
ಮತ್ತೆ ಮಿಂಚಿದ ಶುಬ್ಮನ್ ಗಿಲ್
ಟೀಮ್ ಇಂಡಿಯಾದ ಅನುಭವಿ ಆಟಗಾರ ಕೆಎಲ್ ರಾಹುಲ್ ಬಾರ್ಡರ್-ಗವಾಸ್ಕರ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಆಡಲು ಇಳಿದಿದ್ದರು ಕೂಡ ಕಳಪೆ ಪ್ರದರ್ಶನ ನೀಡಿದ ಕಾರಣ ನಂತರ ಆಡುವ ಬಳಗದಿಂದ ಹೊರಗುಳಿದಿದ್ದರು. ಅವರ ಬದಲಿಗೆ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡ ಶುಬ್ಮನ್ ಗಿಲ್ ಅಹ್ಮದಾಬಾದ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಅಮೋಘ ಶತಕ ಸಿಡಿಸಿದ್ದಾರೆ. ಈ ಮೂಲಕ ಟೆಸ್ಟ್‌ನಲ್ಲಿ ಆರಂಭಿಕನಾಗಿ ಖಾಯಂ ಆಗಿ ಮುಂದುವರಿಯಲು ತಾನು ಸಮರ್ಥ ಎಂಬುದನ್ನು ಸಾರಿದ್ದಾರೆ.

ಮೊದಲ ಆಯ್ಕೆ ಗಿಲ್ ಎಂದ ಡಿಕೆ
ಈ ಪ್ರದರ್ಶನದ ಹಿನ್ನೆಲೆಯಲ್ಲಿ ದಿನೇಶ್ ಕಾರ್ತಿಕ್ ಕೂಡ ತಮ್ಮ ಅನಿಸಿಕೆ ಹಂಚಿಕೊಂಡಿದ್ದು ವಿಶ್ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಆರಂಭಿಕನಾಗಿ ಶುಬ್ಮನ್ ಗಿಲ್ ಮೊದಲ ಆಯ್ಕೆಯಾಗಲಿದ್ದಾರೆ ಎಂದಿದ್ದಾರೆ ಡಿಕೆ. ಕೆಎಲ್ ರಾಹುಲ್ ಟೆಸ್ಟ್‌ನಲ್ಲಿ ವಿಕೆಟ್ ಕೀಪರ್ ಆಗಿ ಕರ್ತವ್ಯ ನಿರ್ವಹಿಸಲು ಸಮರ್ಥವಾದರೆ ಮಾತ್ರ ಅವರನ್ನು ಪರಿಗಣಿಸಬಹುದು ಎಂದಿದ್ದಾರೆ ದಿನೇಶ್ ಕಾರ್ತಿಕ್.

ಗಿಲ್ ಬಗ್ಗೆ ಭರವಸೆ ವ್ಯಕ್ತಪಡಿಸಿದ ದಿನೇಶ್ ಕಾರ್ತಿಕ್
"ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಆರಂಭಿಕ ಸ್ಥಾನಕ್ಕೆ ಖಂಡಿತವಾಗಿಯೂ ನನ್ನ ಆಯ್ಕೆ ಶುಬ್ಮನ್ ಗಿಲ್. ಅದರಲ್ಲಿ ಯಾವುದೇ ಅನುಮಾನವಿಲ್ಲ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯಕ್ಕೂ ಮುನ್ನ ಆತ ಶತಕವನ್ನು ಬಾರಿಸಿದ್ದಾರೆ. ಶುಬ್ಮನ್ ಗಿಲ್ ಆಟ ನೋಡಿದಾಗ ಆತ ಸುದೀರ್ಘ ಕಾಲ ಉಳಿದುಕೊಳ್ಳುವ ಆಟಗಾರ ಎಂಬ ಭಾವನೆ ಮೂಡುತ್ತದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಆತ ಇನ್ನಿಂಗ್ಸ್ ಆರಂಭಿಸುವುದನ್ನು ನೋಡಲು ಬಯಸುತ್ತೇನೆ" ಎಂದಿದ್ದಾರೆ ದಿನೇಶ್ ಕಾರ್ತಿಕ್.
IPL 2023: ಐಪಿಎಲ್‌ನ ಆರಂಭಿಕ ಪಂದ್ಯಗಳಿಗೆ ಗೈರಾಗಲಿದ್ದಾರೆ ದಕ್ಷಿಣ ಆಫ್ರಿಕಾ ಆಟಗಾರರು

ಭರ್ಜರಿ ಶತಕ ಸಿಡಿಸಿದ ಗಿಲ್
ಅಹ್ಮದಾಬಾದ್‌ನಲ್ಲಿ ನಡೆದ ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಅದ್ಭುತ ಪ್ರದರ್ಶನ ನೀಡಿದ್ದಾರೆ ಶುಬ್ಮನ್ ಗಿಲ್. ಭಾರತದ ಪರವಾಗಿ ವಿರಾಟ್ ಕೊಹ್ಲಿ 186 ರನ್‌ಗಳ ಮ್ಯಾರಥಾನ್ ಇನ್ನಿಂಗ್ಸ್‌ಗೂ ಮುನ್ನ ಶುಬ್ಮನ್ ಗಿಲ್ 128 ರನ್‌ಗಳನ್ನು ಬಾರಿಸಿ ಉತ್ತಮ ಆರಂಭ ಒದಗಿಸಿದರು. ಹೀಗಾಗಿ ಈ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ 571 ರನ್ ಬಾರಿಸಿ 91 ರನ್‌ಗಳ ಅಂತರದ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಯಿತು.


Click it and Unblock the Notifications
