ಆಟಗಾರರು ಓಕೆ, ಆದರೆ ಕೋಚ್‌ಗಳು..!?: ಕೊಹ್ಲಿ ಜೊತೆ ಜಗಳವಾಡಿದ ಗಂಭೀರ್‌ಗೆ ಇಂಗ್ಲೆಂಡ್ ದಿಗ್ಗಜನಿಂದ ಮಾತಿನ ಚಾಟಿ!
ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ನಡುವಿನ ಮಾತಿನ ಚಕಮಕಿಯ ಬಗ್ಗೆ ಇನ್ನೂ ಚರ್ಚೆಗಳು ಮುಂದುವರಿಯುತ್ತಲೇ ಇದೆ. ಕ್ರಿಕೆಟ್ ವಿಶ್ಲೇಷಕರು, ಕ್ರಿಕೆಟ್ ಅಪಂಡಿತರು ಹಾಗೂ ಅಭಿಮಾನಿಗಳು ಈ ವಿಚಾರವಾಗಿ ತಮ್ಮದೇ ಆದ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಯಾರು ಸರಿ, ಯಾರು ತಪ್ಪು ಎಂಬ ಬಗ್ಗೆಯೂ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಈ ಸಂದರ್ಬದಲ್ಲಿ ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ನೀಡಿರುವ ಹೇಳಿಕೆ ಕುತೂಹಲ ಮೂಡಿಸಿದೆ.
ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಆರ್‌ಸಿಬಿ ತಂಡಗಳು ಲಕ್ನೋದ ಏಕಾನ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದಾಗ ಕಾವೇರಿದ ಘಟನೆಗಳು ನಡೆದಿದ್ದತ್ತು. ಮೊದಲಿಗೆ ಪಂದ್ಯ ನಡೆಯುತ್ತಿರುವ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಹಾಗೂ ನವೀನ್ ಉಲ್ ಹಕ್ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಅದಾದ ಬಳಿಕ ಪಂದ್ಯ ಮುಕ್ತಾಯದ ನಂತರ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ಮಧ್ಯೆ ನಡೆದ ವಾಗ್ವಾದಗಳು ಈ ಚರ್ಚೆಗೆ ಕಾರಣವಾಗಿದೆ.

ಈ ಬಗ್ಗೆ ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ವಿರಾಟ್ ಕೊಹ್ಲಿ ಪರವಾಗಿ ಮಾತನಾಡಿದ್ದಾರೆ. ಆದರೆ ಕೋಚ್ ಸ್ಥಾನದಲ್ಲಿದ್ದುಕೊಂಡು ಗೌತಮ್ ಗಂಭೀರ್ ನಡೆದುಕೊಂಡ ರೀತಿಯ ಬಗ್ಗೆ ಮೈಕಲ್ ವಾನ್ ಅಸಮಾಧಾ ವ್ಯಕ್ತಪಡಿಸಿದ್ದಾರೆ. ಆಟಗಾರರು ಮೈದಾನದಲ್ಲಿ ಆ ಕ್ಷಣದ ಬಿಸಿಯಲ್ಲಿ ವಾಗ್ವಾದದಲ್ಲಿ ತೊಡಗುವುದನ್ನು ಒಪ್ಪಿಕೊಳ್ಳಬಹುದು. ಆದರೆ ಕೋಚ್‌ಗಳು ಹೀಗೆ ವರ್ತಿಸುವುದು ಒಪ್ಪಿಕೊಳ್ಳಳು ಸಾಧ್ಯವಿಲ್ಲ ಎಂದಿದ್ದಾರೆ ಮೈಕಲ್ ವಾನ್.
