ಇದು ತುಂಬಾ ಕ್ರೂರ! ಈ ಕ್ರಿಕೆಟಿಗನ ದುರಾದೃಷ್ಟಕ್ಕೆ ಮರುಗಿದ ಅಭಿಮಾನಿಗಳು

ತಮ್ಮ ಕೊನೆಯ ವಿಶ್ವಕಪ್ ಆಡುತ್ತಿರುವ ದಿನೇಶ್ ಕಾರ್ತಿಕ್ ಸೆಮಿಫೈನಲ್‌ನಲ್ಲಿ ಆಡುವ ಬಳಗದಲ್ಲಿ ಅವಕಾಶ ಪಡೆಯುವಲ್ಲಿ ವಿಫಲರಾಗಿದ್ದಾರೆ. ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಬದಲಿಗೆ ರಿಷಬ್ ಪಂತ್ ಅವಕಾಶ ಪಡೆದಿದ್ದರು, ಆ ಪಂದ್ಯದಲ್ಲಿ ಮೂರು ರನ್ ಗಳಿಸಿ ಪಂತ್ ಔಟಾfಗಿದ್ದರು.
ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಕೂಡ ಪಂತ್‌ಗೆ ಅವಕಾಶ ನೀಡಿದ್ದು ದಿನೇಶ್ ಕಾರ್ತಿಕ್‌ರನ್ನು ಕೈಬಿಡಲಾಗಿದೆ. ದಿನೇಶ್ ಕಾರ್ತಿಕ್ ಆಯ್ಕೆಯಾಗದ ಬಗ್ಗೆ ಕ್ರಿಕೆಟ್ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದು. ದಿನೇಶ್ ಕಾರ್ತಿಕ್ ಬಗ್ಗೆ ಮರುಕ ಪಟ್ಟಿದ್ದಾರೆ.
ಐದು ಸೂಪರ್ 12 ಪಂದ್ಯಗಳಲ್ಲಿ ನಾಲ್ಕ ಪಂದ್ಯಗಳಲ್ಲಿ ಆಡಿದ ಕಾರ್ತಿಕ್, ಅವರ ಮೂರು ಇನ್ನಿಂಗ್ಸ್‌ಗಳಲ್ಲಿ ಒಂದು, ಆರು ಮತ್ತು ಏಳು ರನ್ ಗಳಿಸಿ ನಿರಾಸೆ ಮೂಡಿಸಿದ್ದರು. ಆದಾಗ್ಯೂ, ಪರ್ತ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯವನ್ನು ಹೊರತುಪಡಿಸಿ, ಉಳಿದ ಪಂದ್ಯಗಳಲ್ಲಿ ದಿನೇಶ್ ಕಾರ್ತಿಕ್ ಹೆಚ್ಚಿನ ಎಸೆತಗಳನ್ನು ಎದುರಿಸಲಿಲ್ಲ.
ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯಕ್ಕೆ ಕಾರ್ತಿಕ್ ಬದಲಿಗೆ ಪಂತ್ ಅವರನ್ನು ಆಯ್ಕೆ ಮಾಡುವ ನಿರ್ಧಾರವನ್ನು ಟ್ವಿಟರ್ ನಲ್ಲಿ ಪ್ರಶ್ನಿಸಿದ್ದಾರೆ. ಮತ್ತೆ ಕೆಲವರು ದಿನೇಶ್ ಕಾರ್ತಿಕ್‌ರನ್ನು ಕೈ ಬಿಟ್ಟಿರುವ ನಿರ್ಧಾರ ಸರಿ ಇದೆ ಎಂದು ಹೇಳಿದ್ದಾರೆ.

ಡಿಕೆಗೆ ಇದು ಕೊನೆಯ ವಿಶ್ವಕಪ್
ಅವರ ಕ್ರಿಕೆಟ್ ಜೀವನವೇ ಮುಗಿದು ಹೋಯಿತು ಎನ್ನುವಾಗ ದಿನೇಶ್ ಕಾರ್ತಿಕ್ ತಮ್ಮ ಕಠಿಣ ಪರಿಶ್ರಮದಿಂದ ಮತ್ತೆ ತಂಡದಲ್ಲಿ ಸ್ಥಾನ ಪಡೆಯಲು ಸಫಲರಾಗಿದ್ದರು. 2022 ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರವಾಗಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು.
ಐಪಿಎಲ್‌ನಲ್ಲಿ ಆರ್ ಸಿಬಿ ಪರವಾಗಿ ಫಿನಿಷರ್ ಪಾತ್ರವನ್ನು ಸಮರ್ಥವಾಗಿ ನಿರ್ವಹಿಸಿದ್ದ ದಿನೇಶ್ ಕಾರ್ತಿಕ್ ಸ್ಫೋಟಕ ಬ್ಯಾಟಿಂಗ್‌ನಿಂದ ತಂಡವನ್ನು ಹಲವು ಪಂದ್ಯಗಳಲ್ಲಿ ಯಶಸ್ವಿಯಾಗಿ ಗೆಲ್ಲಿಸಿದ್ದರು. ಐಪಿಎಲ್‌ನಲ್ಲಿ ಅವರ ಪ್ರದರ್ಶನ ನೋಡಿದ ಬಳಿಕ ಆಯ್ಕೆದಾರರು ಭಾರತ ತಂಡಕ್ಕೆ ಆಯ್ಕೆ ಮಾಡಿದ್ದರು. ನಂತರ ಅವರು, ಟಿ20 ವಿಶ್ವಕಪ್‌ನಲ್ಲಿ ಕೂಡ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದರು. ಇದು ಅವರ ಕೊನೆಯ ವಿಶ್ವಕಪ್ ಆಗಿದೆ.
ಟಿ20 ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ವಿಶ್ವದಾಖಲೆ: 4000 ರನ್ ಪೂರೈಸಿದ ಮೊದಲ ಪ್ಲೇಯರ್

ಆತ ಆಡಬೇಕಿತ್ತು ಎಂದ ಅಭಿಮಾನಿಗಳು
ಆದರೆ, ಪ್ರಮುಖ ಪಂದ್ಯದಲ್ಲಿ ಅವರು ತಂಡಕ್ಕಾಗಿ ಆಡದಂತಾಗಿರುವುದು ನಿಜಕ್ಕೂ ಬೇಸರದ ಸಂಗತಿ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಆದರೂ, ಕೆಲವರು ತಂಡದ ನಿರ್ಧಾರದ ಬಗ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ದಿನೇಶ್ ಕಾರ್ತಿಕ್ ತಮಗೆ ಸಿಕ್ಕ ಅವಕಾಶವನ್ನು ಬಳಸಿಕೊಳ್ಳಲು ವಿಫಲರಾಗಿದ್ದು, ಅವರ ಬದಲಾಗಿ ಪಂತ್ ಸ್ಥಾನ ಪಡೆದಿದ್ದಾರೆ ಎಂದು ರಿಷಬ್ ಪಂತ್ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಭಾರತ Vs ಇಂಗ್ಲೆಂಡ್ ಆಡುವ ಬಳಗ
ಭಾರತ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಶ್ದೀಪ್ ಸಿಂಗ್.
ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಅಲೆಕ್ಸ್ ಹೇಲ್ಸ್, ಫಿಲಿಪ್ ಸಾಲ್ಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಸ್ಯಾಮ್ ಕರ್ರಾನ್, ಕ್ರಿಸ್ ಜೋರ್ಡಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications