Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

KL Rahul: ಹರಿಯಾಣ ವಿರುದ್ಧದ ಪಂದ್ಯಕ್ಕೆ ಕರ್ನಾಟಕಕ್ಕೆ ಆನೆ ಬಲ: ಎದುರಾಳಿಗಳಿಗೆ ನಡುಕ

ದೇಶೀಯ ವಿಜಯ್ ಹಜಾರೆ ಏಕದಿನ ಸರಣಿಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರುವ ಕರ್ನಾಟಕ, ರಣಜಿ ಟ್ರೋಫಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದೆ. ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿ ಜಯ ಸಾಧಿಸಿದ್ದು, ನಾಕೌಟ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಈಗ ಕರ್ನಾಟಕ ರಣಜಿ ಟ್ರೋಫಿ ಸಿ ಗುಂಪಿನ ಪಂದ್ಯದಲ್ಲಿ ಹರಿಯಾಣ ವಿರುದ್ಧ ಕಾದಾಟ ನಡೆಸಲಿದೆ. ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಕೆ.ಎಲ್. ರಾಹುಲ್‌ ತಂಡಕ್ಕೆ ಎಂಟ್ರಿ ನೀಡಿದ್ದು, ರಾಜ್ಯ ತಂಡಕ್ಕೆ ಆನೆ ಬಲ ಬಂದಂತಾಗಿದೆ.

ಸೋಮವಾರ 18 ಆಟಗಾರರ ತಂಡವನ್ನು ಘೋಷಿಸಲಾಗಿದೆ. ಈ ಬಾರಿಯೂ ತಂಡವನ್ನು ಮಯಾಂಕ್‌ ಅಗರ್‌ವಾಲ್‌ ಮುನ್ನಡೆಸುತ್ತಿದ್ದು ಶ್ರೇಯಸ್ ಗೋಪಾಲ್‌ ಉಪನಾಯಕರಾಗಿದ್ದಾರೆ. ಕರ್ನಾಟಕ ಜ.30 ರಂದು ಸಿ ಗುಂಪಿನಲ್ಲಿ ಅಗ್ರಸ್ಥಾನವನ್ನು ಹೊಂದಿರುವ ಹರಿಯಾಣ ವಿರುದ್ಧ ಆಡಲಿದೆ. ಗಾಯದ ಸಮಸ್ಯೆಯಿಂದ ರಾಹುಲ್‌ ಅವರು ಪಂಜಾಬ್‌ ವಿರುದ್ಧ ಲೀಗ್‌ ಹಂತದ ಪಂದ್ಯವನ್ನು ಮಿಸ್ ಮಾಡಿಕೊಂಡಿದ್ದರು. ಈಗ ಅವರು ತಂಡವನ್ನು ಸೇರಿದ್ದು, ಮಂಗಳವಾರ ಹಾಗೂ ಬುಧವಾರ ಅಭ್ಯಾಸವನ್ನು ನಡೆಸಲಿದ್ದಾರೆ.

KL Rahul Set to Return for Karnataka s Crucial Ranji Trophy Match Against Haryana

2020ರ ಬಳಿಕ ಕೆಎಲ್ ರಾಹುಲ್ ಇದೇ ಮೊದಲ ಬಾರಿಗೆ ಕರ್ನಾಟಕ ಪರ ರಣಜಿ ಟ್ರೋಫಿಯಲ್ಲಿ ಆಡುತ್ತಿದ್ದಾರೆ. ಇವರು ದೇಶೀಯ ಟೂರ್ನಿಯಲ್ಲಿ ಕಳೆದ ಸೆಪ್ಟಂಬರ್‌ನಲ್ಲಿ ದುಲೀಪ್‌ ಟ್ರೋಫಿ ಆಡಿದ್ದರು. ಕರ್ನಾಟಕ ಸಿ ಗುಂಪಿನ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಹರಿಯಾಣ 26 ಅಂಕಗಳೊಂದಿಗೆ ಮೊದಲ ಸ್ಥಾನ, ಕೇರಳ 21 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಪಂಜಾಬ್‌ ವಿರುದ್ಧ ಕರ್ನಾಟಕ ಇನಿಂಗ್ಸ್ ಹಾಗೂ 207 ರನ್‌ ಜಯ ಸಾಧಿಸಿದ್ದರು. ಈ ಮೂಲಕ ಟೂರ್ನಿಯಲ್ಲಿ ಕರ್ನಾಟಕ ಎರಡನೇ ಗೆಲುವು ದಾಖಲಿಸಿತು.

