ದ.ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ರೋಹಿತ್ ಅಲಭ್ಯರಾದರೆ ಭಾರತದ ನಾಯಕತ್ವ ಯಾರ ಹೆಗಲಿಗೆ?

ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡಿರುವ ಟೀಮ್ ಇಂಡಿಯಾ ಹರಿಣಗಳ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಗಳಲ್ಲಿ ಸೆಣಸಾಟ ನಡೆಸಲಿದೆ. ಇನ್ನು ಇತ್ತಂಡಗಳ ನಡುವೆ ಈಗಾಗಲೇ 3 ಪಂದ್ಯಗಳ ಟೆಸ್ಟ್ ಸರಣಿಯ ಚೊಚ್ಚಲ ಪಂದ್ಯ ಆರಂಭವಾಗಿದ್ದು, 3 ಪಂದ್ಯಗಳ ಏಕದಿನ ಸರಣಿ ಜನವರಿ 19ರಂದು ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಪಂದ್ಯದ ಮೂಲಕ ಶುರುವಾಗಲಿದೆ.
ಇನ್ನು ಈ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ರೋಹಿತ್ ಶರ್ಮಾ ಭಾರತ ಏಕದಿನ ತಂಡದ ನೂತನ ನಾಯಕನಾಗಿ ತನ್ನ ಕೆಲಸವನ್ನು ಆರಂಭಿಸಲಿದ್ದಾರೆ. ಹೌದು, ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡವನ್ನು ಪ್ರಕಟಿಸುವಾಗ ಮಹತ್ತರದ ತೀರ್ಮಾನವೊಂದನ್ನು ಕೈಗೊಂಡಿರುವುದಾಗಿ ಘೋಷಿಸಿದ್ದ ಬಿಸಿಸಿಐ ಭಾರತ ಏಕದಿನ ತಂಡಕ್ಕೆ ರೋಹಿತ್ ಶರ್ಮಾ ಅವರನ್ನು ನೂತನ ನಾಯಕನನ್ನಾಗಿ ಆಯ್ಕೆ ಸಮಿತಿ ಆಯ್ಕೆ ಮಾಡಿದೆ ಎಂದು ಹೇಳಿಕೆ ನೀಡಿತ್ತು. ಹೀಗೆ ವಿರಾಟ್ ಕೊಹ್ಲಿ ನಂತರ ರೋಹಿತ್ ಶರ್ಮಾ ಭಾರತ ಏಕದಿನ ತಂಡದ ನೂತನ ನಾಯಕನಾಗಿ ಆಯ್ಕೆಗೊಂಡರೆ, ಕೆಎಲ್ ರಾಹುಲ್ ಉಪನಾಯಕನ ಸ್ಥಾನಕ್ಕೆ ಆರಿಸಲ್ಪಟ್ಟರು.
ಹೀಗೆ ಭಾರತ ಏಕದಿನ ತಂಡದ ನಾಯಕತ್ವ ಲಭಿಸಿದ ಬೆನ್ನಲ್ಲೇ ರೋಹಿತ್ ಶರ್ಮಾ ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆಂದು ಅಭ್ಯಾಸ ನಡೆಸುತ್ತಿದ್ದ ವೇಳೆ ಗಾಯಗೊಂಡು ವಿಶ್ರಾಂತಿ ತೆಗೆದುಕೊಳ್ಳುವುದಕ್ಕೋಸ್ಕರ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿಯುವುದಾಗಿ ತೀರ್ಮಾನ ಮಾಡಿದರು. ಹೀಗೆ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿರುವ ರೋಹಿತ್ ಶರ್ಮಾ ಈ ಸರಣಿ ಮುಗಿದ ನಂತರ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡು ಲಭ್ಯರಾಗುತ್ತಾರಾ ಅಥವಾ ಗಾಯದ ಸಮಸ್ಯೆ ಮುಂದುವರಿದು ಏಕದಿನ ಸರಣಿಯಿಂದಲೂ ಕೂಡ ಹೊರಗುಳಿಯುತ್ತಾರಾ ಎಂಬ ಪ್ರಶ್ನೆ ಇದೀಗ ಮೂಡಿದೆ.

ಕೆಎಲ್ ರಾಹುಲ್‌ಗೆ ನಾಯಕತ್ವ
ಒಂದುವೇಳೆ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಫಿಟ್ ಆಗದೇ ಇದ್ದರೆ ರೋಹಿತ್ ಶರ್ಮಾ ನಿರ್ವಹಿಸಬೇಕಿದ್ದ ಭಾರತ ತಂಡದ ನಾಯಕತ್ವದ ಜವಾಬ್ದಾರಿಯನ್ನು ಬೇರೊಬ್ಬ ಆಟಗಾರನ ಹೆಗಲಿಗೆ ಹಾಕಬೇಕಾಗುತ್ತದೆ. ಹೀಗೆ ರೋಹಿತ್ ಶರ್ಮಾ ಅಲಭ್ಯರಾದರೆ ಭಾರತ ಏಕದಿನ ತಂಡದ ನಾಯಕತ್ವವನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎಂಬ ಕುತೂಹಲಕ್ಕೆ ಉತ್ತರ ಕೇಳಿ ಬಂದಿದ್ದು ವರದಿಯೊಂದರ ಪ್ರಕಾರ ಕೆಎಲ್ ರಾಹುಲ್ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಭಾರತ ಏಕದಿನ ತಂಡವನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಮುನ್ನಡೆಸಲಿದ್ದಾರಂತೆ.

ಕೊಹ್ಲಿಗೆ ಜವಾಬ್ದಾರಿ ಅನುಮಾನ
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ವಿರಾಟ್ ಕೊಹ್ಲಿ ಮುನ್ನಡೆಸುವುದು ಅನುಮಾನ ಎಂದೇ ಹೇಳಬಹುದು. ಈಗಾಗಲೇ ಇದೇ ನಾಯಕತ್ವದ ವಿಚಾರವಾಗಿ ವಿರಾಟ್ ಕೊಹ್ಲಿ ಬಿಸಿಸಿಐ ವಿರುದ್ಧ ಹೇಳಿಕೆಗಳನ್ನು ನೀಡಿದ್ದು ಮತ್ತೆ ಅದೇ ಜವಾಬ್ದಾರಿಯನ್ನು ಸರಣಿಯೊಂದರಲ್ಲಿ ಕೊಹ್ಲಿ ವಹಿಸಿಕೊಳ್ಳುವ ಕಡೆ ತಲೆ ಹಾಕುವುದಿಲ್ಲ ಎನ್ನಬಹುದು.

ಮೊದಲ ಟೆಸ್ಟ್‌ನಲ್ಲಿ ಮಿಂಚಿದ ರಾಹುಲ್
ಸದ್ಯ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಟೆಸ್ಟ್ ಸರಣಿ ಆರಂಭವಾಗಿದ್ದು ಇತ್ತಂಡಗಳ ನಡುವಿನ ಪ್ರಥಮ ಟೆಸ್ಟ್ ಪಂದ್ಯ ಡಿಸೆಂಬರ್ 26ರಿಂದ ಸೆಂಚೂರಿಯನ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಮೊದಲನೇ ಇನ್ನಿಂಗ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿರುವ ಕೆಎಲ್ ರಾಹುಲ್ ಮೊದಲನೇ ದಿನದಾಟದಂತ್ಯಕ್ಕೆ ಅಜೇಯ 122 ರನ್ ಗಳಿಸಿ ಉತ್ತಮ ಪ್ರದರ್ಶನವನ್ನು ನೀಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications