ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆಸಿಸ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾದ ರಾಹುಲ್ ಅದೃಷ್ಟಶಾಲಿ: ಮಂಜ್ರೇಕರ್

KL Rahul lucky to be picked for Australia Test series: Sanjay Manjrekar

ಆಸ್ಟ್ರೇಲಿಯಾ ವಿರುದ್ದದ ಸರಣಿಯಲ್ಲಿ ಪಾಲ್ಗೊಳ್ಳಲು ಕನ್ನಡಿಗ ಕೆಎಲ್ ರಾಹುಲ್ ಆಯ್ಕೆಯಾಗಿದ್ದಾರೆ. ಸೀಮಿತ ಓವರ್‌ಗಳ ತಂಡದಲ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರನಾಗಿದ್ದರೂ ಕೆಎಲ್ ರಾಹುಲ್ ಟೆಸ್ಟ್ ತಂಡದಲ್ಲಿ ಸ್ಥಾನವನ್ನು ಖಾಯಂಗೊಳಸಲು ಸಾಧ್ಯವಾಗಿರಲಿಲ್ಲ. ಆದರೆ ಆಸಿಸ್ ವಿರುದ್ಧದ ಸರಣಿಗೆ ಆಯ್ಕೆಮಾಗುವ ಮೂಲಕ ಟೆಸ್ಟ್ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ ಕೆಎಲ್ ರಾಹುಲ್.

ಟೀಮ್ ಇಂಡಿಯಾದ ಟೆಸ್ಟ್ ತಂಡಕ್ಕೆ ಆಯ್ಕೆಯಾದ ಕೆಎಲ್ ರಾಹುಲ್ ನಿಜಕ್ಕೂ ಅದೃಷ್ಠಶಾಲಿ ಎಂದು ಸಂಜಯ್ ಮಂಜ್ರೇಕರ್ ಅಭಿಪ್ರಾಯಪಟ್ಟಿದ್ದಾರೆ. ಸೀಮಿತ ಓವರ್‌ಗಳ ಪಂದ್ಯಗಳಲ್ಲಿ ಹಾಗೂ ಐಪಿಎಲ್‌ನಲ್ಲಿ ರಾಹುಲ್ ಪ್ರದರ್ಶನವನ್ನು ನೋಡಿ ಈ ಆಯ್ಕೆಯನ್ನು ಮಾಡಲಾಗಿದೆ. ಹೀಗಾಗಿ ರಾಹುಲ್ ಆಯ್ಕೆಯನ್ನು ಮಂಜ್ರೇಕರ್ ಅದೃಷ್ಠ ಎಂದು ವ್ಯಾಖ್ಯಾನಿಸಿದ್ದಾರೆ.

ಟೀಮ್ ಇಂಡಿಯಾದಲ್ಲಿ ರೋಹಿತ್ ಶರ್ಮಾ ಆಯ್ಕೆ ಮಾಡದಿದ್ದಕ್ಕೆ ಸ್ಪಷ್ಟನೆ ಕೇಳಿದ ಸುನಿಲ್ ಗವಾಸ್ಕರ್ಟೀಮ್ ಇಂಡಿಯಾದಲ್ಲಿ ರೋಹಿತ್ ಶರ್ಮಾ ಆಯ್ಕೆ ಮಾಡದಿದ್ದಕ್ಕೆ ಸ್ಪಷ್ಟನೆ ಕೇಳಿದ ಸುನಿಲ್ ಗವಾಸ್ಕರ್

ಕೆಎಲ್ ರಾಹುಲ್ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಶ್ರೇಷ್ಠ ಪ್ರದರ್ಶನವನ್ನು ನೀಡುತ್ತಿದ್ದಾರೆ. 12 ಪಮದ್ಯಗಳನ್ನಾಡಿರುವ ರಾಹುಲ್ 595 ರನ್‌ಗಳನ್ನು ಬಾರಿಸಿ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರ ಎನಿಸಿದ್ದಾರೆ. ಈ ಶ್ರೇಷ್ಠ ಪ್ರದರ್ಶನದ ಬಳಿಕ ರಾಹುಲ್ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಸರಣಿಗೆ ಆಯ್ಕೆಯಾಗಿದ್ದಾರೆ.

"ಐಪಿಎಲ್ ಆಟದ ಪ್ರದರ್ಶನದ ಮೇಲೆ ಟೆಸ್ಟ್‌ಗೆ ಆಯ್ಕೆಯಾದ ಈ ಹಿಂದಿನ ನಿದರ್ಶನಗಳನ್ನು ಗಮನಿಸಿದರೆ ಅದು ಉತ್ತಮವಾಗಿಲ್ಲ. ಅದರಲ್ಲೂ ಆಟಗಾರರು ಕೊನೆಯ ಕೆಲ ಪಂದ್ಯಗಳಲ್ಲಿ ತಮ್ಮ ಪತ್ತಮ ಪ್ರದರ್ಶನವನ್ನು ನೀಡಲು ವಿಫಲರಾಗಿದ್ದಾರೆ. ಹೀಗೇ ಐಪಿಎಲ್‌ನಿಂದ ಆಯ್ಕೆಯಾದ ಆಟಗಾರರು ಉತ್ತಮ ಪ್ರದರ್ಶನವನ್ನು ನಿಡುತ್ತಾರೋ ಇಲ್ವೋ ಬೇರೆ ಮಾತು, ಆದರೆ ಇಂತಾ ಆಯ್ಕೆಗಳು ರಣಜಿ ಆಟಗಾರರಿಗೆ ಭಾರೀ ನಿರಾಸೆಯನ್ನು ಉಂಟು ಮಾಡುತ್ತದೆ" ಎಂದಿದ್ದಾರೆ ಸಂಜಯ್ ಮಂಜ್ರೇಕರ್.

ಅಭಿಮಾನಿಗಳನ್ನ ಗೊಂದಲಕ್ಕೀಡುಮಾಡಿದ ರೋಹಿತ್ ಶರ್ಮಾ ಫೋಟೋಅಭಿಮಾನಿಗಳನ್ನ ಗೊಂದಲಕ್ಕೀಡುಮಾಡಿದ ರೋಹಿತ್ ಶರ್ಮಾ ಫೋಟೋ

ಕಳೆದ ವರ್ಷ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಕೆಟ್ಟ ಪ್ರದರ್ಶನದ ನಂತರ ಕೆಎಲ್ ರಾಹುಲ್ ಟೆಸ್ಟ್ ತಂಡದಿಂದ ಹೊರಬಿದ್ದರು. ಆ ಸರಣಿಯ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ರಾಹುಲ್ ಕೇವಲ 101 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಆದರೆ ಬಳಿಕ ನ್ಯೂಜಿಲೆಂಡ್ 'ಎ' ತಂಡದ ವಿರುದ್ಧ ಭಾರತ 'ಎ' ತಂಡದಲ್ಲೂ ರಾಹುಲ್ ಆಯ್ಕೆಯಾಗಿರಲಿಲ್ಲ.

Story first published: Tuesday, October 27, 2020, 16:07 [IST]
Other articles published on Oct 27, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X