KL Rahul: ಕೆಎಲ್ ರಾಹುಲ್ ಸ್ಫೋಟಕ ಶತಕ: ವಿರಾಟ್ ದಾಖಲೆ ಅಳಿಸಿದ ಕನ್ನಡಿಗ
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕೆಎಲ್ ರಾಹುಲ್ ತಮ್ಮ ಅಮೋಘ ಬ್ಯಾಟಿಂಗ್ ಮುಂದುವರೆಸಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಹುಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದರು. ಈ ಪಂದ್ಯದಲ್ಲಿ ರಾಹುಲ್ ಕ್ಲಾಸಿಕ್ ಆಟದ ಪ್ರದರ್ಶನ ನೀಡಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಧಾರವಾದರು. ಅಲ್ಲದೆ ಈ ವೇಳೆ ದೊಡ್ಡ ದಾಖಲೆಯನ್ನು ಬರೆದಿದ್ದಾರೆ.
18ನೇ ಆವೃತ್ತಿಯ ಐಪಿಎಲ್‌ನ 60ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಉತ್ತಮ ಮೊತ್ತ ಕಲೆ ಹಾಕಿತು. ಡೆಲ್ಲಿ ಉತ್ತಮ ರನ್ ಕಲೆ ಹಾಕಿ ತಂಡಕ್ಕೆ ಆಧಾರವಾದರು. ಇವರ ಭರ್ಜರಿ ಆಟದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 3 ವಿಕೆಟ್‌ಗೆ 199 ರನ್ ಕಲೆ ಹಾಕಿದೆ.

ಈ ಪಂದ್ಯದಲ್ಲಿ ರಾಹುಲ್ 33 ರನ್ ಬಾರಿಸುತ್ತಿದ್ದಂತೆ ದೊಡ್ಡ ದಾಖಲೆಯನ್ನು ಬರೆದಿದ್ದಾರೆ. ಕೆಎಲ್ ರಾಹುಲ್ ಇನಿಂಗ್ಸ್‌ನ ಆರನೇ ಓವರ್‌ನ ಐದನೇ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಮಹತ್ವದ ಮೈಲುಗಲ್ಲು ತಲುಪಿದರು. ರಾಹುಲ್ ಟಿ20 ಕ್ರಿಕೆಟ್‌ನಲ್ಲಿ 8000 ರನ್‌ಗಳನ್ನು ಪೂರ್ಣಗೊಳಿಸಿದ ದಾಖಲೆಯನ್ನು ಬರೆದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ 8000 ರನ್‌ಗಳನ್ನು ವೇಗವಾಗಿ ಕಲೆ ಹಾಕಿದ, ಭಾರತದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ವಿರಾಟ್ ದಾಖಲೆ ಉಡೀಸ್
ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ 33 ರನ್ ಬಾರಿಸಿ ಕೆಎಲ್ ರಾಹುಲ್ ತಮ್ಮ ಸ್ನೇಹಿತ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಅಳಿಸಿ ಹಾಕಿದರು. ವಿರಾಟ್ ಈ ಸಾಧನೆಯನ್ನು ಮಾಡಲು 243 ಇನಿಂಗ್ಸ್‌ಗಳನ್ನು ತೆಗೆದುಕೊಂಡಿದ್ದರು. ಆದರೆ ರಾಹುಲ್ ಜಸ್ಟ್ 224 ಇನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಈ ಮೂಲಕ 8 ಸಾವಿರ ರನ್ ವೇಗವಾಗಿ ಕಲೆ ಹಾಕಿದ ವಿಶ್ವದ ಮೂರನೇ ಆಟಗಾರ ಎಂಬ ಖ್ಯಾತಿ ತಮ್ಮದಾಗಿಸಿಕೊಂಡಿದ್ದಾರೆ.
ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ 8000 ರನ್ ಗಳಿಸಿದ ಬ್ಯಾಟರ್ಸ್
ಕ್ರಿಸ್ ಗೇಲ್ - 213 ಇನ್ನಿಂಗ್ಸ್
ಬಾಬರ್ ಅಜಮ್ - 218 ಇನ್ನಿಂಗ್ಸ್
ಕೆಎಲ್ ರಾಹುಲ್ - 224 ಇನ್ನಿಂಗ್ಸ್
ವಿರಾಟ್ ಕೊಹ್ಲಿ - 243 ಇನ್ನಿಂಗ್ಸ್
ಮೊಹಮ್ಮದ್ ರಿಜ್ವಾನ್ - 244 ಇನ್ನಿಂಗ್ಸ್
ಕೆಎಲ್ ರಾಹುಲ್ ಶತಕ
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಭರವಸೆಯ ಆಟಗಾರ ಕೆಎಲ್ ರಾಹುಲ್ ಅಮೋಘ ಬ್ಯಾಟಿಂಗ್ ಬಾರಿಸಿದರು. ಇವರು ತಮ್ಮ ನೈಜ್ಯ ಬ್ಯಾಟಿಂಗ್ ಮುಂದುವರಿಸಿ ತಂಡಕ್ಕೆ ನೆರವಾದರು. ಡೆಲ್ಲಿ ತಂಡದ ಪರ ಟಾಪ್ ಆರ್ಡರ್ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದಾಗ, ಟೀಮ್ ಮ್ಯಾನೇಜ್ಮೆಂಟ್ ರಾಹುಲ್ ಅವರಿಗೆ ಓಪನಿಂಗ್ ಮಾಡುವ ಜವಾಬ್ದಾರಿಯನ್ನು ನೀಡಿತು. ತಂಡದ ನೀಡಿದ್ದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ ರಾಹುಲ್ ಅಮೋಘ ಬ್ಯಾಟಿಂಗ್ ನಡೆಸಿ ತಂಡಕ್ಕೆ ನೆರವಾದರು. ಅಲ್ಲದೆ ಐಪಿಎಲ್‌ನಲ್ಲಿ ಐದನೇ ಶತಕ ಬಾರಿಸಿ ಅಬ್ಬರಿಸಿದರು.
ಐಪಿಎಲ್‌ನಲ್ಲಿ ಮೂರು ವರ್ಷಗಳ ಬಳಿಕ ಶತಕ ಬಾರಿಸಿದ ಸಾಧನೆ ಮಾಡಿದರು. ಅಬ್ಬದ ಬ್ಯಾಟಿಂಗ್ ಪ್ರದರ್ಶನ ನೀಡಿದ ರಾಹುಲ್ 65 ಎಸೆತಗಳಲ್ಲಿ 14 ಬೌಂಡರಿ, 4 ಸಿಕ್ಸರ್ ಸಹಾಯದಿಂದ ಅಜೇಯ 112 ರನ್ ಸಿಡಿಸಿ ತಂಡಕ್ಕೆ ನೆರವಾದರು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡ ದೊಡ್ಡ ಮೊತ್ತ ಕಲೆ ಹಾಕುವಲ್ಲಿ ರಾಹುಲ್ ನೆರವಾದ್ರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications