Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಇಂಗ್ಲೆಂಡ್: ಕೆಎಲ್ ರಾಹುಲ್ ಭರ್ಜರಿ ಶತಕಕ್ಕೆ ಟ್ವಿಟ್ಟರ್‌ನಲ್ಲಿ ಶುಭಾಶಯಗಳ ಸುರಿಮಳೆ

KL Rahul smacks a beautiful Century against England, Twitter Reactions

ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟ್ಸ್‌ಮನ್‌ಗಳು ಭರ್ಜರಿ ಬ್ಯಾಟಿಂಗ್ ಪ್ರದರ್ಶನಿಸಿದ್ದಾರೆ. ಕೊಹ್ಲಿ ಹಾಗೂ ರಿಷಭ್ ಪಂತ್ ಅರ್ಧ ಶತಕವನ್ನು ಸಿಡಿಸಿ ಮಿಂಚಿದರೆ ಕನ್ನಡಿಗ ಕೆಎಲ್ ರಾಹುಲ್ ಭರ್ಜರಿ ಶತಕವನ್ನು ಬಾರಿಸಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದರು. 108 ರನ್‌ ಬಾರಿಸಿದ ಕೆಎಲ್ ರಾಹುಲ್ ಈ ಮೂಲಕ ಐದನೇ ಶತಕವನ್ನು ಸಂಭ್ರಮಿಸಿದರು.

ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅರ್ಧ ಶತಕ ಸಿಡಿಸಿ ಮಿಂಚಿದ್ದ ಕೆಎಲ್ ರಾಹುಲ್ ದ್ವಿತೀಯ ಪಂದ್ಯದಲ್ಲಿ ಅದನ್ನು ಶತಕವನ್ನಾಗಿ ಪರಿವರ್ತಿಸುವಲ್ಲಿ ಸಫಲರಾದರು. ಈ ಮೂಲಕ ತಾವು ಅತ್ಯುತ್ತಮ ಫಾರ್ಮ್‌ಗೆ ಮರಳಿರುವುದನ್ನು ಮತ್ತೊಮ್ಮೆ ಖಚಿತಪಡಿಸಿದ್ದಾರೆ.

ಇನ್ನಿ ಕೆಎಲ್ ರಾಹುಲ್ ಸಿಡಿಸಿದ ಶತಕಕ್ಕೆ ಸಾಕಷ್ಟು ಪ್ರಶಂಸೆಗಳು ವ್ಯಕ್ತವಾಗಿದೆ. ಮಾಜಿ ಕ್ರಿಕೆಟಿಗರು ಹಾಗೂ ಅಭಿಮಾನಿಗಳು ಕೆಎಲ್ ರಾಹುಲ್ ಶತಕವನ್ನು ಸಾಕಷ್ಟು ಸಂಭ್ರಮಿಸಿದ್ದಾರೆ. ಟ್ವಿಟ್ಟರ್‌ನಲ್ಲಿ ರಾಹುಲ್‌ ಪ್ರದರ್ಶನಕ್ಕೆ ಮೆಚ್ಚುಗೆಯ ಸುರಿಮಳೆಯೇ ಸುರಿದಿದೆ.

ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಉತ್ತಮ ಲಯದಲ್ಲಿರಲಿಲ್ಲ. ಹೀಗಾಗಿ ರನ್ ಗಳಿಸಲು ಪರದಾಡಿದ್ದರು. ಆಡಿದ ನಾಲ್ಕು ಪಂದ್ಯಗಳಲ್ಲಿ ಎರಡು ಶೂನ್ಯ ಹಾಗೂ ಒಂದು ಬಾರಿ ಒಂಟಿ ರನ್ ತೆಗೆದಿದ್ದರು. ಇನ್ನೊಂದು ಬಾರಿ 14 ರನ್‌ಗಳಿಸಿ ವಿಕೆಟ್ ಒಪ್ಪಿಸಿದ್ದರು. ಹೀಗಾಗಿ ರಾಹುಲ್ ಫಾರ್ಮ್ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿತ್ತು. ಈ ಎಲ್ಲಾ ಟೀಕೆಗಳಿಗೆ ರಾಹುಲ್ ಬ್ತಾಟ್ ಮೂಲಕವೇ ಉತ್ತರವನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ.

Story first published: Friday, March 26, 2021, 18:26 [IST]
Other articles published on Mar 26, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+