KL Rahul: ರಾಹುಲ್ ಆಡಿಲೇಡ್ ಟೆಸ್ಟ್ ನಲ್ಲಿ ಯಾವ ಕ್ರಮಾಂಕದಲ್ಲಿ ಆಡುತ್ತಾರೆ? ಇಲ್ಲಿದೆ ಅವರು ನೀಡಿದ ಉತ್ತರ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಎರಡನೇ ಟೆಸ್ಟ್ ಪಂದ್ಯ ಆಡಿಲೇಡ್‌ನಲ್ಲಿ ನಡೆಯಲಿದೆ. ಈ ಟೆಸ್ಟ್ ಹಗಲು ರಾತ್ರಿ ಆಗಿರಲಿದೆ. ಈ ಟೆಸ್ಟ್ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸುವ ಕನಸು ಟೀಮ್ ಇಂಡಿಯಾದ್ದಾಗಿದೆ. ಈಗಾಗಲೇ ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿರುವ ಟೀಮ್ ಇಂಡಿಯಾ, ಮತ್ತೊಂದು ಗೆಲುವಿನ ಕನಸು ಕಾಣುತ್ತಿದೆ.
ಆಡಿಲೇಡ್ ಟೆಸ್ಟ್ ಆರಂಭಕ್ಕೂ ಮುನ್ನವೇ, ಟೀಮ್ ಇಂಡಿಯಾವನ್ನು ನಾಯಕ ರೋಹಿತ್ ಶರ್ಮಾ ಸೇರಿಕೊಂಡಿದ್ದಾರೆ. ಇವರು ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಿರಲಿಲ್ಲ. ಇವರ ಅನುಪಸ್ಥಿತಿಯಲ್ಲಿ ಜಸ್ಪ್ರಿತ್ ಬುಮ್ರಾ ತಂಡವನ್ನು ಮುನ್ನಡೆಸಿದರೆ, ಕೆಎಲ್ ರಾಹುಲ್ ಆರಂಭಿಕರಾಗಿ ಕಣಕ್ಕೆ ಇಳಿದಿದ್ದರು. ಮೊದಲ ಟೆಸ್ಟ್‌ನ ಎರಡೂ ಇನಿಂಗ್ಸ್‌ಗಳಲ್ಲಿ ರಾಹುಲ್ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ ಎಲ್ಲರ ಗಮನ ಸೆಳೆದಿದ್ದರು.

ರಾಹುಲ್ ನೀಡಿದ ಉತ್ತರವೇನು?
ಆರಂಭಿಕರಾಗಿ ರಾಹುಲ್ ಯಶಸ್ಸು ಕಾಣುತ್ತಿದ್ದಂತೆ ಎಲ್ಲರ ಮುಂದಿರುವ ಪ್ರಶ್ನೆ ಒಂದೇ, ಎರಡನೇ ಟೆಸ್ಟ್ ಪಂದ್ಯದಲ್ಲಿ ರಾಹುಲ್ ಯಾವ ಕ್ರಮಾಂಕದಲ್ಲಿ ಆಡಲಿದ್ದಾರೆ ಎಂಬುದು. ಈಗಾಗಲೇ ಈ ಪ್ರಶ್ನೆಗೆ ಮೇಲ್ನೋಟಕ್ಕೆ ಉತ್ತರ ಸಿಕ್ಕಿದೆ. ಪಿಎಂ ಇಲೆವೆನ್ ವಿರುದ್ಧದ ಇಲೆವೆನ್ ಪಂದ್ಯದಲ್ಲಿ ರೋಹಿತ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡಿ ಎಲ್ಲರ ಚಿತ್ತ ಕದ್ದಿದ್ದರು. ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನವೇ ರಾಹುಲ್ ಪತ್ರಕರ್ತರ ಮುಂದೆ ಬಂದರು.
ರಾಹುಲ್ ಪತ್ರಕರ್ತರ ಮುಂದೆ ಬರುತ್ತಿದ್ದಂತೆ ಅವರಿಗೆ ಕೇಳಲಾದ ಪ್ರಶ್ನೆಯಲ್ಲಿ, ನೀವು ಎಷ್ಟನೇ ಕ್ರಮಾಂಕದಲ್ಲಿ ಆಡುತ್ತೀರಿ ಎಂದು ಕೇಳಲಾಯಿತು. ಇದಕ್ಕೆ ಉತ್ತರ ನೀಡಿದ ರಾಹುಲ್, ನನಗೆ ಈಗಾಗಲೇ ಟೀಮ್ ಮ್ಯಾನೇಜ್ಮೆಂಟ್ ಈ ಬಗ್ಗೆ ಸ್ಪಷ್ಟ ಉತ್ತರ ನೀಡಿದೆ. ಆದರೆ ನನಗೆ ನಿಮ್ಮ ಮುಂದೆ ಹೇಳದಂತೆ ಸೂಚಿಸಲಾಗಿದೆ. ನಾಳೆ ರೋಹಿತ್ ಬರುತ್ತಾರೆ ನೀವು ಅವರಿಗೆ ಈ ಪ್ರಶ್ನೆ ಕೇಳಬಹುದು ಎಂದು ತಿಳಿಸಿದ್ದಾರೆ.

ಹಲವು ಪ್ರಶ್ನೆಗಳಿಗೆ ಈ ಪಂದ್ಯ ಉತ್ತರ
ಶುಕ್ರವಾರ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್ ಗವಾಸ್ಕರ್ ಸರಣಿಯ ಎರಡನೇ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ಲ್ಯಾನ್‌ನೊಂದಿಗೆ ಕಣಕ್ಕೆ ಇಳಿಯಲಿದೆ. ಈ ಸರಣಿ ಟೀಮ್ ಇಂಡಿಯಾ ಪಾಲಿಗೆ ಮಹತ್ವದಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ದೃಷ್ಟಿಯಿಂದ ಈ ಸರಣಿ ಮಹತ್ವದಾಗಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಈಗಾಗಲೇ 1-o ಮುನ್ನಡೆ ಸಾಧಿಸಿದೆ. ಹೀಗಾಗಿ ಈ ಪಂದ್ಯ ಆಸ್ಟ್ರೇಲಿಯಾಕ್ಕೆ ಮಹತ್ವದಾಗಿದೆ.
ಎರಡನೇ ಟೆಸ್ಟ್ ಆರಂಭಕ್ಕೂ ಮುನ್ನ ಭಾರತ ಒಂದು ಅಭ್ಯಾಸ ಪಂದ್ಯವನ್ನು ಆಡಿತು. ಈ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಅವರೊಂದಿಗೆ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಿದರು. ಈ ವೇಳೆ ರೋಹಿತ್ ಶರ್ಮಾ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದರು. ಹೀಗಾಗಿ ತಂಡದ ಹಿತಕ್ಕಾಗಿ ರೋಹಿತ್ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications