Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಅಂತರಾಷ್ಟ್ರೀಯ ಏಕದಿನದಲ್ಲಿ ಕನ್ನಡಿಗ ರಾಹುಲ್ ಹೊಸ ಮೈಲಿಗಲ್ಲು!

IND vs AUS 2nd ODI : Rahul reaches a remarkable milestone | KL RAHUL | MILESTONE | ONEINDIA KANNADA
kl rahul set new mile stone in odi

ಟೀಮ್ ಇಂಡಿಯಾ ಪ್ರಮುಖ ಬ್ಯಾಟ್ಸ್‌ಮನ್ ಕನ್ನಡಿಗ ಕೆಎಲ್ ರಾಹುಲ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ಮುಟ್ಟಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಕೆಎಲ್ ರಾಹುಲ್ ಅಂತರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಸಾವಿರ ರನ್ ಪೂರೈಸಿದ ಸಾಧನೆ ಮಾಡಿದ್ದಾರೆ.

28 ಅಂತರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿರುವ ರಾಹುಲ್ 27 ಇನ್ನಿಂಗ್ಸ್‌ಗಳಲ್ಲಿ ಆಡಿದ್ದಾರೆ. ಈ ಮೂಲಕ ಅಂತರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಸಾವಿರ ರನ್ ಪೂರೈಸಿದವರ ಪಟ್ಟಿಯಲ್ಲಿ ಕೆಎಲ್ ರಾಹುಲ್ ಕಾಣಿಸಿದ್ದಾರೆ.

ಕೆಎಲ್ ರಾಹುಲ್ ಆಸ್ಟ್ರೇಲಿಯಾ ವಿರುದ್ಧ ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಕೇವಲ 52 ಎಸೆತ ಎದುರಿಸಿದ ರಾಹುಲ್ 80 ರನ್‌ಗಳನ್ನು ಬಾರಿಸಿದ್ದಾರೆ. ಈ ಮೂಲಕ ಕೆ.ಎಲ್ ರಾಹುಲ್ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡ ದೊಡ್ಡ ಮೊತ್ತ ಗಳಿಸಲು ಕಾರಣರಾಗಿದ್ದಾರೆ.

ಕೆಎಲ್ ರಾಹುಲ್ 2016ರಲ್ಲಿ ಜಿಂಬಾಬ್ವೆ ತಂಡದ ವಿರುದ್ಧ ಅಂತರಾಷ್ಟ್ರೀಯ ಏಕದಿನ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದರು. ಟೆಸ್ಟ್‌ನಲ್ಲಿ ಈಗಾಗಲೇ 2000 ರನ್‌ಗಳ ಮೈಲಿಗಲ್ಲು ದಾಟಿರುವ ಕೆಎಲ್ ರಾಹುಲ್, ಅಂತರಾಷ್ಟ್ರೀಯ ಟಿ20ಯಲ್ಲಿ 1237 ರನ್‌ಗಳಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ನಿರ್ಣಾಯಕ ಪಂದ್ಯವನ್ನು ರಾಜ್‌ಕೋಟ್‌ನಲ್ಲಿ ಆಡುತ್ತಿದೆ. ಈ ಪಂದ್ಯ ಟೀಮ್ ಇಂಡಿಯಾಗೆ ನಿರ್ಣಾಯಕವಾಗಿದ್ದು ಈ ಪಂದ್ಯದಲ್ಲಿ ಆಸ್ಟ್ರೇಲಿಯಾಗೆ 341ರನ್‌ಗಳ ಬೃಹತ್ ಗುರಿಯನ್ನು ನೀಡಿದೆ.

Story first published: Friday, January 17, 2020, 17:51 [IST]
Other articles published on Jan 17, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+