"ಆಟಗಾರರು ಸಣ್ಣಪುಟ್ಟ ವಾಗ್ವಾದಗಳು, ಮಾತಿನ ಚಕಮಕಿಯಲ್ಲಿ ತೊಡಗಿಸಿಕೊಳ್ಳುವದನ್ನು ಒಪ್ಪಿಕೊಳ್ಳಬಹುದು. ಅದು ಯಾವಾಗಲೂ ನಡೆಯುವುದಿಲ್ಲ. ಆದರೆ ಇದರಲ್ಲಿ ಕೋಚ್‌ಗಳು ಅಥವಾ ಕೋಚಿಂಗ್ ವಿಭಾಗದ ಸಿಬ್ಬಂಧಿಗಳು ಭಾಗಿಯಾಗುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಯಾವುದೇ ಇಬ್ಬರು ಆಟಗಾರರ ಮಧ್ಯೆ ಜಗಳಗಳು ನಡೆಯುತ್ತಿದ್ದರೆ ಅದನ್ನು ಅವರು ಬಗೆಹರಿಸಬೇಕು. ಕೋಚ್‌ಗಳು ಡಗೌಟ್‌ನಲ್ಲಿ ಅಥವಾ ಮೈದಾನದಲ್ಲಿದ್ದುಕೊಂಡು ಪಂದ್ಯದ ರಣತಂತ್ರಗಳನ್ನು ಹೆಣೆಯಬೇಕು" ಎಂದಿದ್ದಾರೆ ಮೈಕಲ್ ವಾನ್.
ಮೂವರಿಗೆ ದಂಡದ ಬರೆ: ಇನ್ನು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಪಂದ್ಯದಲ್ಲಿ ಮಾತುನ ಚಕಮಕಿಯಲ್ಲಿ ತೊಡಗಿಸಿಕೊಂಡ ಮೂವರಿಗೂ ದಂಡವನ್ನು ವಿಧಿಸಲಾಗಿದೆ. ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್‌ಗೆ ಪಂದ್ಯದ ಸಂಭಾವನೆಯ ಶೇಕಡಾ 100ರಷ್ಟು ದಂಡ ವಿಧಿಸಿದರೆ ನವೀನ್ ಉಲ್ ಹಕ್‌ಗೆ ಸಂಭಾವನೆಯ 50 ಶೇಕಡಾ ದಂಡ ವಿಧಿಸಲಾಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಮಹಿಪಾಲ್ ಲೋಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಮೈಕೆಲ್ ಬ್ರೇಸ್‌ವೆಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಡೇವಿಡ್ ವಿಲ್ಲಿ, ಫಿನ್ ಅಲೆನ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಆಕಾಶ್ ದೀಪ್, ಅವಿನಾಶ್ ಸಿಂಗ್, ಜೋಶ್ ಹ್ಯಾಜಲ್‌ವುಡ್, ಸಿದ್ದಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ರಾಜನ್ ಕುಮಾರ್, ಹಿಮಾಂಶು ಶರ್ಮಾ, ಕರ್ಣ್ ಶರ್ಮಾ, ಸೋನು ಯಾದವ್
ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಅವೇಶ್ ಖಾನ್, ಆಯುಷ್ ಬಡೋನಿ, ಕ್ವಿಂಟನ್ ಡಿ ಕಾಕ್, ಕೆ ಗೌತಮ್, ದೀಪಕ್ ಹೂಡಾ, ಪ್ರೇರಕ್ ಮಂಕಡ್, ಕೈಲ್ ಮೇಯರ್ಸ್, ಅಮಿತ್ ಮಿಶ್ರಾ, ಮೊಹ್ಸಿನ್ ಖಾನ್, ನವೀನ್-ಉಲ್-ಹಕ್, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್, ರವಿ ಬಿಷ್ಣೋಯ್, ಡೇನಿಯಲ್ ಸಾಮ್ಸ್, ಕರಣ್ ಶರ್ಮಾ, ರೊಮಾರಿಯೋ ಶೆಫರ್ಡ್, ಮಾರ್ಕಸ್ ಸ್ಟೊಯಿನಿಸ್, ಸ್ವಪ್ನಿಲ್ ಸಿಂಗ್, ಜಯದೇವ್ ಉನದ್ಕತ್, ಮನನ್ ವೋಹ್ರಾ, ಮಾರ್ಕ್ ವುಡ್, ಮಯಾಂಕ್ ಯಾದವ್, ಯಶ್ ಠಾಕೂರ್, ಯುದ್ವೀರ್ ಸಿಂಗ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications