ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs SL: ಕೆಎಲ್ ರಾಹುಲ್‌ ಸ್ಥಾನಕ್ಕೆ ಅಪಾಯ? ಬೇರೆ ಆಟಗಾರನಿಗೆ ಉಪನಾಯಕನ ಸ್ಥಾನ

KL Rahul Removed From Vice Captain Role: BCCI appoints new Vice-Captain For Sri Lanka ODI series

2022ರಲ್ಲಿ ಹಲವು ಏಳು ಬೀಳುಗಳನ್ನು ಕಂಡ ಟೀಂ ಇಂಡಿಯಾ, ಶ್ರೀಲಂಕಾ ವಿರುದ್ಧದ ಸರಣಿಯೊಂದಿಗೆ 2023ರನ್ನು ಆರಂಭಿಸಲಿದೆ. ಟಿ20 ವಿಶ್ವಕಪ್ ಗೆಲ್ಲುವಲ್ಲಿ ವಿಫಲವಾದ ನಂತರ, 2023ರಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ಗೆಲ್ಲಲು ಈಗಿನಿಂದಲೇ ತಯಾರಿ ಆರಂಭಿಸಿದೆ.

2023ರಲ್ಲಿಭಾರತ ಬಿಡುವಿಲ್ಲದ ವೇಳಾಪಟ್ಟಿಯನ್ನು ಹೊಂದಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿ, ಏಕದಿನ ವಿಶ್ವಕಪ್, ಏಷ್ಯಾಕಪ್ ಬಗ್ಗೆ ಭಾರತ ಹೆಚ್ಚಿನ ಕಾಳಜಿ ವಹಿಸಿದೆ. ಜನವರಿ 3 ರಿಂದ ಟಿ 20 ಸರಣಿ ಆರಂಭವಾಗಲಿದ್ದು, ಜನವರಿ 10 ರಿಂದ ಏಕದಿನ ಸರಣಿಗೆ ಚಾಲನೆ ಸಿಗಲಿದೆ.

ಶ್ರೀಲಂಕಾ ವಿರುದ್ಧದ ಸರಣಿಗೆ ಬಿಸಿಸಿಐ ಭಾರತ ತಂಡವನ್ನು ಆಯ್ಕೆ ಮಾಡಿದೆ. ಟಿ20 ಸರಣಿಯಲ್ಲಿ ಹಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮತ್ತು ವಿಕೆಟ್ ಕೀಪರ್-ಬ್ಯಾಟರ್ ರಿಷಬ್ ಪಂತ್ ಟಿ20 ತಂಡದಿಂದ ಹೊರಗುಳಿಯಲಿದ್ದಾರೆ.

IPL 2023: ಕನ್ನಡಿಗ ಮುಂಬೈ ಇಂಡಿಯನ್ಸ್ ಸಹಾಯಕ ಬ್ಯಾಟಿಂಗ್ ಕೋಚ್ ಆಗಿ ಅರುಣ್‌ ಜಗದೀಶ್ ನೇಮಕIPL 2023: ಕನ್ನಡಿಗ ಮುಂಬೈ ಇಂಡಿಯನ್ಸ್ ಸಹಾಯಕ ಬ್ಯಾಟಿಂಗ್ ಕೋಚ್ ಆಗಿ ಅರುಣ್‌ ಜಗದೀಶ್ ನೇಮಕ

ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ತಂಡಕ್ಕೆ ವಾಪಸಾಗಿದ್ದಾರೆ. ಉತ್ತಮ ಪ್ರದರ್ಶನ ನೀಡದಿದ್ದರೂ ಕೆಎಲ್ ರಾಹುಲ್ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದಾರೆ. ಆದರೆ, ಬಿಸಿಸಿಐ ಅವರನ್ನು ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ್ದು, ಹಾರ್ದಿಕ್ ಪಾಂಡ್ಯಗೆ ಉಪನಾಯಕನ ಜವಾಬ್ದಾರಿ ನೀಡಲಾಗಿದೆ. ಇದು ಕೆಎಲ್‌ ರಾಹುಲ್‌ಗೆ ನೀಡಿದ ಎಚ್ಚರಿಕೆ ಎಂದು ಹೇಳಲಾಗಿದೆ. ಇದೇ ರೀತಿ ಕಳಪೆ ಪ್ರದರ್ಶನ ಮುಂದುವರೆಸಿದರೆ ಅವರನ್ನು ತಂಡದಿಂದ ಕೈ ಬಿಡುವ ಸಾಧ್ಯತೆ ಕೂಡ ಇದೆ.

