ದಕ್ಷಿಣ ಆಫ್ರಿಕಾಕ್ಕೆ ಸವಾಲಿನ ಗುರಿ ನೀಡಿದ ಭಾರತ: ವಿರಾಟ್, ರುತುರಾಜ್ ಶತಕ
ಭರವಸೆಯ ಆಟಗಾರ ವಿರಾಟ್ ಕೊಹ್ಲಿ ಹಾಗೂ ಯುವ ಆಟಗಾರ ರುತುರಾಜ್ ಗಾಯಕ್ವಾಡ್ ಅವರು ಬಾರಿಸಿದ ಶತಕದ ನೆರವಿನಿಂದ ಭಾರತ ಎರಡನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸವಾಲಿನ ಮೊತ್ತವನ್ನು ಕಲೆ ಹಾಕಿದೆ. ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತ 50 ಓವರ್‌ಗಳಲ್ಲಿ 5 ವಿಕೆಟ್‌ಗೆ 350 ರನ್ ಕಲೆ ಹಾಕಿದ್ದು, ಪ್ರವಾಸಿ ತಂಡಕ್ಕೆ ಸವಾಲಿನ ಗುರಿಯನ್ನು ನೀಡಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಆರಂಭಿಕರಾದ ರೋಹಿತ್ ಶರ್ಮಾ (14), ಯಶಸ್ವಿ ಜೈಸ್ವಾಲ್ (22) ಜೋಡಿ ಮೊದಲ ವಿಕೆಟ್‌ಗೆ 40 ರನ್ ಜೊತೆಯಾಟದ ಕಾಣಿಕೆ ನೀಡಿದರು. ರೋಹಿತ್ ಶರ್ಮಾ ಎರಡನೇ ಏಕದಿನ ಪಂದ್ಯದಲ್ಲಿ ದೊಡ್ಡ ಮೊತ್ತವನ್ನು ಕಟ್ಟುವಲ್ಲಿ ವಿಫಲರಾದರು. ಯಶಸ್ವಿ ಜೈಸ್ವಾಲ್ ಬಿಗ್ ಇನಿಂಗ್ಸ್ ಕಟ್ಟುವಲ್ಲಿ ಎಡವಿದರು. ಈ ಮೂಲಕ ಟೀಮ್ ಮ್ಯಾನೇಜ್ಮೆಂಟ್ ಅವರ ಮೇಲೆ ಇಟ್ಟ ನಂಬಿಕೆಯನ್ನು ಹುಸಿಯಾಗಿಸಿದರು.

62 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಭಾರತ ತಂಡಕ್ಕೆ ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್ ಜೋಡಿ ಆಧಾರವಾಯಿತು. ಈ ಜೋಡಿ ಮಿಡ್ಲ್ ಓವರ್‌ಗಳಲ್ಲಿ ವಿಕೆಟ್ ಬೀಳದಂತೆ ನೋಡಿಕೊಂಡು ರನ್ ಕಲೆ ಹಾಕಿತು. ಈ ಜೋಡಿಯನ್ನು ಕಟ್ಟಿ ಹಾಕಲು ದಕ್ಷಿಣ ಆಫ್ರಿಕಾ ಮಾಡಿದ ಪ್ಲ್ಯಾನ್ ಎಲ್ಲ ಕೈ ಕೊಟ್ಟಿತು. ವಿರಾಟ್, ರುತುರಾಜ್ ಮೂರನೇ ವಿಕೆಟ್‌ಗೆ 195 ರನ್ ಸೇರಿಸಿದರು.
ವಿರಾಟ್, ರುತುರಾಜ್ ಶಕತದ ಸೊಬಗು
ಚೇಸಿಂಗ್ ಸ್ಟಾರ್ ಖ್ಯಾತಿಯ ವಿರಾಟ್ ಕೊಹ್ಲಿ ಎರಡನೇ ಏಕದಿನ ಪಂದ್ಯದಲ್ಲೂ ತಮ್ಮ ಅಮೋಘ ಫಾರ್ಮ್ ಮುಂದುವರೆಸಿ ಶತಕ ಬಾರಿಸಿದರು. ಈ ಮೂಲಕ 11ನೇ ಬಾರಿ ಬ್ಯಾಕ್ ಟು ಬ್ಯಾಕ್ ಶತಕಗಳನ್ನು ಸಿಡಿಸಿ ಆರ್ಭಟಿಸಿದರು. ರಾಂಚಿಯಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಶತಕ ಬಾರಿಸಿ ಅಬ್ಬರಿಸಿದ್ದರು. ಈಗ ರಾಯ್ಪುರದಲ್ಲಿ ಇದೇ ಲಯವನ್ನು ಮುಂದುವರೆಸಿದರು. ವಿರಾಟ್ 7 ಬೌಂಡರಿ, 2 ಸಿಕ್ಸರ್ ಸಹಾಯದಿಂದ 102 ರನ್ ಬಾರಿಸಿ ಇಲ್ಲದ ಹೊಡೆತಕ್ಕೆ ಮುಂದಾಗಿ ಔಟ್ ಆದರು.

ತಮ್ಮ ವೃತ್ತಿ ಜೀವನದ 8ನೇ ಏಕದಿನ ಪಂದ್ಯವನ್ನು ಆಡಿದ ರುತುರಾಜ್ ಗಾಯಕ್ವಾಡ್, ಈ ಪಂದ್ಯವನ್ನು ಸ್ಮರಣೀಯವಾಗಿಸಿಕೊಂಡರು. ರುತುರಾಜ್ 83 ಎಸೆತಗಳಲ್ಲಿ 12 ಬೌಂಡರಿ, 2 ಸಿಕ್ಸರ್ ಸಹಾಯದಿಂದ 105 ರನ್ ಬಾರಿಸಿ ಮಿಂಚಿದರು.
ನಾಯಕ ಕೆಎಲ್ ರಾಹುಲ್ ಐದನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿ ಆರ್ಭಟಿಸಿದರು. ಇವರು 43 ಎಸೆತಗಳಲ್ಲಿ 6 ಬೌಂಡರಿ, 2 ಸಿಕ್ಸರ್ ಸಹಾಯದಿಂದ ಅಜೇಯ 66 ರನ್ ಸಿಡಿಸಿದರು. ಆಲ್‌ರೌಂಡರ್ ರವೀಂದ್ರ ಜಡೇಜಾ ಅಜೇಯ 24 ರನ್ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು. ಅಂತಿಮವಾಗಿ ಭಾರತ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 358 ರನ್ ಕಲೆ ಹಾಕಿತು. ದಕ್ಷಿಣ ಆಫ್ರಿಕಾದ ಪರ ಮಾರ್ಕೊ ಜಾನ್ಸನ್ 2 ವಿಕೆಟ್ ಕಬಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications