Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಇಂಗ್ಲೆಂಡ್ ಲಯನ್ಸ್ ವಿರುದ್ಧ ಟೆಸ್ಟ್‌: ರಾಹುಲ್‌ ಮೇಲೆ ಕಣ್ಣು

ಶುಕ್ರವಾರ ನಾರ್ಥಾಂಪ್ಟನ್ ನಲ್ಲಿ ಭಾರತ "ಎ" ಹಾಗೂ ಇಂಗ್ಲೆಂಡ್‌ ಲಯನ್ಸ್‌ ವಿರುದ್ಧ ಕಾದಾಟ ನಡೆಯಲಿದೆ. ಈ ಅನಧಿಕೃತ ಟೆಸ್ಟ್‌ ಪಂದ್ಯದಲ್ಲಿ ಭಾರತದ ಅನುಭವಿ ಆಟಗಾರರು ಮೈದಾನ ಪ್ರವೇಶಿಸಲಿದ್ದಾರೆ. ಉಭಯ ತಂಡಗಳ ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯವಾಗಿತ್ತು. ಹೀಗಾಗಿ ಈ ಟೆಸ್ಟ್‌ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಪಂದ್ಯದ ಬಳಿಕ ಭಾರತ ಹಾಗೂ ಇಂಗ್ಲೆಂಡ್‌ ನಡುವಣ ಟೆಸ್ಟ್‌ ಪಂದ್ಯಗಳ ಸರಣಿ ನಡೆಯಲಿದೆ. ಈ ವೇಳೆ ಟೀಮ್ ಇಂಡಿಯಾ, ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟೆಸ್ಟ್‌ ಆಡಲಿದೆ.

ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಪರ ಆಡಿದ್ದ ಕೆಎಲ್ ರಾಹುಲ್‌ ಎರಡನೇ ಅನಧಿಕೃತ ಟೆಸ್ಟ್‌ ಪಂದ್ಯದಲ್ಲಿ ಆಡಲಿದ್ದಾರೆ. ಟೆಸ್ಟ್‌ ತಂಡಕ್ಕೂ ಮುನ್ನ ಅಭ್ಯಾಸ ನಡೆಸಲು ಕನ್ನಡಿಗ ರಾಹುಲ್‌ ಇಂಗ್ಲೆಂಡ್‌ ತಲುಪಿದ್ದಾರೆ. ಹೀಗಾಗಿ ಈ ಆಟಗಾರನ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇಂಗ್ಲೆಂಡ್‌ ಪ್ರವಾಸದಲ್ಲಿ ಟೀಮ್ ಇಂಡಿಯಾ ಮೊದಲ ಟೆಸ್ಟ್‌ ಪಂದ್ಯವನ್ನು ಜೂನ್‌ 20 ರಿಂದ ಆರಂಭವಾಗಲಿದೆ. ಈ ಬಾರಿ ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾವನ್ನು ಶುಭಮನ್‌ ಗಿಲ್‌ ಮುನ್ನಡೆಸಲಿದ್ದಾರೆ.

KL Rahul Returns for India A s Second Unofficial Test Against England Lions

ಟೀಮ್ ಇಂಡಿಯಾದ ಅನುಭವಿ ಬ್ಯಾಟರ್‌ಗಳ ಪಟ್ಟಿಯನ್ನು ಕಣ್ಣು ಹಾಯಿಸಿದಾಗ ಕನ್ನಡಿಗ ರಾಹುಲ್ ಹೆಸರು ಮುಂಚೂಣಿಯಲ್ಲಿ ನಿಲ್ಲುತ್ತದೆ. ಈ ಸರಣಿಗೂ ಮುನ್ನವೇ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ ಹಾಗೂ ನಾಯಕ ರೋಹಿತ್‌ ಶರ್ಮಾ ನಿವೃತ್ತರಾಗಿದ್ದರು. ಹೀಗಾಗಿ ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸುವುದು ಯಾರು ಎಂಬ ಪ್ರಶ್ನೆಗಳು ಉದ್ಭವಿಸಿದ್ದವು. ಅಲ್ಲದೆ ನಾಲ್ಕನೇ ಕ್ರಮಾಂಕದಲ್ಲಿ ಆಡುವುದು ಯಾರು ಎಂಬ ಪ್ರಶ್ನೆಗಳು ಎದ್ದಿವೆ. ಈ ಸರಣಿಯಲ್ಲಿ ಕೆಎಲ್ ರಾಹುಲ್‌ ಆರಂಭಿಕರಾಗಿ ಕಾಣಿಸಿಕೊಳ್ಳುವುದು ಪಕ್ಕಾ. ಇವರು 58 ಟೆಸ್ಟ್‌ ಪಂದ್ಯಗಳಲ್ಲಿ 33.57 ಸರಾಸರಿಯಲ್ಲಿ ರನ್ ಕಲೆ ಹಾಕಿದ್ದಾರೆ.

