For Quick Alerts
ALLOW NOTIFICATIONS  
For Daily Alerts
 

KL Rahul: ಕೆಎಲ್‌ ರಾಹುಲ್‌ ಯಾವ ಸ್ಥಾನದಲ್ಲಿ ಆಡುತ್ತಾರೆ?

ಟೀಮ್ ಇಂಡಿಯಾದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬ ಸತ್ಯ ಈಗ ಬಯಲಾಗುತ್ತಿದೆ. ಈ ವೇಳೆ ಭಾರತ ತಂಡದ ಕೋಚ್, ಪಂದ್ಯ ಆರಂಭಕ್ಕೂ ಮುನ್ನ ದಿನ ಪತ್ರಿಕಾಗೋಷ್ಠಿಯಲ್ಲಿ ಹಲವು ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಈ ವೇಳೆ ರೋಹಿತ್ ಶರ್ಮಾ ಆಡುತ್ತಾರೋ ಇಲ್ಲವೋ ಎಂಬ ಬಗ್ಗೆ ನಿರ್ಧಿಷ್ಟವಾಗಿ ಹೇಳಿಕೆ ನೀಡಿಲ್ಲ. ಆದರೆ ಪಿಚ್‌ ಮರ್ಮ್ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಈ ಎಲ್ಲ ಪ್ರಶ್ನೆಗಳ ನಡುವೆ ಈಗ ಎಲ್ಲರ ತಲೆಯಲ್ಲೂ ಓಡುತ್ತಿರುವ ಪ್ರಶ್ನೆ ಕೆಎಲ್ ರಾಹುಲ್ ಯಾವ ಕ್ರಮಾಂಕದಲ್ಲಿ ಆಡುತ್ತಾರೆ.

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಯಾವ ಕ್ರಮಾಂಕದಲ್ಲಿ ಆಡುತ್ತಾರೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಆದರೆ ಶುಕ್ರವಾರ ತಂಡ ಪ್ರಕಟವಾದಾಗ ಇವರು ಯಾವ ಕ್ರಮಾಂಕದಲ್ಲಿ ಆಡಬಹುದು ಎಂಬ ಬಗ್ಗೆ ಉತ್ತರ ಸಿಗಲಿದೆ. ಈಗಾಗಲೇ ಭಾರತ ಬಾರ್ಡರ್‌ ಗವಾಸ್ಕರ್‌ ಸರಣಿಯಲ್ಲಿ 1-2 ರಿಂದ ಹಿನ್ನಡೆ ಅನುಭವಿಸುತ್ತಿದೆ. ಟೀಮ್ ಇಂಡಿಯಾ ಈ ಟೆಸ್ಟ್‌ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸುವ ಇರಾದೆಯನ್ನು ಹೊಂದಿದೆ.

KL Rahul s Batting Order Raises Questions Ahead of Sydney Test in Border-Gavaskar Series

ರೋಹಿತ್‌ಗೆ ಚಾನ್ಸ್‌ ಸಿಕ್ಕರೆ

ಪಿಚ್‌ ಮರ್ಮ್ ನೋಡಿಕೊಂಡು ತಂಡ ಕಟ್ಟುವೆವು ಎಂದು ಕೋಚ್‌ ಗೌತಮ್ ಗಂಭೀರ್ ಹೇಳಿದ್ದಾರೆ. ರೋಹಿತ್ ಶರ್ಮಾ ತಂಡದಲ್ಲಿ ಸ್ಥಾನ ಪಡೆದರೆ, ಅವರು ಯಾವ ಕ್ರಮಾಂಕದಲ್ಲಿ ಆಡುತ್ತಾರೆ ಎಂಬುದೇ ದೊಡ್ಡ ಪ್ರಶ್ನೆ. ಬಾರ್ಡರ್‌ ಗವಾಸ್ಕರ್ ಸರಣಿಯ ಎರಡನೇ ಹಾಗೂ ಮೂರನೇ ಟೆಸ್ಟ್‌ನಲ್ಲಿ ಆರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ್ದರು. ಆದರೆ ನಾಲ್ಕನೇ ಟೆಸ್ಟ್‌ನಲ್ಲಿ ಆರಂಭಿಕರಾಗಿ ಕಾಣಿಸಿಕೊಂಡಿದ್ದರು. ಹೀಗಾಗಿ ಇವರು ಯಾವ ಸ್ಥಾನದಲ್ಲಿ ಅಡುತ್ತಾರೆ ಎಂಬ ಗೊಂದಲ ಹುಟ್ಟಿದೆ.

