For Quick Alerts
ALLOW NOTIFICATIONS  
For Daily Alerts
 

ವಿರಾಟ್‌, ರೋಹಿತ್‌, 2027ರ ವಿಶ್ವಕಪ್‌ ಆಡ್ತಾರಾ? ರವಿ ಶಾಸ್ತ್ರಿ ಬಿಗ್ ಅಪ್‌ಡೇಟ್‌

ಇನ್ನೇನು ಕೆಲವೇ ದಿನಗಳಲ್ಲಿ ಭಾರತ, ಆಸ್ಟ್ರೇಲಿಯಾ ಪ್ರವಾಸವನ್ನು ಬೆಳೆಸಲಿದೆ. ಈ ವೇಳೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮ ಅಂಗಳ ಪ್ರವೇಶಿಸಲಿದ್ದಾರೆ. ಈ ಇಬ್ಬರೂ ಆಟಗಾರರು ಈಗಾಗಲೇ ಟಿ20 ಹಾಗೂ ಟೆಸ್ಟ್‌ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದು, ಏಕದಿನ ಫಾರ್ಮೆಟ್‌ನಲ್ಲಿ ಮಾತ್ರ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ ಅಭಿಮಾನಿಗಳ ಚಿತ್ತ ಈ ಸ್ಟಾರ್ ಆಟಗಾರರ ಮೇಲೆ ನೆಟ್ಟಿದೆ. ಈ ಇಬ್ಬರೂ ಸೂಪರ್ ಸ್ಟಾರ್ ಆಟಗಾರರು ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ 2027ರ ಏಕದಿನ ವಿಶ್ವಕಪ್‌ನಲ್ಲಿ ಆಡುವ ಕನಸು ಕಾಣುತ್ತಿದ್ದಾರೆ.

ವಿರಾಟ್‌ ಹಾಗೂ ರೋಹಿತ್‌ ಏಕದಿನ ವಿಶ್ವಕಪ್ ಆಡುವ ಬಗ್ಗೆ ಪರ ಹಾಗೂ ವಿರೋಧ ಚರ್ಚೆಗಳು ಆರಂಭವಾಗಿವೆ. ಅವರ ವಯಸ್ಸು, ಫಾರ್ಮ್‌ ಹಾಗೂ ಫಿಟ್ನೆಸ್‌ ಗಮನದಲ್ಲಿಟ್ಟುಕೊಂಡು ತೀರ್ಮಾನ ಕೈಗೊಳ್ಳುವುದಾಗಿ ಮ್ಯಾನೇಜ್ಮೆಂಟ್ ತಿಳಿಸಿದಂತೆ. ಈ ವೇಳೆ ಟೀಮ್ ಇಂಡಿಯಾದ ಮಾಜಿ ಕೋಚ್‌ ರವಿ ಶಾಸ್ತ್ರಿ ಈ ಇವ್ವರು ಆಟಗಾರರ ಆಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.

Kohli amp amp Rohit s 2027 World Cup Dream Hinges on Upcoming Australia ODI Series Shastri

ಆಸ್ಟ್ರೇಲಿಯಾ ಪ್ರವಾಸವು ರೋಹಿತ್, ವಿರಾಟ್‌ ಅವರಿಗೆ ಮಹತ್ವದಾಗಿದೆ. ಈ ಇಬ್ಬರು ಹಿರಿಯ ಆಟಗಾರರು 2027 ರ ಏಕದಿನ ವಿಶ್ವಕಪ್‌ವರೆಗೆ ಭಾರತೀಯ ತಂಡದ ಭಾಗವಾಗಿ ಉಳಿಯುತ್ತಾರಾ? ಎಂಬುದನ್ನು ಈ ಸರಣಿ ನಿರ್ಧರಿಸಲಿದೆ ಎಂದು ಶಾಸ್ತ್ರಿ ತಿಳಿಸಿದ್ದಾರೆ.

ಶಾಸ್ತ್ರಿ ಹೇಳಿದ್ದೇನು?

ಏಕದಿನ ವಿಶ್ವಕಪ್‌ನಲ್ಲಿ ವಿರಾಟ್‌, ರೋಹಿತ್ ಸ್ಥಾನ ಖಚಿತವಿಲ್ಲ. ಈ ಇಬ್ಬರೂ ಆಟಗಾರರು ತಮ್ಮ ಸ್ಥಾನ ಖಚಿತ ಪಡಿಸಿಕೊಳ್ಳಲು ಆಸ್ಟ್ರೇಲಿಯಾ ವಿರುದ್ಧ ಸ್ಥಿರ ಪ್ರದರ್ಶನ ನೀಡುವ ಅನಿವಾರ್ಯತೆ ಇದೆ. ಹೀಗಾಗಿಯೇ ಇವರಿಬ್ಬರೂ ಸಹ ಈಗ ಈ ಸರಣಿಯಲ್ಲಿ ಆಡುತ್ತಿದ್ದಾರೆ. ಈ ಸರಣಿಯ ಬಳಿಕ ಅವರಲ್ಲಿ ಇನ್ನು ಎಷ್ಟು ಕ್ರಿಕೆಟ್ ಉಳಿದಿದೆ ಎಂಬುದನ್ನು ಅವರಿಬ್ಬರು ಅರ್ಥಮಾಡಿಕೊಳ್ಳುತ್ತಾರೆ. 36 ವರ್ಷದ ವಿರಾಟ್ ಕೊಹ್ಲಿ ಮತ್ತು 38 ವರ್ಷದ ರೋಹಿತ್ ಶರ್ಮಾ ಇಬ್ಬರೂ ಅತ್ಯುತ್ತಮ ಫಾರ್ಮ್‌ನಲಿಲ್ಲ ಎಂದು ಶಾಸ್ತ್ರಿ ತಿಳಿಸಿದ್ದಾರೆ.

Kohli amp amp Rohit s 2027 World Cup Dream Hinges on Upcoming Australia ODI Series Shastri

ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಸ್ಟೀವನ್ ಸ್ಮಿತ್ ಅವರ ಉದಾಹರಣೆಯನ್ನು ಶಾಸ್ತ್ರಿ ತಿಳಿಸಿದ್ದಾರೆ. ತಮ್ಮ ತಮ್ಮ ವಯಸ್ಸಿನಲ್ಲಿ ಆಟವನ್ನು ಆನಂದಿಸುವುದು, ಕ್ಷಮತೆ ಕಾಯ್ದುಕೊಳ್ಳುವುದು ಮುಖ್ಯ. ಚಾಂಪಿಯನ್ಸ್ ಟ್ರೋಫಿಯಲ್ಲಿ ಈ ಇಬ್ಬರೂ ಆಟಗಾರರು ಸ್ಥಿರವಾಗಿ ಆಡಿದ್ದಾರೆ ಎಂದಿದ್ದಾರೆ. ಇನ್ನು ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಅಕ್ಟೋಬರ್ 19, 23, 25 ರಂದು ಮೂರು ಏಕದಿನ ಪಂದ್ಯಗಳು ನಡೆಯಲಿದ್ದು, ಈ ಸರಣಿಗಾಗಿ ಭಾರತ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಈ ತಂಡವನ್ನು ಶುಭಮನ್‌ ಗಿಲ್ ಮುನ್ನಡೆಸುತ್ತಿದ್ದಾರೆ.

Story first published: Monday, October 13, 2025, 13:17 [IST]
Other articles published on Oct 13, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+