ಟೀಮ್ ಇಂಡಿಯಾದ ನಾಯಕ ಶುಭ್‌ಮನ್‌ ಗಿಲ್‌ ಹಾಗೂ ಸಾಯಿ ಸುದರ್ಶನ್‌ ಸಹ ಎರಡನೇ ಅನಧಿಕೃತ ಟೆಸ್ಟ್‌ ಪಂದ್ಯವನ್ನು ಆಡಬೇಕಿತ್ತು. ಆದರೆ ಐಪಿಎಲ್‌ನಲ್ಲಿ ಇವರ ತಂಡ ಪ್ಲೇ ಆಫ್‌ ತಲುಪಿದ್ದರಿಂದ ಇವರು ಇಂಗ್ಲೆಂಡ್ ಪ್ರವಾಸವನ್ನು ಬೆಳೆಸಿರಲಿಲ್ಲ. ಇನ್ನು ಈ ಇಬ್ಬರೂ ಆಟಗಾರರಿಗೆ ಲೀಡ್ಸ್‌ನಲ್ಲಿ ನಡೆಯುವ ಮೊದಲ ಟೆಸ್ಟ್‌ ಪಂದ್ಯಕ್ಕೂ ಮುನ್ನ ನಡೆಯುವ ಅಭ್ಯಾಸ ಪಂದ್ಯವನ್ನು ಆಡುವ ಅವಕಾಶ ಲಭಿಸುತ್ತದೆ. ಇಂಗ್ಲೆಂಡ್ ಟೆಸ್ಟ್‌ ಸರಣಿಯ ತಂಡದಲ್ಲಿ ಸ್ಥಾನ ಪಡೆದಿರುವ ಎಂಟು ಜನ ಆಟಗಾರರು ಇಂಗ್ಲೆಂಡ್ ಲಯನ್ಸ್ ವಿರುದ್ಧ ಎರಡನೇ ಅನಧಿಕೃತ ಟೆಸ್ಟ್‌ನಲ್ಲಿ ಆಡಲಿದ್ದಾರೆ.

KL Rahul Returns for India A s Second Unofficial Test Against England Lions

ಎರಡನೇ ಪಂದ್ಯದಲ್ಲಿ ವೇಗದ ಬೌಲರ್ ಆಕಾಶ್ ದೀಪ್ ಆಡಲಿದ್ದಾರೆ. ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್ ಮತ್ತು ಕರುಣ್ ನಾಯರ್ ಮೊದಲ ಪಂದ್ಯದಲ್ಲಿ ರನ್ ಗಳಿಸಿದರು. ಈ ಆಟಗಾರರ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿವೆ.

ಭಾರತ ಎ: ಅಭಿಮನ್ಯು ಈಶ್ವರನ್ (ನಾಯಕ), ಯಶಸ್ವಿ ಜೈಸ್ವಾಲ್, ಕರುಣ್ ನಾಯರ್, ಧ್ರುವ್ ಜುರೆಲ್, ನಿತೀಶ್ ಕುಮಾರ್ ರೆಡ್ಡಿ, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ಮಾನವ್ ಸುತಾರ್, ತನುಷ್ ಕೋಟ್ಯಾನ್, ಮುಖೇಶ್ ಕುಮಾರ್, ಆಕಾಶ್ ದೀಪ್, ಹರ್ಷಿತ್ ರಾಣಾ, ಅನ್ಶುಲ್ ಕಾಂಬೋಜ್, ಖಲೀಲ್ ಸರಜ್‌ಖಾನ್, ರುತುರಾಜ್ ಅಹ್ಮದ್, ಹರ್ಶ್‌ಫಾ ಗಕ್‌ವಾ, ರುತುರಾಜ್ ಖಾನ್ ದುಬೆ.

Story first published: Thursday, June 5, 2025, 17:09 [IST]
Other articles published on Jun 5, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+