ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಏಕಲವ್ಯ ಪ್ರಶಸ್ತಿ ನೀಡಿದ ಕರ್ನಾಟಕ ಸರ್ಕಾರಕ್ಕೆ ನಾನು ಅಭಾರಿ: ಕೆ.ಎಲ್ ರಾಹುಲ್

KL Rahul Thanks Karnataka Government For Ekalavya Award

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ, ಪ್ರವಾಸೋದ್ಯಮ, ಯುವ ಸಬಲೀಕರಣ ಕ್ರೀಡಾ ಇಲಾಖೆಯು ಕನ್ನಡ ರಾಜ್ಯೋತ್ಸವ ದಿನದಂದು 2017, 2018 ಮತ್ತು 2019ನೇ ಸಾಲಿನ ಏಕಲವ್ಯ, ಜೀವವವಮಾನ ಸಾಧನೆ, ಕರ್ನಾಟಕ ಕ್ರೀಡಾ ರತ್ನ, ಕ್ರೀಡಾ ಪೋಷಕ ಮತ್ತು ಎನ್.ಎಸ್.ಎಸ್ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಿತು. ಇದರಲ್ಲಿ ರಾಜ್ಯದ ಕ್ರಿಕೆಟಿಗರಾದ ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್ ಮತ್ತು ವೇದಾ ಕೃಷ್ಣಮೂರ್ತಿಗೆ ಪ್ರತಿಷ್ಠಿತ ಏಕಲವ್ಯ ಪ್ರಶಸ್ತಿ ಲಭಿಸಿದೆ.

ಈ ಹಿನ್ನೆಲೆಯಲ್ಲಿ ಏಕಲವ್ಯ ಪ್ರಶಸ್ತಿಗೆ ಆಯ್ಕೆ ಮಾಡಿರುವ ಕರ್ನಾಟಕ ಸರ್ಕಾರಕ್ಕೆ ಟೀಮ್‌ ಇಂಡಿಯಾ ಆರಂಭಿಕ ಹಾಗೂ ಕಿಂಗ್ಸ್ ಇಲೆವೆನ್‌ ನಾಯಕ ಕೆ.ಎಲ್‌ ರಾಹುಲ್‌ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಮುಂಬರುವ ಆಸ್ಟ್ರೇಲಿಯಾ ವಿರುದ್ಧ ಸರಣಿಗೆ ಟೀಮ್ ಇಂಡಿಯಾ ಉಪನಾಯಕನಾಗಿ ಆಯ್ಕೆಯಾಗಿರುವ ರಾಹುಲ್‌ಗೆ ಇದೀಗ ಮತ್ತೊಂದು ಗರಿ ಸಿಕ್ಕಿದೆ.

ಮಯಾಂಕ್- ರಾಹುಲ್‌ಗೆ ಹೊಸ ಹೆಸರು ನೀಡಿದ ಸೆಹ್ವಾಗ್ಮಯಾಂಕ್- ರಾಹುಲ್‌ಗೆ ಹೊಸ ಹೆಸರು ನೀಡಿದ ಸೆಹ್ವಾಗ್

'' ಕರ್ನಾಟಕ ಸರ್ಕಾರದಿಂದ ಏಕಲವ್ಯ ಪ್ರಶಸ್ತಿಯನ್ನು ಸ್ವೀಕರಿಸಲು ತುಂಬಾ ಹೆಮ್ಮೆಯೆನಿಸುತ್ತಿದೆ. ಈ ಗೌರವವನ್ನು ನೀಡಿದ ಕರ್ನಾಟಕ ಸರಕಾರಕ್ಕೆ ನಾನು ಅಭಾರಿಯಾಗಿದ್ದೇನೆ. ಮತ್ತೊಮ್ಮೆ ಧನ್ಯವಾದಗಳು'' ಎಂದು ಕೆ.ಎಲ್ ರಾಹುಲ್ ಟ್ವೀಟ್ ಮಾಡಿದ್ದಾರೆ.




''ಏಕಲವ್ಯ ಪ್ರಶಸ್ತಿ ನೀಡಿದ ಕರ್ನಾಟಕ ಸರ್ಕಾರಕ್ಕೆ ಧನ್ಯವಾದಗಳು. ನನ್ನ ತರಬೇತುದಾರರು, ತಂಡದ ಸದಸ್ಯರು, ಸ್ನೇಹಿತರು ಮತ್ತು ಕುಟುಂಬಗಳ ಬೆಂಬಲವಿಲ್ಲದೆ ಅದು ಸಾಧ್ಯವಾಗುವುದಿಲ್ಲ. ನಮ್ಮ ರಾಜ್ಯ ಮತ್ತು ಭಾರತವು ಹೆಮ್ಮೆ ಪಡುವಂತೆ ಮಾಡಲು ನಾನು ನಿರಂತರವಾಗಿ ಶ್ರಮಿಸುತ್ತೇನೆ'' ಎಂದು ಕೆ.ಎಲ್ ರಾಹುಲ್ ಹೇಳಿದ್ದಾರೆ

ಇನ್ನು ಕೆ.ಎಲ್ ರಾಹುಲ್ ಸ್ನೇಹಿತ ಹಾಗೂ ಟೀಮ್ ಇಂಡಿಯಾ ಆಟಗಾರ ಮಯಾಂಕ್ ಅಗರ್ವಾಲ್ ಕೂಡ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.

Story first published: Monday, November 2, 2020, 22:35 [IST]
Other articles published on Nov 2, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X