ರಾಹುಲ್‌ ಇನಿಂಗ್ಸ್ ಆರಂಭಿಸುತ್ತಾರಾ?

ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸುತ್ತಾರಾ ಎಂಬ ಪ್ರಶ್ನೆಗಳು ಉದ್ಭವಿಸಿವೆ. ರಾಹುಲ್ ಪ್ರಸಕ್ತ ಸರಣಿಯಲ್ಲಿ ಗರಿಷ್ಠ ರನ್ ಸಾಧಕರ ಪಟ್ಟಿಯಲ್ಲಿ ಕಾಣಿಸಿಕೊಳ್ಳುವುದರಿಂದ ಇವರು ಇನಿಂಗ್ಸ್‌ ಆಡಿದರೆ ಬೆಸ್ಟ್‌ ಎಂಬ ಮಾತುಗಳು ಕೇಳಿ ಬಂದಿವೆ. ಆದರೆ ರೋಹಿತ್ ಯಾವ ಕ್ರಮಾಂಕದಲ್ಲಿನ ಆಡುತ್ತಾರೆ ಎಂಬುದರ ಮೇಲೆ ಇವರು ಯಾವ ಕ್ರಮಾಂಕದಲ್ಲಿ ಆಡುತ್ತಾರೆ ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ.

KL Rahul s Batting Order Raises Questions Ahead of Sydney Test in Border-Gavaskar Series

ಟೀಮ್ ಇಂಡಿಯಾ ಗೆಲುವಿನ ಲೆಕ್ಕಾಚಾರವನ್ನು ಹಾಕಿಕೊಂಡಿದ್ದು ಕೊನೆಯ ಟೆಸ್ಟ್‌ನಲ್ಲಿ ಬಲಿಷ್ಠ ತಂಡವನ್ನು ಕಟ್ಟುವ ನಿಟ್ಟಿನಲ್ಲಿ ಶ್ರಮಿಸಲಿದೆ. ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ಗೆ ಪ್ರವೇಶ ಪಡೆಯುವ ಕನಸು ಕಾಣುತ್ತಿರುವ ಭಾರತಕ್ಕೆ ಈ ಪಂದ್ಯದಲ್ಲಿ ಗೆಲುವು ಸಾಧಿಸುವುದು ಅನಿವಾರ್ಯ. ಸಿಡ್ನಿ ಟೆಸ್ಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿ ಭಾರತ ಗೆಲುವು ಸಾಧಿಸಿದರೆ, ಬಾರ್ಡರ್‌ ಗವಾಸ್ಕರ್‌ ಸರಣಿಯನ್ನು ಹಂಚಿಕೊಳ್ಳಲಿದೆ. ಈ ಮೂಲಕ ದಶಕಗಳಿಂದ ಆಸ್ಟ್ರೇಲಿಯಾದಲ್ಲಿ ಸರಣಿ ಸೋಲದ ಪರಂಪರೆ ಮುಂದೆವರೆಯಲಿದೆ.

ಕೆಎಲ್‌ ರಾಹುಲ್ ಪ್ರಸಕ್ತ ಸರಣಿಯಲ್ಲಿ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಇವರು ಆಡಿದ 4 ಪಂದ್ಯಗಳ 8 ಇನಿಂಗ್ಸ್‌ನಲ್ಲಿ 37ರ ಸರಾಸರಿಯಲ್ಲಿ 259 ರನ್‌ ಕಲೆ ಹಾಕಿದ್ದಾರೆ. ಇದರಲ್ಲಿ 1 ಅರ್ಧಶತಕ ಸೇರಿದೆ.

Story first published: Thursday, January 2, 2025, 17:10 [IST]
Other articles published on Jan 2, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+