ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟೆಸ್ಟ್‌ ಕ್ರಿಕೆಟ್‌: ಪಂಟರ್‌ ದಾಖಲೆ ಮುರಿಯಲು ಸಜ್ಜಾದ ಕಿಂಗ್‌ ಕೊಹ್ಲಿ!

Kohli has Ponting Test record 2019

ನಾರ್ತ್‌ಸೌಂಡ್‌, ಆಗಸ್ಟ್‌ 21: ವೆಸ್ಟ್‌ ಇಂಡೀಸ್‌ ಪ್ರವಾಸದಲ್ಲಿ ನಡೆದ ಟಿ20 ಮತ್ತು ಏಕದಿನ ಕ್ರಿಕೆಟ್‌ ಸರಣಿಗಳಲ್ಲಿ ಭಾರತ ತಂಡದ ಪರ ಗರಿಷ್ಠ ರನ್‌ ಸ್ಕೋರರ್‌ ಎನಿಸಿದ ನಾಯಕ ವಿರಾಟ್‌ ಕೊಹ್ಲಿ, ಈ ಸಂದರ್ಭದಲ್ಲಿ ಹತ್ತು ಹಲವು ದಾಖಲೆಗಳನ್ನು ನುಚ್ಚು ನೂರು ಮಾಡಿದರು.

ಬ್ಯಾಟ್‌ ಹಿಡಿದರೆ ರನ್‌ ಹೊಳೆ ಹರಿಸಲು ಆರಂಭಿಸುವ ಕಿಂಗ್‌ ಕೊಹ್ಲಿ, ಇದೀಗ ಕೆರಿಬಿಯನ್ನರ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್‌ ಸರಣಿಯಲ್ಲೂ ಹಲವು ದಾಖಲೆಗಳನ್ನು ಪುಡಿಗಟ್ಟುವುದನ್ನು ಎದುರು ನೋಡುತ್ತಿದ್ದಾರೆ. ಅದರಲ್ಲೂ ಟೆಸ್ಟ್‌ ಕ್ರಿಕೆಟ್‌ನಲ್ಲಿ ನಾಯಕನಾಗಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ವಿಶ್ವ ದಾಖಲೆಯತ್ತ ಕೊಹ್ಲಿ ಕಣ್ಣಿಟ್ಟಿದ್ದಾರೆ.

1
46250

ವೆಸ್ಟ್‌ ಇಂಡೀಸ್‌ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್‌ ಸರಣಿಯ ಮೊದಲ ಪಂದ್ಯ ಇಲ್ಲಿನ ಸರ್‌ ವಿವಿಯನ್‌ ರಿಚರ್ಡ್ಸ್‌ ಕ್ರೀಡಾಂಗಣದಲ್ಲಿ ಗುರುವಾರ (ಆಗಸ್ಟ್‌ 22) ಆರಂಭವಾಗಲಿದೆ. ಕ್ಯಾಪ್ಟನ್‌ ಕೊಹ್ಲಿ, ಭಾರತ ತಂಡದ ನಾಯಕನಾಗಿ ಈವರೆಗೆ ಒಟ್ಟು 18 ಶತಕಗಳನ್ನು ಬಾರಿಸಿದ್ದಾರೆ. ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್‌, ನಾಯಕನಾಗಿ ತಮ್ಮ ವೃತ್ತಿ ಬದುಕಿನಲ್ಲಿ 19 ಶತಕಗಳನ್ನು ಬಾರಿಸಿದ್ದಾರೆ.

ಕರ್ನಾಟಕ ರಣಜಿ ತಂಡಕ್ಕೆ ಗುಡ್‌ಬೈ ಹೇಳಿದ ದಾವಣಗೆರೆ ಎಕ್ಸ್‌ಪ್ರೆಸ್‌!ಕರ್ನಾಟಕ ರಣಜಿ ತಂಡಕ್ಕೆ ಗುಡ್‌ಬೈ ಹೇಳಿದ ದಾವಣಗೆರೆ ಎಕ್ಸ್‌ಪ್ರೆಸ್‌!

