ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್‌ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪಾಕಿಸ್ತಾನ ಸೋತರೆ ಭಾರತ ತಂಡಕ್ಕೆ ಇದೆ ಲಾಭ!

Know About Pakistan Lost Test Series Against England How Impact On Team India WTC Final Chances

17 ವರ್ಷಗಳ ನಂತರ ಪಾಕಿಸ್ತಾನದಲ್ಲಿ ಟೆಸ್ಟ್ ಸರಣಿ ಆಡುತ್ತಿರುವ ಇಂಗ್ಲೆಂಡ್, ಮೊದಲನೇ ಪಂದ್ಯದಲ್ಲೇ ಪಾಕಿಸ್ತಾನದ ವಿರುದ್ಧ 74 ರನ್‌ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ಶುಭಾರಂಭ ಮಾಡಿದೆ.

ಒಂದು ಹಂತದಲ್ಲಿ ಇಂಗ್ಲೆಂಡ್ ಅತಿಯಾದ ಆತ್ಮವಿಶ್ವಾಸದಲ್ಲಿ ಬೇಗನೆ ಡಿಕ್ಲೇರ್ ಮಾಡಿಕೊಂಡಿತು ಎನಿಸಿದರು ಅಂತಿಮವಾಗಿ ಪಾಕಿಸ್ತಾನ ತಂಡವನ್ನು ಆಲೌಟ್ ಮಾಡುವ ಮೂಲಕ ಭರ್ಜರಿ ಜಯ ಸಾಧಿಸಿ, ಟೆಸ್ಟ್ ಪಂದ್ಯದ ವಿಧಾನವನ್ನೇ ಬದಲಾಯಿಸಿತು.

ಈ ಸರಣಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಭಾಗವಾಗಿದೆ. ಇಂಗ್ಲೆಂಡ್ ಈಗಾಗಲೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ರೇಸ್‌ನಿಂದ ಹೊರಬಿದ್ದಿದೆ. ಆದರೆ, ಪಾಕಿಸ್ತಾನ ತಂಡಕ್ಕೆ ಫೈನಲ್ ತಲುಪುವ ಅವಕಾಶ ಇತ್ತು. ಅದು ಭಾರತ ತಂಡಕ್ಕೆ ಕೂಡ ಸ್ಪರ್ಧೆ ನೀಡಿತ್ತು. ಆದರೆ, ಪಾಕಿಸ್ತಾನ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಸೋತಿರುವುದು ಭಾರತಕ್ಕೆ ಲಾಭವಾಗಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದ ಪಾಕಿಸ್ತಾನ ಇಂಗ್ಲೆಂಡ್ ವಿರುದ್ಧ ಸೋಲಿನ ಮೂಲಕ 6ನೇ ಸ್ಥಾನಕ್ಕೆ ಕುಸಿದಿದೆ. ಭಾರತ ತಂಡ ಈಗ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ. ಒಂದು ವೇಳೆ ಉಳಿದ ಎರಡು ಪಂದ್ಯಗಳಲ್ಲಿ ಪಾಕಿಸ್ತಾನ ಗೆಲುವು ಸಾಧಿಸದಿದ್ದರೆ ಅವರು ಫೈನಲ್ ತಲುಪುವ ಅವಕಾಶ ಸಂಪೂರ್ಣವಾಗಿ ಕೈ ತಪ್ಪಲಿದೆ.

Know About Pakistan Lost Test Series Against England How Impact On Team India WTC Final Chances

ಭಾರತ, ಆಸ್ಟ್ರೇಲಿಯಾ ಫೈನಲ್‌ಗೆ ?

ಮತ್ತೊಂದೆಡೆ, ಭಾರತ ತಂಡ ಬಾಂಗ್ಲಾದೇಶದ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿ ಹೊಂದಿದ್ದು, ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿದರೆ. ಮತ್ತು ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಯಲ್ಲಿ ಒಂದು ಟೆಸ್ಟ್ ಪಂದ್ಯ ಗೆದ್ದರೂ ಭಾರತ ಮತ್ತು ಆಸ್ಟ್ರೇಲಿಯಾ ಫೈನಲ್ ಆಡುವುದು ಬಹುತೇಕ ಖಚಿತವಾಗುತ್ತದೆ.

ಆಸ್ಟ್ರೇಲಿಯಾ ಈಗ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ಆಡುತ್ತಿದೆ. ಮೊದಲನೇ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿರುವ ಅವರು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ವೆಸ್ಟ್ ಇಂಡೀಸ್ ನಂತರ ಅವರು ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡಲಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಕಳೆದ ಬಾರಿ ರನ್ನರ್ ಅಪ್ ಸ್ಥಾನ ಪಡೆದಿದ್ದ ಭಾರತ ತಂಡ ಈ ಬಾರಿ ಚಾಂಪಿಯನ್ ಆಗಲು ತುಂಬಾ ದೂರ ಸಾಗಬೇಕಾಗಿದೆ. ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಗೆಲ್ಲುವುದು ತುಂಬಾ ಮಹತ್ವ ಪಡೆದುಕೊಂಡಿದೆ.

ಉತ್ತಮವಾಗಿ ಆಡಲಿಲ್ಲ ಎಂದ ಬಾಬರ್ ಅಜಂ

ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯ ಸೋತ ಬಳಿಕ ಮಾತನಾಡಿದ ಪಾಕಿಸ್ತಾನ ನಾಯಕ ಬಾಬರ್ ಅಜಂ, ತಮ್ಮ ತಂಡ ಉತ್ತಮ ಪ್ರದರ್ಶನ ನೀಡಲಿಲ್ಲ ಎಂದು ಒಪ್ಪಿಕೊಂಡರು. ಎರಡನೇ ಇನ್ನಿಂಗ್ಸ್‌ನಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದರೆ ಗೆಲ್ಲುವ ಅವಕಾಶ ಇತ್ತು ಎಂದು ಹೇಳಿದ್ದಾರೆ. ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳು ಬಾಕಿ ಇದ್ದು, ಉತ್ತಮ ಪ್ರದರ್ಶನ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Story first published: Tuesday, December 6, 2022, 13:59 [IST]
Other articles published on Dec 6, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X