For Quick Alerts
ALLOW NOTIFICATIONS  
For Daily Alerts
 

KL Rahul: ವಿರಾಟ್‌, ರೋಹಿತ್‌ ಅನುಪಸ್ಥಿತಿ: ಅನುಭವಿಯ ಜವಾಬ್ದಾರಿ ಹೊರಲಿದ್ದಾರೆ ಕನ್ನಡಿಗ

ಇನ್ನೇನು ಕೆಲವೇ ದಿನಗಳಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟೆಸ್ಟ್‌ ಸರಣಿ ಆರಂಭವಾಗಲಿದೆ. ಈ ಸರಣಿಗೆ ಟೀಮ್ ಇಂಡಿಯಾಕ್ಕೆ ಅನುಭವಿಗಳ ಅನುಪಸ್ಥಿತಿ ಎದ್ದು ಕಾಣುತ್ತಿದೆ. ಈ ಸರಣಿಗೂ ಮುನ್ನ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ, ನಾಯಕ ರೋಹಿತ್ ಶರ್ಮಾ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ತಂಡ ಯುವ ಆಟಗಾರರಿಂದ ಕೂಡಿಕೊಂಡಿದೆ. ಯುವ ಆಟಗಾರರಲ್ಲಿ ಈ ಒಬ್ಬ ಪ್ಲೇಯರ್‌ ಜವಾಬ್ದಾರಿಯನ್ನು ಹೊರಲು ಸಿದ್ಧರಾಗಿದ್ದಾರೆ.

ಇಂಗ್ಲೆಂಡ್‌ ನೆಲದಲ್ಲಿ ಆಡುವುದು ಎಂದರೆ ಸವಾಲಿನ ಸಂಗತಿ. ಈ ಪಿಚ್‌ಗಳಲ್ಲಿ ಬೌನ್ಸ್‌ ಇರುತ್ತದೆ. ಬೌನ್ಸ್‌ ಹಾಗೂ ವೇಗದ ಬೌಲರ್‌ಗಳ ಪ್ರಶ್ನೆಗೆ ಉತ್ತರಿಸುವುದು ಸುಲಭದ ಮಾತಲ್ಲ. ಹೀಗಾಗಿ ಟೀಮ್ ಇಂಡಿಯಾ ಈ ಸರಣಿಯಲ್ಲಿ ಹೇಗೆ ಆಡುತ್ತದೆ ಎಂಬುದರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ವೇಳೆ ಕರ್ನಾಟಕದ ಸ್ಟಾರ್ ಆಟಗಾರ ತಾನು ಜವಾಬ್ದಾರಿಯನ್ನು ಹೊತ್ತುಕೊಳ್ಳಲು ಸಿದ್ಧ ಎಂದು ಸಾರಿ ಹೇಳಿದಂತೆ ಇದೆ.

KL Rahul Steps Up to Lead India s Batting Charge in Post-Kohli Rohit Era

ಏಷ್ಯಾ ಖಂಡದ ಹೊರಗೆ ಉತ್ತಮ ಬ್ಯಾಟಿಂಗ್‌ ನಡೆಸಿ, ಈಗಾಗಲೇ ವಿಶ್ವ ಕ್ರಿಕೆಟ್‌ನಲ್ಲಿ ಸದ್ದು ಮಾಡಿರುವ ಆಟಗಾರ ಕೆಎಲ್ ರಾಹುಲ್. ಇಂಗ್ಲೆಂಡ್‌ ಸರಣಿಯಲ್ಲಿ ಇವರ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿರಲಿವೆ. ಇವರು ಈಗಾಗಲೇ ಇಂಗ್ಲೆಂಡ್‌ ಲಯನ್ಸ್‌ ವಿರುದ್ಧದ ಅನಧಿಕೃತ ಟೆಸ್ಟ್‌ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ಈ ಮೂಲಕ ತಮ್ಮ ಆಟವನ್ನು ಕಡೆಗಣಿಸದಂತೆ ಎದುರಾಳಿ ತಂಡದ ಆಟಗಾರರಿಗೆ ಎಚ್ಚರಿಕೆ ನೀಡಿದ್ದಾರೆ. ರಾಹುಲ್‌ ಸಹ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ ದಶಕದ ಹತ್ತಿರವಾಗಿದೆ. ಈಗ ಇವರು ಜವಾಬ್ದಾರಿಯನ್ನು ಹೊತ್ತುಕೊಂಡು ಬ್ಯಾಟಿಂಗ್ ಮಾಡುವ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ.

ಭಾರತ "ಎ" ಪರ ಮಿಂಚು

ಇಂಗ್ಲೆಂಡ್‌ ಲಯನ್ಸ್‌ ವಿರುದ್ಧದ ಪಂದ್ಯದಲ್ಲಿ ರಾಹುಲ್‌ ಮೊದಲ ಇನಿಂಗ್ಸ್‌ನಲ್ಲಿ ಅಮೋಘ ಶತಕ ಬಾರಿಸಿ ತಂಡಕ್ಕೆ ಆಧಾರವಾಗಿದ್ದರು. ಇನ್ನು ಎರಡನೇ ಇನಿಂಗ್ಸ್‌ನಲ್ಲೂ ರಾಹುಲ್‌ ಕೆಚ್ಚೆದೆಯ ಬ್ಯಾಟಿಂಗ್ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ. ಎರಡನೇ ಇನಿಂಗ್ಸ್‌ನಲ್ಲಿ ರಾಹುಲ್‌ ನಾಯಕ ಅಭಿಮನ್ಯು ಈಶ್ವರನ್‌ ಅವರ ಜೊತೆ 112 ಎಸೆತಗಳಲ್ಲಿ 88 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿದರು. ಈ ಮೂಲಕ ಇಂಗ್ಲೆಂಡ್‌ ಸರಣಿಗೆ ತಾನು ಸಂಪೂರ್ಣ ಸಿದ್ದ ಎಂಬುದನ್ನು ಸಾರಿ ಹೇಳಿದ್ದಾರೆ.

KL Rahul Steps Up to Lead India s Batting Charge in Post-Kohli Rohit Era

ಆರಂಭಿಕರಾಗಿ ರಾಹುಲ್‌

ಕೆಎಲ್ ರಾಹುಲ್ ಯಾವ ಕ್ರಮಾಂಕದಲ್ಲಿ ಆಡುತ್ತಾರೆ ಎಂಬ ಪ್ರಶ್ನೆಗಳು ಈ ಮೊದಲು ಎದ್ದಿದ್ದವು. ಆದರೆ ರೋಹಿತ್‌ ಶರ್ಮಾ ನಿವೃತ್ತಿಯಿಂದ ತೆರವಾದ ಸ್ಥಾನವನ್ನು ಕೆಎಲ್ ರಾಹುಲ್ ತುಂಬಲು ಸಿದ್ಧರಾಗಿದ್ದಾರೆ. ಇವರು ಈಗಾಗಲೇ ಇಂಗ್ಲೆಂಡ್‌ ಲಯನ್ಸ್‌ ವಿರುದ್ಧದ ಒಂದು ಅನಧಿಕೃತ ಟೆಸ್ಟ್‌ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕೆ ಇಳಿದು ಯಶಸ್ಸು ಕಂಡಿದ್ದಾರೆ. ಹೀಗಾಗಿ ಮುಂಬರುವ ಇಂಗ್ಲೆಂಡ್‌ ಸರಣಿಯಲ್ಲಿ ಇವರು ಆರಂಭಿಕರಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

Story first published: Monday, June 9, 2025, 13:52 [IST]
Other articles published on Jun 9, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+