ವೆಸ್ಟ್‌ ಇಂಡೀಸ್‌ ವಿರುದ್ಧದ ಮೊದಲ ಪಂದ್ಯದಲ್ಲಿ ಕೊಹ್ಲಿ ಶತಕ ಗಳಿಸಿದರೆ ಪಾಂಟಿಂಗ್‌ ದಾಖಲೆಯನ್ನು ಸರಿಗಟ್ಟಿ, ಕ್ಯಾಪ್ಟನ್‌ ಸ್ಥಾನದಲ್ಲಿ ಅತಿ ಹೆಚ್ಚು ಶತಕ ಸಿಡಿಸಿದವರ ಪೈಕಿ ಜಂಟಿ ಎರಡನೇ ಸ್ಥಾನವನ್ನು ಪಡೆದುಕೊಳ್ಳಲಿದ್ದಾರೆ. ಇನ್ನು ಟೆಸ್ಟ್‌ ಕ್ರಿಕೆಟ್‌ನಲ್ಲಿ ಕೊಹ್ಲಿ ಈಗಾಗಲೇ ತಮ್ಮ ಒಟ್ಟು ಶತಕಗಳ ಸಂಖ್ಯೆಯನ್ನು 25ಕ್ಕೆ ವಿಸ್ತರಿಸಿದ್ದಾರೆ. ಇದರಲ್ಲಿ 6 ದ್ವಿಶತಕಗಳು ಸೇರಿವೆ.

ಟೆಸ್ಟ್‌ ರ‍್ಯಾಂಕಿಂಗ್: ಕೊಹ್ಲಿಗೆ ಸಡ್ಡು ಹೊಡೆಯುವತ್ತ ಸಮೀಪಿಸಿದ ಸ್ಟೀವ್‌ ಸ್ಮಿತ್‌ಟೆಸ್ಟ್‌ ರ‍್ಯಾಂಕಿಂಗ್: ಕೊಹ್ಲಿಗೆ ಸಡ್ಡು ಹೊಡೆಯುವತ್ತ ಸಮೀಪಿಸಿದ ಸ್ಟೀವ್‌ ಸ್ಮಿತ್‌

ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಗ್ರೇಮ್‌ ಸ್ಮಿತ್‌ ಮಾತ್ರವೇ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಒಟ್ಟು 25 ಶತಕಗಳನ್ನು ಬಾರಿಸಿದ್ದಾರೆ. 109 ಪಂದ್ಯಗಳಲ್ಲಿ ಈ ಸಾಧನೆ ಮಾಡಿರುವ ಸ್ಮಿತ್‌, ವಿದೇಶದಲ್ಲಿ ಆಡಿದ 56 ಟೆಸ್ಟ್‌ ಪಂದ್ಯಗಳಲ್ಲಿ 17 ಶತಕಗಳನ್ನು ಬಾರಿಸಿದ ದಾಖಲೆಯನ್ನೂ ಹೊಂದಿದ್ದಾರೆ.

3ನೇ ಆ್ಯಷಸ್ ಟೆಸ್ಟ್‌ನಿಂದ ಆಸೀಸ್ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಹೊರಕ್ಕೆ3ನೇ ಆ್ಯಷಸ್ ಟೆಸ್ಟ್‌ನಿಂದ ಆಸೀಸ್ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಹೊರಕ್ಕೆ

ವೆಸ್ಟ್‌ ಇಂಡೀಸ್‌ ವಿರುದ್ಧದ ಅಂತಾರಾಷ್ಟ್ರೀಯ ಟಿ20 ಮತ್ತು ಏಕದಿನ ಕ್ರಿಕೆಟ್‌ ಸರಣಿ ಎರಡನ್ನೂ ವೈಟ್‌ವಾಷ್‌ ಮಾಡಿರುವ ಭಾರತ ತಂಡ ಇದೀಗ ಟೆಸ್ಟ್‌ ಕ್ರಿಕೆಟ್‌ನಲ್ಲೂ ಅಂಥದ್ದೇ ಭರ್ಜರಿ ಪ್ರದರ್ಶನ ನೀಡುವುದನ್ನು ಎದುರು ನೋಡುತ್ತಿದೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿಯ ಮಹತ್ವಾಂಕಾಂಕ್ಷೀಯ 'ಐಸಿಸಿ ಟೆಸ್ಟ್‌ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ' ಸಂಪೂರ್ಣ ಅಂಕಗಳೊಂದಿಗೆ ಭರ್ಜರಿ ಆರಂಭ ಪಡೆದುಕೊಳ್ಳುವುದು ಟೀಮ್‌ ಇಂಡಿಯಾದ ಲೆಕ್ಕಾಚಾರವಾಗಿದೆ.

Story first published: Wednesday, August 21, 2019, 15:01 [IST]
Other articles published on Aug 21, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X