ಇಂಗ್ಲೆಂಡ್‌ಗೆ ಹಾರಲಿದ್ದಾರೆ ರಾಹುಲ್

ಈ ದಿನದಂದು ಇಂಗ್ಲೆಂಡ್‌ಗೆ ಹಾರಲಿದ್ದಾರೆ ರಾಹುಲ್

ಇನ್ನು ಸದ್ಯ ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಚೇತರಿಸಿಕೊಳ್ಳುತ್ತಿರುವ ಕೆಎಲ್ ರಾಹುಲ್ ಜೂನ್ 19ರಂದು ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿರುವ ಟೀಮ್ ಇಂಡಿಯಾದ ಮೊದಲನೇ ವೃಂದದೊಂದಿಗೆ ಇಂಗ್ಲೆಂಡ್ ತಲುಪಲಿದ್ದಾರೆ.

Dinesh Karthik ಇನ್ನಿಂಗ್ಸ್ ಕೊನೆಯಲ್ಲಿ ಅಬ್ಬರದ ಆಟ | *Cricket | Oneindia Kannada
ಇಂಗ್ಲೆಂಡ್ ಪ್ರವಾಸದಲ್ಲಿ ನಡೆಯಲಿರುವ ಪಂದ್ಯಗಳು

ಇಂಗ್ಲೆಂಡ್ ಪ್ರವಾಸದಲ್ಲಿ ನಡೆಯಲಿರುವ ಪಂದ್ಯಗಳು

ಐದನೇ ಟೆಸ್ಟ್ ಪಂದ್ಯ ( ಮುಂದೂಡಲ್ಪಟ್ಟ ) - ಜುಲೈ 1 - 5: ಬರ್ಮಿಂಗ್ ಹ್ಯಾಮ್

• ಪ್ರಥಮ ಟಿ ಟ್ವೆಂಟಿ ಪಂದ್ಯ - ಜುಲೈ 7 - ಸೌತಾಂಪ್ಟನ್

• ದ್ವಿತೀಯ ಟಿ ಟ್ವೆಂಟಿ ಪಂದ್ಯ - ಜುಲೈ 9 - ಬರ್ಮಿಂಗ್ ಹ್ಯಾಮ್

• ತೃತೀಯ ಟಿ ಟ್ವೆಂಟಿ ಪಂದ್ಯ - ಜುಲೈ 10 - ನಾಟಿಂಗ್ ಹ್ಯಾಮ್

• ಪ್ರಥಮ ಏಕದಿನ ಪಂದ್ಯ - ಜುಲೈ 12 - ಓವಲ್

• ದ್ವಿತೀಯ ಏಕದಿನ ಪಂದ್ಯ - ಜುಲೈ 14 - ಲಾರ್ಡ್ಸ್

• ತೃತೀಯ ಏಕದಿನ ಪಂದ್ಯ - ಜುಲೈ 17 - ಮ್ಯಾಂಚೆಸ್ಟರ್

Story first published: Monday, June 13, 2022, 13:53 [IST]
Other articles published on Jun 13, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X