ರಾಹುಲ್‌ಗೆ ಸ್ಪಷ್ಟ ಸಂದೇಶ ನೀಡಿದ ಬಿಸಿಸಿಐ

ರಾಹುಲ್‌ಗೆ ಸ್ಪಷ್ಟ ಸಂದೇಶ ನೀಡಿದ ಬಿಸಿಸಿಐ

ರೋಹಿತ್ ಶರ್ಮಾ ತಂಡದಲ್ಲಿ ಇಲ್ಲದಿದ್ದಾಗ ಕೆಎಲ್ ರಾಹುಲ್ ಹಲವು ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದಾರೆ. ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕೂಡ ಕೆಎಲ್ ರಾಹುಲ್ ಮೊದಲ ಬಾರಿಗೆ ತಂಡದ ನಾಯಕತ್ವ ವಹಿಸಿಕೊಂಡಿದ್ದರು. ಅವರು ಸರಣಿಯಲ್ಲಿ ಉತ್ತಮ ಬ್ಯಾಟಿಂಗ್ ಮಾಡುವಲ್ಲಿ ವಿಫಲರಾದರು. ಆದರೆ, ಭಾರತ ಎರಡೂ ಟೆಸ್ಟ್ ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯನ್ನು ವಶಪಡಿಸಿಕೊಂಡಿತು.

ಜನವರಿ 2022 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮತ್ತು ಆಗಸ್ಟ್ 2022 ರಲ್ಲಿ ಜಿಂಬಾಬ್ವೆ ವಿರುದ್ಧದ ಏಕದಿನ ಪಂದ್ಯಗಳಲ್ಲಿ ರೋಹಿತ್ ಅನುಪಸ್ಥಿತಿಯಲ್ಲಿ ರಾಹುಲ್ ಭಾರತವನ್ನು ಮುನ್ನಡೆಸಿದ್ದರು. ಅವರನ್ನು ಈಗ ಉಪನಾಯಕ ಸ್ಥಾನದಿಂದ ತೆಗೆದುಹಾಕಲಾಗಿದೆ. ಕೆಎಲ್ ರಾಹುಲ್ ಕಳಪೆ ಫಾರ್ಮ್ ಮುಂದುವರೆಸಿದರೆ ಅವರನ್ನು ತಂಡದಿಂದ ಕೈ ಬಿಡುವ ಮುನ್ಸೂಚನೆ ನೀಡಿದೆ. ವಿಕೆಟ್ ಕೀಪರ್ ಆಗಿ ತಂಡದಲ್ಲಿ ಮುಂದುವರೆಯಲಿದ್ದಾರೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಏಕದಿನ ತಂಡದ ಉಪನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.

IPL 2023: ಐಪಿಎಲ್‌ 2023ರಲ್ಲಿ ಆಡಲಿರುವ ಪಾಕಿಸ್ತಾನ ಮೂಲದ ಮೂವರು ಆಟಗಾರರು

ಭವಿಷ್ಯದಲ್ಲಿ ಏಕದಿನ ತಂಡಕ್ಕೆ ಪಾಂಡ್ಯ ನಾಯಕತ್ವ?

ಭವಿಷ್ಯದಲ್ಲಿ ಏಕದಿನ ತಂಡಕ್ಕೆ ಪಾಂಡ್ಯ ನಾಯಕತ್ವ?

ಹಾರ್ದಿಕ್ ಪಾಂಡ್ಯ ಇದುವರೆಗೆ ಆರು ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದಾರೆ. ಆದರೆ ಅವರು ಇನ್ನೂ ಏಕದಿನ ತಂಡದ ನಾಯಕತ್ವ ವಹಿಸಿಕೊಂಡಿಲ್ಲ. ಮೂಲಗಳ ಪ್ರಕಾರ ಟಿ20 ಜೊತೆಗೆ ಹಾರ್ದಿಕ್ ಪಾಂಡ್ಯ ಏಕದಿನ ನಾಯಕತ್ವವನ್ನು ವಹಿಸಿಕೊಳ್ಳುವ ಸಾಧ್ಯತೆ ಇದೆ.

2023ರ ಏಕದಿನ ವಿಶ್ವಕಪ್ ನಂತರ ಭಾರತ ಏಕದಿನ ತಂಡಕ್ಕೆ ಹೊಸ ನಾಯಕನ ಆಯ್ಕೆ ಮಾಡಲಿದ್ದು, ಹಾರ್ದಿಕ್ ಪಾಂಡ್ಯ ಮೊದಲನೇ ಆಯ್ಕೆಯಾಗಿರಲಿದ್ದಾರೆ. ಇದೇ ಕಾರಣಕ್ಕೆ ಅವರಿಗೆ ಉಪನಾಯಕನ ಸ್ಥಾನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಏಕದಿನ ಸರಣಿಗೆ ಭಾರತ ತಂಡ

ಏಕದಿನ ಸರಣಿಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ವಿರಾಟ್ ಕೊಹ್ಲಿ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಅಕ್ಸರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್.

Story first published: Wednesday, December 28, 2022, 14:15 [IST]
Other articles published on Dec 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X