For Quick Alerts
ALLOW NOTIFICATIONS  
For Daily Alerts
 

ICC Test Rankings: ಲಾರ್ಡ್ಸ್‌ನಲ್ಲಿ ಅಬ್ಬರಿಸಿದ ಜಡೇಜಾ, ರಾಹುಲ್‌ ರ‍್ಯಾಂಕಿಂಗ್‌ನಲ್ಲಿ ಬಡ್ತಿ

ಟೀಮ್ ಇಂಡಿಯಾ ಲಾರ್ಡ್ಸ್‌ ಅಂಗಳದಲ್ಲಿ 22 ರನ್‌ಗಳ ಸೋಲು ಕಂಡಿರಬಹುದು, ಆದರೆ ಐಸಿಸಿ ಟೆಸ್ಟ್‌ ಬ್ಯಾಟ್ಸಮನ್‌ಗಳ ಶ್ರೇಯಾಂಕದಲ್ಲಿ ಆಟಗಾರರು ಬಡ್ತಿ ಪಡೆದಿದ್ದಾರೆ. ಮೂರನೇ ಟೆಸ್ಟ್‌ನ ಎರಡೂ ಇನಿಂಗ್ಸ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿದ ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಶ್ರೇಯಾಂಕದಲ್ಲಿ ಬಡ್ತಿ ಆಗಿದೆ. ಇನ್ನು ಟಾಪ್‌ 10ರಲ್ಲಿ ಸ್ಥಾನ ಪಡೆದ ಭಾರತೀಯ ಮೂವರು ಆಟಗಾರರು ತಲಾ ಒಂದು ಸ್ಥಾನ ಕಳೆದುಕೊಂಡಿದ್ದಾರೆ.

ಲಾರ್ಡ್ಸ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಮೊದಲ ಇನಿಂಗ್ಸ್‌ನಲ್ಲಿ ಶತಕ ಬಾರಿಸಿದ ಕೆಎಲ್ ರಾಹುಲ್‌, ರ‍್ಯಾಂಕಿಂಗ್‌ನಲ್ಲಿ ಬಡ್ತಿ ಪಡೆದಿದ್ದಾರೆ. ಇವರು 5 ಸ್ಥಾನ ಬಡ್ತಿ ಪಡೆದಿದ್ದು, 600 ಅಂಕಗಳೊಂದಿಗೆ 35ನೇ ಸ್ಥಾನವನ್ನು ತಲುಪಿದ್ದಾರೆ. ಮೊದಲ ಹಾಗೂ ಎರಡನೇ ಇನಿಂಗ್ಸ್‌ನಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿ ಎದುರಾಳಿಗಳನ್ನು ಕಾಡಿದ ಟೀಮ್ ಇಂಡಿಯಾದ ಆಲ್‌ರೌಂಡರ್‌ ರವೀಂದ್ರ ಜಡೇಜಾ ಅವರ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಏರಿಕೆ ಆಗಿದೆ.

KL Rahul Ravindra Jadeja Climb in ICC Test Rankings Root Retains Top Spot

ರವೀಂದ್ರ ಜಡೇಜಾ ಮೂರನೇ ಟೆಸ್ಟ್‌ನ ಎರಡೂ ಇನಿಂಗ್ಸ್‌ಗಳಲ್ಲಿ ಅರ್ಧಶತಕ ಬಾರಿಸಿದ್ದರು. ಹೀಗಾಗಿ ಇವರ ಶ್ರೇಯಾಂಕದಲ್ಲಿ ಬಡ್ತಿ ಆಗಿದೆ. ಇವರು 609 ಅಂಕಗಳೊಂದಿಗೆ 5 ಸ್ಥಾನ ಏರಿಕೆ ಕಂಡಿದ್ದು ಸದ್ಯ 34ನೇ ಸ್ಥಾನದಲ್ಲಿದ್ದಾರೆ.

ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಶುಭಮನ್‌ ಗಿಲ್‌ ಮೂರನೇ ಟೆಸ್ಟ್‌ನಲ್ಲಿ ನಿರಾಸೆ ಅನುಭವಿಸಿದರು. ಹೀಗಾಗಿ ಇವರ ಶ್ರೇಯಾಂಕದಲ್ಲಿ ಒಂದು ಸ್ಥಾನ ಹಿನ್ನಡೆ ಆಗಿದ್ದು, 9ನೇ ಸ್ಥಾನಕ್ಕೆ ತಲುಪಿದ್ದಾರೆ. ಇನ್ನು ವಿಕೆಟ್‌ ಕೀಪರ್ ಬ್ಯಾಟರ್ ರಿಷಭ್ ಪಂತ್‌ ಸಹ ಒಂದು ಸ್ಥಾನ ಇಳಿಮುಖವಾಗಿದ್ದು, 8ನೇ ಸ್ಥಾನಕ್ಕೆ ತಲುಪಿದ್ದಾರೆ. ಟೀಮ್ ಇಂಡಿಯಾದ ಯುವ ಬ್ಯಾಟರ್‌ ಯಶಸ್ವಿ ಜೈಸ್ವಾಲ್‌ 801 ಅಂಕಗಳೊಂದಿಗೆ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ.

KL Rahul Ravindra Jadeja Climb in ICC Test Rankings Root Retains Top Spot

ರೂಟ್‌ ಅಗ್ರ ಸ್ಥಾನ ಭದ್ರ

ಇಂಗ್ಲೆಂಡ್ ತಂಡದ ಸ್ಟಾರ್ ಬ್ಯಾಟರ್ ಜೋ ರೂಟ್‌ ಅಗ್ರ ಸ್ಥಾನವನ್ನು ಭದ್ರ ಪಡಿಸಿಕೊಂಡಿದ್ದಾರೆ. ಇನ್ನು ನ್ಯೂಜಿಲೆಂಡ್‌ನ ಕೇನ್‌ ವಿಲಿಯಮ್ಸನ್‌ 2, ಇಂಗ್ಲೆಂಡ್‌ನ ಹ್ಯಾರಿ ಬ್ರೂಕ್‌ 3, ವೆಸ್ಟ್‌ ಇಂಡೀಸ್‌ ವಿರುದ್ಧ ಸ್ಥಿರ ಪ್ರದರ್ಶನ ನೀಡಿರುವ ಸ್ಟೀವನ್‌ ಸ್ಮಿತ್ ನಾಲ್ಕನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ.

ಟಾಪ್‌ 20ರಲ್ಲಿ ಏಕೈಕ ಬೌಲರ್‌

ಐಸಿಸಿ ಬಿಡುಗಡೆ ಮಾಡಿರುವ ಐಸಿಸಿ ಟೆಸ್ಟ್‌ ಬೌಲರ್‌ಗಳ ಶ್ರೇಯಾಂಕದಲ್ಲಿ ಜಸ್ಪ್ರೀತ್ ಬುಮ್ರಾ ತಮ್ಮ ಅಗ್ರ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಆದರೆ ಇವರನ್ನು ಬಿಟ್ಟರೆ ಟೀಮ್ ಇಂಡಿಯಾದ ಯಾವೊಬ್ಬ ಬೌಲರ್‌ ಟಾಪ್‌ 20ರಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಎರಡನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ, ಮೂರನೇ ಸ್ಥಾನದಲ್ಲಿ ಆಸ್ಟ್ರೇಲಿಯಾ ಪ್ಯಾಟ ಕಮಿನ್ಸ್‌ ಇದ್ದಾರೆ. ಸ್ಪಿನ್ ಬೌಲರ್ ರವೀಂದ್ರ ಜಡೇಜಾ ಒಂದು ಸ್ಥಾನ ಕುಸಿತ ಕಂಡಿದ್ದು 15ನೇ ಸ್ಥಾನದಲ್ಲಿದ್ದಾರೆ. ಆಲ್‌ರೌಂಡರ್‌ಗಳ ಶ್ರೇಯಾಂಕದಲ್ಲಿ ರವೀಂದ್ರ ಜಡೇಜಾ ಅವರು ಮೊದಲ ಸ್ಥಾನದಲ್ಲಿ ಮುಂದುವರೆದಿದ್ದಾರೆ.

Story first published: Wednesday, July 16, 2025, 18:03 [IST]
Other articles published on Jul 16, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+