Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

KL Rahul: ಇಂಗ್ಲೆಂಡ್ ವಿರುದ್ಧ ರಾಹುಲ್ ಆರ್ಭಟ: 54 ಎಸೆತಗಳಲ್ಲಿ ಶತಕ ಸಿಡಿಸಿದ್ದು ಇದೇ ದಿನ: ವಿಡಿಯೋ

ಕೆಎಲ್ ರಾಹುಲ್ ಕರ್ನಾಟಕದಿಂದ ಭಾರತವನ್ನು ಪ್ರತಿನಿಧಿಸಿದ ಪ್ರತಿಭಾವಂತ ಕ್ರಿಕೆಟಿಗ. ತನ್ನ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾಗ ಎಂಥಾ ಎದುರಾಳಿ ವಿರುದ್ಧವೂ ಅದ್ಭುತ ಪ್ರದರ್ಶನ ನೀಡಿ ಏಕಾಂಗಿಯಾಗಿ ಗೆಲ್ಲಿಸಬಲ್ಲ ಸಾಮರ್ಥ್ಯವನ್ನು ಹೊಂದಿರುವ ದಾಂಡಿಗ. 2018ರಲ್ಲಿ ಇಂಗ್ಲೆಂಡ್ ಪ್ರವಾಸದಲ್ಲಿದ್ದಾಗ ಭರ್ಜರಿ ಪ್ರದರ್ಶನ ನಿಡಿದ್ದ ಕೆಎಲ್ ರಾಹುಲ್ ಆ ವರ್ಷ ಇದೇ ದಿನ (ಜುಲೈ 3) ನಡೆದ ಟಿ20 ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ ಭರ್ಜರಿ ಶತಕ ಸಿಡಿಸಿ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದ್ದರು.

ಅದು ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲ ಪಂದ್ಯ. ಆರಂಭದಲ್ಲಿ ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ತಂಡ ಸವಾಲಿನ ಮೊತ್ತವನ್ನು ಕಲೆಹಾಕಿತು. ಜೋಸ್ ಬಟ್ಲರ್ 46 ಎಸೆತಗಳಲ್ಲಿ 69 ರನ್‌ಗಳಿಸಿದರೆ ಜೇಸನ್ ರಾಯ್ 30 ರನ್‌ಗಳನ್ನು ಗಳಿಸಿದರು. ಹೀಗಾಗಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡ ಇಂಗ್ಲೆಂಡ್ ತಂಡ 159 ರನ್‌ಗಳನ್ನು ಕಲೆಹಾಕಿತು. ಈ ಪಂದ್ಯದಲ್ಲಿ ಭಾರತದ ಪರವಾಗಿ ಬೌಲಿಂಗ್‌ನಲ್ಲಿ ಮಿಂಚಿದ ಕುಲ್‌ದೀಪ್ ಯಾದವ್ 5 ವಿಕೆಟ್‌ಗಳನ್ನು ಕಬಳಿಸಿದ್ದರು.

KL Rahuls Unbeaten Knock of 101 Runs in 54 Balls vs England on This Day in 2018

ಈ ಮೊತ್ತವನ್ನು ಬೆನ್ನಟ್ಟಿದ ಟೀಮ್ ಇಂಡಿಯಾ ಪರವಾಗಿ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಶಿಖರ್ ಧವನ್ ಹಾಗೂ ರೋಹಿತ್ ಶರ್ಮಾ ಜೋಡಿ ಬೇಗನ ಬೇರ್ಪಟ್ಟಿತು. ಶಿಖರ್ ಧವನ್ ಕೇವಲ 4 ರನ್‌ಗಳಿಸಿ ಔಟಾಗಿದ್ದು ಆರಂಭದಲ್ಲಿ ಟೀಮ್ ಇಂಡಿಯಾ ಹಿನ್ನಡೆಗೆ ಕಾರಣವಾಯಿತು. ಆದರೆ ನಂತರ ಆರಂಭವಾಗಿದ್ದೇ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೆಎಲ್ ರಾಹುಲ್ ಅಬ್ಬರ. ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ ಕೆಎಲ್ ರಾಹುಲ್ ಇಂಗ್ಲೆಂಡ್ ಬೌಲರ್‌ಗಳನ್ನು ಚೆಂಡಾಡಿದರು.

ಈ ಪಂದ್ಯದಲ್ಲಿ ಕೇವಲ 54 ಎಸೆತಗಳನ್ನು ಎದುರಿಸಿದ ಕೆಎಲ್ ರಾಹುಲ್ 10 ಬೌಂಡರಿ ಹಾಗೂ 4 ಸಿಕ್ಸರ್ ಸಿಡಿಸಿ ಅಜೇಯ 101 ರನ್‌ಗಳನ್ನು ಸಿಡಿಸಿದ ಸಾಧನೆ ಮಾಡಿದರು. ಭರ್ಜರಿ 187.04ರ ಸರಾಸರಿಯಲ್ಲಿ ಬ್ಯಾಟಿಂಗ್ ಮಾಡಿದ ರಾಹುಲ್ ಇನ್ನೂ 10 ಎಸೆತಗಳು ಬಾಕಿಯಿರುವಂತೆಯೇ ಟೀಮ್ ಇಂಡಿಯಾ ಗೆಲ್ಲಲು ಕಾರಣವಾದರು. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಅಂತರದಿಂದ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿತ್ತು.

ಇಂಗ್ಲೆಂಡ್ ವಿರುದ್ಧ ರಾಹುಲ್ ಅಪರೂಪದ ಸಾಧನೆ: ಇನ್ನು ಇಂಗ್ಲೆಂಡ್ ತಂಡದ ವಿರುದ್ಧ ಕನ್ನಡಿಗ ಕೆಎಲ್ ರಾಹುಲ್ ಅಪರೂಪದ ಸಾಧನೆ ಮಾಡಿದ್ದಾರೆ. ಟಿ20, ಏಕದಿನ ಹಾಗೂ ಟೆಸ್ಟ್ ಈ ಮೂರು ಮಾದರಿಯಲ್ಲಿಯೂ ರಾಹುಲ್ ಶತಕವನ್ನು ಸಿಡಿಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಭಾರತದ ಅತ್ಯುತ್ತಮ ಬ್ಯಾಟರ್‌ಗಳಲ್ಲಿ ಒಬ್ಬರೆನಿಸಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ರಾಹುಲ್ ಬ್ಯಾಟಿಂಗ್ ಮಂಕಾಗಿದ್ದು ಮತ್ತೆ ಹಿಂದಿನ ಲಯಕ್ಕೆ ಬಂದು ಅಲ್ಲಾ ಮಾದರಿಯಲ್ಲಿಯೂ ಅಬ್ಬರದ ಪ್ರದರ್ಶನ ನೀಡುವ ಮೂಲಕ ಮ್ಯಾಚ್ ವಿನ್ನರ್ ಆಗಿ ಮಿಂಚಲಿ ಎಂಬುದು ಎಲ್ಲಾ ಕನ್ನಡಿಗ ಕ್ರಿಕೆಟ್ ಅಭಿಮಾನಿಗಳ ನಿರೀಕ್ಷೆ.

Story first published: Monday, July 3, 2023, 14:46 [IST]
Other articles published on Jul 3, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+