ಆಸ್ಟ್ರೇಲಿಯಾ ಪ್ರವಾಸದಲ್ಲಿ ಕೆಎಲ್ ರಾಹುಲ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡಕ್ಕೆ ನೆರವಾಗಿದ್ರು. ಇಗ ಬಿಸಿಸಿ ಸೂಚಿಸಿದತೆ ಹಿರಿಯ ಆಟಗಾರರು ಸಹ ದೇಶೀಯ ಟರ್ನಿಯಗಳಲ್ಲು ಆಡುತ್ತಿದ್ದಾರೆ. ಅಲ್ಲದೆ ಅಂತಾರಾಷ್ಟ್ರೀಯ ಪಂದ್ಯಗಳಿಗೆ ನೀಡುವ ಮಹತ್ವವನ್ನು ದೇಶೀಯ ಕ್ರಿಕೆಟ್‌ಗೂ ನೀಡುವಂತೆ ಬಿಸಿಸಿಐ ತಿಳಿಸಿದೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಕೆಎಲ್ ರಾಹುಲ್‌ ಅವರ ಆರಂಭಿಕರಾಗಿ ಬ್ಯಾಟಿಂಗ್ ಮಾಡಿ ಅಮೋಘ ಇನಿಂಗ್ಸ್‌ಕಟ್ಟಿದ್ದರು. ಅಲ್ಲದೆ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದರು.

ಇನ್ನು ದೇಶೀಯ ಟೂರ್ನಿಗಳಲ್ಲಿ ಆಡುವಂತೆ ಟೀಮ್ ಇಂಡಿಯಾ ಕೋಚ್‌ ಗೌತಮ್ ಗಂಭೀರ್ ಸಹ ಆಟಗಾರರಿಗೆ ಸಲಹೆ ನೀಡಿದ್ದಾರೆ. ಎಲ್ಲ ಕ್ರಿಕೆಟ್‌ ಆಟಗಾರರು ಬಿಡುವಿನ ವೇಳೆಯಲ್ಲಿ ದೇಶೀಯ ಟೂರ್ನಿಯನ್ನು ಆಡಬೇಕು ಎಂದಿದ್ದಾರೆ.

ಕರ್ನಾಟಕ ತಂಡ: ಮಯಾಂಕ್ ಅಗರ್ವಾಲ್ (ನಾಯಕ), ಕೆಎಲ್ ರಾಹುಲ್, ಶ್ರೇಯಸ್ ಗೋಪಾಲ್ (ಉಪನಾಯಕ), ದೇವದತ್ ಪಡಿಕ್ಕಲ್, ಕೆವಿ ಅನೀಶ್, ಆರ್ ಸ್ಮರಣ್, ಕೆಎಲ್ ಶ್ರೀಜಿತ್ (ವಿಕೆಟ್‌ ಕೀಪರ್), ಅಭಿನವ್ ಮನೋಹರ್, ಹಾರ್ದಿಕ್ ರಾಜ್, ಪ್ರಸಿದ್ಧ್ ಕೃಷ್ಣ, ವಿದ್ವತ್ ಕಾವೇರಪ್ಪ, ವಾಸುಕಿ ಕೌಶಿಕ್, ಅಭಿಲಾಷ್ ಶೆಟ್ಟಿ ಯಶೋವರ್ಧನ್ ಪರಂತಪ್, ನಿಕಿನ್ ಜೋಸ್, ಸುಜಯ್ ಸಾತೇರಿ (ವಿಕೆಟ್ ಕೀಪರ್), ಮೊಹ್ಸಿನ್ ಖಾನ್.

Story first published: Monday, January 27, 2025, 16:13 [IST]
Other articles published on Jan 27, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+