For Quick Alerts
ALLOW NOTIFICATIONS  
For Daily Alerts
 

ರಾಹುಲ್ vs ಕಿಶನ್: ಪಾಕ್ ವಿರುದ್ಧದ ಸೂಪರ್ 4 ಪಂದ್ಯಕ್ಕೆ ರೋಹಿತ್ ಶರ್ಮಾ ಯಾರನ್ನು ಆಯ್ಕೆ ಮಾಡುತ್ತಾರೆ?

ತೊಡೆ ಗಾಯದಿಂದ ಚೇತರಿಸಿಕೊಂಡು ಭಾರತ ತಂಡಕ್ಕೆ ಹಿಂದಿರುಗಿರುವ ವಿಕೆಟ್‌ಕೀಪರ್-ಬ್ಯಾಟರ್ ಕೆಎಲ್ ರಾಹುಲ್ ಅವರು 2023ರ ಏಷ್ಯಾ ಕಪ್ ಪಂದ್ಯಾವಳಿಯ ಸೂಪರ್ 4 ಹಂತದ ಮೊದಲ ಪಂದ್ಯಕ್ಕೆ ಮುನ್ನ ಶ್ರೀಲಂಕಾದಲ್ಲಿ ಭಾರತ ತಂಡವನ್ನು ಕೂಡಿಕೊಂಡಿದ್ದಾರೆ.

ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಭಾನುವಾರ, ಸೆಪ್ಟೆಂಬರ್ 10ರಂದು ಕೊಲಂಬೊದಲ್ಲಿ ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಬಳಿಕ ಬಾಂಗ್ಲಾದೇಶ ಮತ್ತು ಹಾಲಿ ಚಾಂಪಿಯನ್ ಶ್ರೀಲಂಕಾ ವಿರುದ್ಧ ಪಂದ್ಯಗಳನ್ನು ಆಡಲಿದೆ.

KL Rahul vs Ishan Kishan: Who Will Rohit Sharma Choose for India-Pakistan Asia Cup Match?

2023ರ ಐಪಿಎಲ್‌ನಲ್ಲಿನ ಪಂದ್ಯವೊಂದರಲ್ಲಿ ಕೆಎಲ್ ರಾಹುಲ್ ತನ್ನ ತೊಡೆ ಗಾಯಕ್ಕೆ ತುತ್ತಾಗಿದ್ದರು. ನಂತರ ನಾಲ್ಕು ತಿಂಗಳಿಗಿಂತ ಹೆಚ್ಚು ಕಾಲ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ಹೊರಗುಳಿಯಬೇಕಾಯಿತು.

ಲಂಡನ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಸ್ವಲ್ಪ ಕಾಲ ವಿಶ್ರಾಂತಿ ಪಡೆದ ಕೆಎಲ್ ರಾಹುಲ್, ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ)ನಲ್ಲಿ ತಮ್ಮ ಪುನರ್ವಸತಿಯನ್ನು ಪ್ರಾರಂಭಿಸಿದರು.

KL Rahul vs Ishan Kishan: Who Will Rohit Sharma Choose for India-Pakistan Asia Cup Match?

ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಇಬ್ಬರೂ ಏಷ್ಯಾ ಕಪ್ ತಂಡದಲ್ಲಿ

2023ರ ಏಷ್ಯಾ ಕಪ್ ಪಂದ್ಯಾವಳಿಗೆ ಭಾರತ ತಂಡವನ್ನು ಪ್ರಕಟಿಸುವ ಕೆಲವು ದಿನಗಳ ಮೊದಲು, ಕೆಎಲ್ ರಾಹುಲ್ ನೆಟ್ಸ್‌ನಲ್ಲಿ ಬ್ಯಾಟಿಂಗ್ ಅಭ್ಯಾಸವನ್ನು ಮಾಡುತ್ತಿದ್ದರು. ಬೆಂಗಳೂರಿನಲ್ಲಿ ನಡೆದ ಅಭ್ಯಾಸ ಪಂದ್ಯದಲ್ಲೂ ಕಾಣಿಸಿಕೊಂಡರು. ಜೊತೆಗೆ ಶ್ರೇಯಸ್ ಅಯ್ಯರ್ ಕೂಡ ಆಡಿದ್ದರು. ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಇಬ್ಬರೂ ಏಷ್ಯಾ ಕಪ್ ತಂಡದಲ್ಲಿ ಆಯ್ಕೆಯಾಗಿದ್ದಾರೆ.

ಶ್ರೀಲಂಕಾದಲ್ಲಿ ನಡೆಯಲಿರುವ ಏಷ್ಯಾ ಕಪ್ ಪಂದ್ಯಾವಳಿಗೆ ಭಾರತ ತಂಡ ಪ್ರಯಾಣಿಸುವ ದಿನದಂದು, ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಕೆಎಲ್ ರಾಹುಲ್ ಇನ್ನೂ ಎನ್‌ಸಿಎಯಲ್ಲಿ ಉಳಿಯಲಿದ್ದಾರೆ ಮತ್ತು ವೈದ್ಯಕೀಯ ತಂಡದ ಅನುಮತಿಯ ನಂತರವೇ, ಶ್ರೀಲಂಕಾದಲ್ಲಿ ಭಾರತ ತಂಡವನ್ನು ಸೇರುತ್ತಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದರು.

ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನ ಮತ್ತು ನೇಪಾಳ ವಿರುದ್ಧದ ಮೊದಲ ಎರಡು ಪಂದ್ಯಗಳನ್ನು ಕೆಎಲ್ ರಾಹುಲ್ ಕಳೆದುಕೊಂಡಿದ್ದರಿಂದ ಅವರ ಫಿಟ್‌ನೆಸ್‌ನ ಮೇಲಿನ ಅನುಮಾನಗಳು ಇನ್ನೂ ಉಳಿದುಕೊಂಡಿವೆ.

ಪಾಕಿಸ್ತಾನ ವಿರುದ್ಧದ ಪಂದ್ಯ ಮಳೆಯಿಂದ ರದ್ದುಗೊಂಡರೆ, ನೇಪಾಳ ವಿರುದ್ಧ ಡಿಎಲ್ಎಸ್ ವಿಧಾನದಡಿ 10 ವಿಕೆಟ್‌ಗಳ ಗೆಲುವು ಕಂಡ ಭಾರತ ತಂಡ, ಸೂಪರ್ 4 ಹಂತವನ್ನು ಪ್ರವೇಶಿಸಲು ಯಶಸ್ವಿಯಾಗಿದೆ.

ಭಾರತ ತಂಡದ ಮ್ಯಾನೇಜ್‌ಮೆಂಟ್ ಧೈರ್ಯಶಾಲಿ ನಿರ್ಧಾರ

ಇದೇ ವೇಳೆ ಕೆಎಲ್ ರಾಹುಲ್ ಅವರು ಮಂಗಳವಾರ, ಸೆಪ್ಟೆಂಬರ್ 5ರಂದು ಶ್ರೀಲಂಕಾಕ್ಕೆ ಪ್ರಯಾಣಿಸಿದ್ದು, ಮರುದಿನವೇ ಜಿಮ್‌ನಲ್ಲಿ ಕೆಎಲ್ ರಾಹುಲ್ ಬೆವರು ಹರಿಸುತ್ತಿರುವ ವಿಡಿಯೋವನ್ನು ಭಾರತೀಯ ಕ್ರಿಕೆಟ್ ತಂಡದ ತನ್ನ ಎಕ್ಸ್(ಟ್ವಿಟ್ಟರ್‌)ನಲ್ಲಿ ಹಂಚಿಕೊಂಡಿದೆ.

ಸೂಪರ್ 4 ಹಂತದಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತ ತಂಡದ ಮ್ಯಾನೇಜ್‌ಮೆಂಟ್ ಧೈರ್ಯಶಾಲಿ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗುತ್ತದೆ.

ಕೆಎಲ್ ರಾಹುಲ್ ಅವರಿಗೆ ಅವಕಾಶ ನೀಡಬೇಕೆ? ಅಥವಾ ಇನ್-ಫಾರ್ಮ್ ಬ್ಯಾಟರ್ ಇಶಾನ್ ಕಿಶನ್ ಅವರನ್ನೇ ಮುಂದುವರೆಸಬೇಕಾ? ಎಂಬುದನ್ನು ಕಾದು ನೋಡಬೇಕು. ಸೆಪ್ಟೆಂಬರ್ 2ರಂದು ಪಾಕಿಸ್ತಾನದ ವಿರುದ್ಧ ಇಶಾನ್ ಕಿಶನ್ ಅಮೋಘ 82 ರನ್ ಗಳಿಸಿದ್ದನ್ನು ಮರೆಯುವಂತಿಲ್ಲ.

ಇಶಾನ್ ಕಿಶನ್ ಇದೀಗ ಸತತ ನಾಲ್ಕು ಅರ್ಧಶತಕಗಳನ್ನು ಬಾರಿಸಿದ್ದಾರೆ ಮತ್ತು 5ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುವಾಗಲೂ ಒಂದು ಅರ್ಧಶತಕ ಗಳಿಸಿದ್ದಾರೆ. ಕಳೆದ ಒಂದು ವರ್ಷದಲ್ಲಿ ಕೆಎಲ್ ರಾಹುಲ್ ನಾಲ್ಕನೇ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದರು.

ಫಾರ್ಮ್‌ನಲ್ಲಿರುವ ವಿಕೆಟ್‌ಕೀಪರ್ ಮತ್ತು ಬ್ಯಾಟರ್ ಇಶಾನ್ ಕಿಶನ್ ಬದಲಾಗಿ ಕೆಎಲ್ ರಾಹುಲ್‌ಗೆ ಅವಕಾಶ ನೀಡಲು ಕೋಚ್ ರಾಹುಲ್ ದ್ರಾವಿಡ್ ಮತ್ತು ರೋಹಿತ್ ಶರ್ಮಾ ಮುಂದಾಗುತ್ತಾರಾ ಎಂಬುದು ಪ್ರಮುಖ ಪ್ರಶ್ನೆಯಾಗಿದೆ.

Story first published: Wednesday, September 6, 2023, 19:09 [IST]
Other articles published on Sep 6, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+