Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ವಿರಾಟ್‌ ಕೊಹ್ಲಿ 2.0 ವರ್ಷನ್‌: ಬ್ಯಾಕ್‌ ಟು ಬ್ಯಾಕ್‌ ಶತಕ ಬಾರಿಸಿದ ಚೇಸಿಂಗ್ ಸ್ಟಾರ್‌

ಟೀಮ್ ಇಂಡಿಯಾದ ಸೂಪರ್‌ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ಮುಂದುವರೆಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭರ್ಜರಿ ಪ್ರದರ್ಶನವನ್ನು ಮುಂದುವರೆಸಿರುವ ವಿರಾಟ್‌ , ಬ್ಯಾಕ್‌ ಟು ಬ್ಯಾಕ್‌ ಶತಕ ಸಿಡಿಸಿದರು. ಈ ಮೂಲಕ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ತಂಡದಲ್ಲಿ ತಮ್ಮನ್ನು ಪರಿಗಣಿಸುವಂತೆ ವಿರಾಟ್‌ ತಮ್ಮ ಬ್ಯಾಟಿಂಗ್ ಮೂಲಕ ಒತ್ತಾಯಿಸುತ್ತಿದ್ದಾರೆ.

ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಏಕದಿನ ಪಂದ್ಯದ ವೇಳೆ ಬ್ಯಾಕ್‌ ಟು ಬ್ಯಾಕ್‌ ಸೊನ್ನೆ ಸುತ್ತಿದ್ದ ವಿರಾಟ್‌, ಸಿಡ್ನಿಯಲ್ಲಿ ನಡೆದ ಪಂದ್ಯದಲ್ಲಿ ಅಬ್ಬರಿಸಿದ್ದರು. ಅಲ್ಲದೆ ರಾಯ್ಪುರ್‌ ಅಭಿಮಾನಿಗಳಿಗೆ ಹಬ್ಬದೂಟವನ್ನು ಉಣಬಡಿಸಿದರು. ವಿರಾಟ್‌ ಕೊಹ್ಲಿ ಅಪ್‌ಡೇಟ್‌ ವರ್ಷನ್‌ನಲ್ಲಿ ಕಾಣಿಸಿಕೊಂಡಂತೆ ಬ್ಯಾಟ್ ಮಾಡಿದರು. ಇವರು 93 ಎಸೆತಗಳಲ್ಲಿ 7 ಬೌಂಡರಿ, 2 ಸಿಕ್ಸರ್ ಸಹಾಯದಿಂದ 102 ರನ್ ಬಾರಿಸಿ ಮಿಂಚಿದರು. ಈ ಇನಿಂಗ್ಸ್‌ ಮೂಲಕ ವಿರಾಟ್‌ ಕೊಹ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದರು. ವಿರಾಟ್‌ ಕೊಹ್ಲಿ ಈ ಪಂದ್ಯದಲ್ಲಿ 109ರ ಸ್ಟ್ರೈಕ್‌ ರೇಟ್‌ನಲ್ಲಿ ರನ್‌ ಕಲೆ ಹಾಕಿದರು.

Kohli Smashes Back-to-Back Hundreds Breaks Sachin s ODI Record for Most Centuries at No 3

ದಕ್ಷಿಣ ಆಫ್ರಿಕಾ ವಿರುದ್ಧ ಶತಕ ಬಾರಿಸುತ್ತಿದ್ದಂತೆ ವಿರಾಟ್‌ ಏಕದಿನ ಫಾರ್ಮೆಟ್‌ನಲ್ಲಿ ಒಂದೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡರು. ಇವರು ಏಕದಿನ ಕ್ರಿಕೆಟ್‌ನಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿ 46 ಶತಕ ಬಾರಿಸಿದ್ದಾರೆ. ಈ ಮೂಲಕ ವಿರಾಟ್‌ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಅಳಿಸಿ ಹಾಕಿದರು. ಸಚಿನ್ ಆರಂಭಿಕರಾಗಿ 45 ಶತಕ ಬಾರಿಸಿದ್ದರೆ, ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿ 44 ರನ್‌ ಬಾರಿಸಿದ್ದರು.

ವಿರಾಟ್‌ ದಾಖಲೆ

ರಾಯ್ಪುರದಲ್ಲಿ ಶತಕ ಬಾರಿಸುತ್ತಿದ್ದಂತೆ ವಿರಾಟ್‌ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮೂರೂ ಫಾರ್ಮೆಟ್‌ಗಳಲ್ಲಿ 10ನೇ ಶತಕ ಬಾರಿಸಿದ ಹಿರಿಮೆ ತಮ್ಮದಾಗಿಸಿಕೊಂಡರು. ಈ ಮೂಲಕ ವಿರಾಟ್‌ ಆಸ್ಟ್ರೇಲಿಯಾದ ಡೇವಿಡ್‌ ವಾರ್ನರ್‌, ರಿಕ್ಕಿ ಪಾಂಟಿಂಗ್, ಕೇನ್‌ ವಿಲಿಯಮ್ಸನ್‌ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಎಲ್ಲ ಸ್ವರೂಪದಲ್ಲೂ ಅತಿ ಹೆಚ್ಚು ಶತಕ ಬಾರಿಸಿದ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದೆ. ಸಚಿನ್‌ ಮೂರು ಫಾರ್ಮೆಟ್‌ನಲ್ಲಿ 12 ಶತಕ ದಾಖಲಿಸಿದ್ದಾರೆ.

Kohli Smashes Back-to-Back Hundreds Breaks Sachin s ODI Record for Most Centuries at No 3

ದಕ್ಷಿಣ ಆಫ್ರಿಕಾ ವಿರುದ್ಧ ಶತಕ ಬಾರಿಸುತಿದ್ದಂತೆ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಬರೆದರು. ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಕ್ರಿಕೆಟ್‌ನಲ್ಲಿ 50ಕ್ಕೂ ಹೆಚ್ಚು ಬಾರಿ ರನ್‌ಗಳನ್ನು 15 ಬಾರಿ ಬಾರಿಸಿ ದಾಖಲೆ ಬರೆದರು. ಈ ಮೂಲಕ ವಿರಾಟ್‌ ಕುಮಾರ್ ಸಂಗಕ್ಕಾರ್, ರಿಕ್ಕಿ ಪಾಂಟಿಂಗ್ ಅವರ ದಾಖಲೆಯನ್ನು ಸರಿಗಟ್ಟಿದ್ದರು.

ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 84ನೇ ಶತಕ ಬಾರಿಸಿದರು. ಇನ್ನು ವಿರಾಟ್‌ ಕೊಹ್ಲಿ 34 ಶತಕಗಳನ್ನು ವಿವಿಧ ಮೈದಾನದಲ್ಲಿ ಸಿಡಿಸಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಸಚಿನ್‌ ತೆಂಡೂಲ್ಕರ್ ಅವರ ದಾಖಲೆಯನ್ನು ಸರಿಗಟ್ಟಿದರು.

Story first published: Wednesday, December 3, 2025, 18:45 [IST]
Other articles published on Dec 3, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+