For Quick Alerts
ALLOW NOTIFICATIONS  
For Daily Alerts
 

ಟೀಂ ಇಂಡಿಯಾ ಪರ ಕಂಬ್ಯಾಕ್ ಮಾಡಲು ಭರ್ಜರಿ ಅಭ್ಯಾಸ ನಡೆಸುತ್ತಿರುವ KL ರಾಹುಲ್

KL Rahul

ಟೀಂ ಇಂಡಿಯಾ ಲಿಮಿಟೆಡ್ ಓವರ್ ಕ್ರಿಕೆಟ್‌ನ ಉಪನಾಯಕ ಕೆ.ಎಲ್ ರಾಹುಲ್ ಅವರು ಹರ್ನಿಯಾದಿಂದ ಚೇತರಿಸಿಕೊಂಡಿದ್ದಾರೆ. ಐಪಿಎಲ್ 2022ರ ಸೀಸನ್‌ನಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನ ಮುನ್ನೆಡೆಸಿದ ರಾಹುಲ್, ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೂ ಮುನ್ನ ಗಾಯಗೊಂಡರು.

ಜರ್ಮನಿಯಲ್ಲಿ ಚಿಕಿತ್ಸೆ ಪಡೆದು ಎನ್‌ಸಿಎ ಶಿಬಿರದಲ್ಲಿ ಚೇತರಿಸಿಕೊಳ್ಳುತ್ತಿದ್ದ ರಾಹುಲ್ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪ್ರಾರಂಭಿಸಿದ್ದಾರೆ. ಜಿಮ್‌ನಲ್ಲಿ ಬೆವರು ಹರಿಸುತ್ತಿರುವ ಕೆ.ಎಲ್ ವಾರ್ಮ್ ಅಪ್ ಜೊತೆಗೆ ಅನೇಕ ಫಿಟ್ನೆಸ್ ಕುರಿತಾದ ವರ್ಕೌಟ್‌ ಮಾಡುತ್ತಿದ್ದಾರೆ.

ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಮತ್ತೆ ತರಬೇತಿ ಪಡೆದು ತಂಡಕ್ಕೆ ಮರಳಲು ಸಿದ್ಧತೆ ನಡೆಸುತ್ತಿದ್ದೇನೆ ಎಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ಕೆ.ಎಲ್ ರಾಹುಲ್ ಹಂಚಿಕೊಂಡಿದ್ದಾರೆ.

ಆ ವಿಡಿಯೋದಲ್ಲಿ ಅವರು ತಮ್ಮ ಜಿಮ್ ವರ್ಕೌಟ್‌ಗಳನ್ನೂ ತೋರಿಸಿದ್ದಾರೆ. ಅದಕ್ಕೆ ಕಮ್ ಬ್ಯಾಕ್ ಸ್ಟ್ರಾಂಗರ್ ಎಂಬ ಶೀರ್ಷಿಕೆಯನ್ನೂ ನೀಡಿದ್ದಾರೆ. ರಾಹುಲ್ ನೆಟ್ಸ್ ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ವೀಡಿಯೋ ಮೊನ್ನೆ ಬಿಡುಗಡೆಯಾಗಿದ್ದು ಗೊತ್ತೇ ಇದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಏಕೆಂದರೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿರುವ ಭಾರತ ಮಹಿಳಾ ಕ್ರಿಕೆಟ್ ತಂಡದ ಹಿರಿಯ ವೇಗಿ ಜೂಲನ್ ಗೋಸ್ವಾಮಿ ಅವರ ಬೌಲಿಂಗ್‌ನಲ್ಲಿ ರಾಹುಲ್ ಬ್ಯಾಟಿಂಗ್ ಅಭ್ಯಾಸ ನಡೆಸಿದ್ದು ವಿಡಿಯೋದಲ್ಲಿ ಕಂಡುಬಂದಿದೆ.

ಜುಲೈ 29 ರಿಂದ ಆಗಸ್ಟ್ 7 ರವರೆಗೆ ವೆಸ್ಟ್ ಇಂಡೀಸ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೆ ಕೆಎಲ್ ರಾಹುಲ್ ಆಯ್ಕೆಯಾಗಿದ್ದಾರೆ. ಆದರೆ ಎನ್‌ಸಿಎಯಲ್ಲಿ ಕಡ್ಡಾಯವಾಗಿ ಫಿಟ್‌ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾದರೆ ಮಾತ್ರ ರಾಹುಲ್ ತಂಡಕ್ಕೆ ಆಯ್ಕೆಯಾಗುತ್ತಾರೆ. ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿದ್ದ ರಾಹುಲ್, ಐಪಿಎಲ್ ನಂತರ ಗಾಯಗೊಂಡು ಜರ್ಮನಿಯಲ್ಲಿ ಹರ್ನಿಯಾಕ್ಕೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೆ ನಾಯಕನಾಗಿ ಆಯ್ಕೆಯಾಗಿದ್ದರೂ, ಗಾಯದ ಕಾರಣದಿಂದ ಹೊರಗುಳಿದಿದ್ದರು. ಅವರ ಅನುಪಸ್ಥಿತಿಯಲ್ಲಿ ರಿಷಬ್ ಪಂತ್ ನಾಯಕತ್ವವನ್ನು ವಹಿಸಿಕೊಂಡರು. ಹಾರ್ದಿಕ್ ಪಾಂಡ್ಯ ಐರ್ಲೆಂಡ್‌ನಲ್ಲಿ ಭಾರತ ಟಿ20 ತಂಡವನ್ನು ಮುನ್ನಡೆಸಿದರು.

ಭಾರತದ ವೆಸ್ಟ್ ಇಂಡೀಸ್ ಪ್ರವಾಸವು ಜುಲೈ 22 ರಿಂದ ಟ್ರಿನಿಡಾಡ್‌ನಲ್ಲಿ ಮೂರು ಪಂದ್ಯಗಳ ಏಕದಿನ ಸರಣಿಯೊಂದಿಗೆ ಪ್ರಾರಂಭವಾಗಲಿದೆ. ಆ ಬಳಿಕ ಐದು ಪಂದ್ಯಗಳ ಟಿ20 ಸರಣಿ ನಡೆಯಲಿದ್ದು ಕೆ,ಎಲ್ ರಾಹುಲ್ ಕೂಡ ಆಯ್ಕೆಯಾಗಿದ್ದು, ಆಡುವುದು ಅಥವಾ ಬಿಡುವುದು ರಾಹುಲ್ ಫಿಟ್ನೆಸ್ ಮೇಲೆ ಅವಲಂಬಿತಗೊಂಡಿದೆ.

Story first published: Thursday, July 21, 2022, 9:46 [IST]
Other articles published on Jul 21, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+