For Quick Alerts
ALLOW NOTIFICATIONS  
For Daily Alerts
 

ನೆಟ್ಸ್‌ನಲ್ಲಿ ಬೆವರು ಹರಿಸಿದ ವಿರಾಟ್, ರೋಹಿತ್: Video

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಗೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳ ನಡುವಣ ಮೊದಲ ಏಕದಿನ ಪಂದ್ಯ ಪರ್ತ್‌ನಲ್ಲಿ ಅಕ್ಟೋಬರ್‌ 19 ರಂದು ನಡೆಯಲಿದೆ. ಈ ಸರಣಿಗೆ ಟೀಮ್ ಇಂಡಿಯಾವನ್ನು ಈಗಾಗಲೇ ಪ್ರಕಟಿಸಲಾಗಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ರೋಹಿತ್‌ ಶರ್ಮಾ ಬದಲಿಗೆ ಶುಭಮನ್‌ ಗಿಲ್ ಮುನ್ನಡೆಸುತ್ತಿದ್ದಾರೆ. ಕಳೆದ 7 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಂ ಬ್ಯಾಕ್ ಮಾಡಲಿದ್ದಾರೆ.

ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಇಬ್ಬರೂ ಈಗಾಗಲೇ ಟೆಸ್ಟ್‌ ಹಾಗೂ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಈ ಇಬ್ಬರೂ ಸ್ಟಾರ್‌ಗಳು ಇನ್ನು ಏಕದಿನ ಫಾರ್ಮೆಟ್‌ನಲ್ಲಿ ಮಾತ್ರ ತಂಡದ ಪರ ಕಣಕ್ಕೆ ಇಳಿಯಲಿದ್ದಾರೆ. ಹೀಗಾಗಿ ಅಭಿಮಾನಿಗಳ ಚಿತ್ತ ನೆಟ್ಟಿದೆ. ಈ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡುವುದೇ ಉಭಯ ಆಟಗಾರರ ಪ್ಲ್ಯಾನ್ ಆಗಿದೆ. ವಿರಾಟ್ ಕೊಹ್ಲಿ ಆಸ್ಟ್ರೇಲಿಯಾಕ್ಕೆ ಬಂದ ನಂತರ, ಏಕದಿನ ಸರಣಿಯ ತಯಾರಿಯಲ್ಲಿ ನೆಟ್ಸ್‌ನಲ್ಲಿ ಶ್ರಮಿಸಿದರು.

Kohli Rohit Sweat it Out in Nets Ahead of Australia ODI Series Return in Perth

ಟೀಮ್ ಇಂಡಿಯಾ ಅಕ್ಟೋಬರ್ 14 ರಂದು ಆಸ್ಟ್ರೇಲಿಯಾ ಪ್ರವಾಸವನ್ನು ಬೆಳೆಸಿತು. ಈ ವೇಳೆ ಟೀಮ್ ಇಂಡಿಯಾ ತನ್ನ ಮೊದಲ ಅಭ್ಯಾಸವನ್ನು ಅಕ್ಟೋಬರ್ 16 ರಂದು ಆರಂಭಿಸಿದೆ. ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ ನಡೆಸಿದ್ದಾರೆ. ಇವರು ಏಕದಿನ ಕ್ರಿಕೆಟ್‌ನಲ್ಲಿ ಅಬ್ಬರದ ಪ್ರದರ್ಶನ ನೀಡುವದನ್ನು ಕಣಲು ಅಭಿಮಾನಿಗಳು ಕಾತುರರಾಗಿದ್ದಾರೆ. ಈ ಅವಧಿಯಲ್ಲಿ ಟೀಮ್ ಇಂಡಿಯಾದ ಅನುಭವಿ ಆಟಗಾರರಾದ ವಿರಾಟ್ ಕೊಹ್ಲಿ ಹಗೂ ರೋಹಿತ್ ಶರ್ಮಾ ನೆಟ್ಸ್‌ನಲ್ಲಿ ಹೆಚ್ಚು ಹೊತ್ತು ಬೆವರು ಹರಿಸಿದರು.

ವಿರಾಟ್‌ ಮೇಲೆ ಚಿತ್ತ

ಈ ಸರಣಿಯಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹೇಗೆ ಪ್ರದರ್ಶನ ನೀಡಲಿದ್ದಾರೆ ಎಂಬುದರ ಮೇಲೆ ಕೋಟ್ಯಾಂತರ ಅಭಿಮಾನಿಗಳ ಚಿತ್ತ ನೆಟ್ಟಿದೆ. ಅಲ್ಲದೆ ಈ ಇಬ್ಬರೂ ಆಟಗಾರರು ತಮ್ಮಲ್ಲಿರುವ ಕ್ಷಮತೆಯನ್ನು ಸರಣಿಯಲ್ಲಿ ತೋರಿಸುವ ಅನಿವಾರ್ಯತೆ ಇದೆ. ಅಂದಾಗ ಮಾತ್ರ ಇವರಿಬ್ಬರೂ ಆಟಗಾರರು 2027 ರ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ಕನಸು ನನಸಾಗುತ್ತದೆ.

ವಿರಾಟ್‌ ಕೊಹ್ಲಿ ಅವರಿಗೆ ಆಸ್ಟ್ರೇಲಿಯಾ ಎಂದರೆ ಅಚ್ಚು ಮೆಚ್ಚಿನ ಎದುರಾಳಿ. ಇವರು ಈ ವರೆಗೆ 29 ಪಂದ್ಯಗಳನ್ನು ಆಸ್ಟ್ರೇಲಿಯಾದಲ್ಲಿ ಆಡಿದ್ದು, 51.04 ರ ಸರಾಸರಿಯಲ್ಲಿ 1327 ರನ್ ಗಳಿಸಿದ್ದಾರೆ. ಅಲ್ಲದೆ 5 ಶತಕ, 5 ಅರ್ಧಶತಕ ಸಿಡಿಸಿದ್ದಾರೆ.

ವಿರಾಟ್‌ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಇಬ್ಬರಿಗೂ ಆಸ್ಟ್ರೇಲಿಯಾ ವಿರುದ್ಧದ ಸರಣಿ ಕೊನೆಯ ಸರಣಿ ಎಂಬ ಊಹಾಪೋಹಗಳು ಎದ್ದಿದ್ದವು. ಆದರೆ ಇದಕ್ಕೆ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅದೆಲ್ಲಾ ಆಟಗಾರರ ನಿರ್ಧಾರ ಎಂದು ತಿಳಿಸಿದ್ದಾರೆ. ಅಲ್ಲದೆ ಅವರು ಫಿಟ್ನೆಸ್ ಹಾಗೂ ಫಾರ್ಮ್‌ ಉತ್ತಮವಾಗಿದ್ದರೆ ವಿಶ್ವಕಪ್ ಆಡಬಲ್ಲರು ಎಂದು ಮಾಜಿ ಕೋಚ್‌ ರವಿ ಶಾಸ್ತ್ರಿ ಸಹ ಹೇಳಿದ್ದಾರೆ.

Story first published: Friday, October 17, 2025, 8:05 [IST]
Other articles published on Oct 17, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+