ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿರಾಟ್‌ ಕೊಹ್ಲಿಗೆ ಶೋಕಾಸ್ ನೊಟೀಸ್ ನೀಡಲು ಸಿದ್ಧವಾಗಿದ್ದ ಗಂಗೂಲಿ; ತಡೆದಿದ್ದು ಜಯ್ ಶಾ!

Kohli vs Ganguly: BCCI president Ganguly wanted send show-cause notice to Virat Kohli
Virat Kohli ಮೇಲೆ Gangulyಗೆ ಭಾರೀ ಕೋಪ | Oneindia Kannada

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಮುನ್ನ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ನಡೆಸಿದ ಪತ್ರಿಕಾಗೋಷ್ಠಿ ದೊಡ್ಡ ವಿವಾದವೊಂದಕ್ಕೆ ಕಾರಣವಾಗಿತ್ತು. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅದಕ್ಕೂ ಮುನ್ನ ನೀಡಿದ್ದ ಹೇಳಿಕೆಗೆ ತದ್ವಿರುದ್ಧವಾದ ಮಾತುಗಳನ್ನು ಆಡುವ ಮೂಲಕ ವಿರಾಟ್ ಕೊಹ್ಲಿ ವಿವಾದಕ್ಕೆ ಕಿಡಿಹೊತ್ತಿಸಿದ್ದರು. ಟಿ20 ನಾಯಕತ್ವದಿಂದ ಕೆಳಕ್ಕಿಳಿಯದಂತೆ ವಿರಾಟ್ ಕೊಹ್ಲಿಗೆ ವೈಯಕ್ತಿಕವಾಗಿ ಮನವಿ ಮಾಡಲಾಗಿತ್ತು ಎಂಬ ಗಂಗೂಲಿ ಹೇಳಿಕೆಯನ್ನು ನೇರವಾಗಿ ತಿರಸ್ಕರಿಸಿದ್ದ ಕೊಹ್ಲಿ ತನಗೆ ಯಾರೂ ಕೂಡ ನಾಯಕತ್ವದಿಂದ ಕೆಳಕ್ಕಿಳಿಯುವಂತೆ ಮನವಿಯನ್ನು ಮಾಡಿರಲಿಲ್ಲ ಎಂದು ಹೇಳಿಕೆ ನೀಡಿದ್ದರು.

ಅಲ್ಲದೆ ಟಿ20 ನಾಯಕತ್ವದಿಮದ ಕೊಹ್ಲಿ ಕೆಳಕ್ಕಿಳಿದ ಬಳಿಕ ಏಕದಿನ ನಾಯಕತ್ವದಿಂದ ತನ್ನನ್ನು ಕೆಳಕ್ಕಿಳಿಸುವ ಸಂದರ್ಭದಲ್ಲಿ ಸೂಕ್ತ ರೀತಿಯ ಸಂವಹನ ನಡೆದಿರಲಿಲ್ಲ ಎಂಬ ಅಂಶವನ್ನು ಕೂಡ ಕೊಹ್ಲಿ ಹೇಳಿದ್ದರು. ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸುವ ಒಂದು ಗಂಟೆಗೆ ಮುನ್ನವಷ್ಟೇ ಈ ಬಗ್ಗೆ ತನಗೆ ತಿಳಿಸಲಾಗಿತ್ತು ಎಂದಿದ್ದರು ವಿರಾಟ್ ಕೊಹ್ಲಿ. ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಟಿ20 ವಿಶ್ವಕಪ್ 2022 ಸಂಪೂರ್ಣ ವೇಳಾಪಟ್ಟಿ ಪ್ರಕಟ: ಭಾರತಕ್ಕೆ ಮೊದಲ ಎದುರಾಳಿ ಪಾಕಿಸ್ತಾನಟಿ20 ವಿಶ್ವಕಪ್ 2022 ಸಂಪೂರ್ಣ ವೇಳಾಪಟ್ಟಿ ಪ್ರಕಟ: ಭಾರತಕ್ಕೆ ಮೊದಲ ಎದುರಾಳಿ ಪಾಕಿಸ್ತಾನ

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಭಾರತ ತಂಡದ ಹಿಂದಿನ ನಾಯಕ ವಿರಾಟ್ ಕೊಹ್ಲಿ ನಡುವಿನ ಈ ಮುಸುಕಿನ ಗುದ್ದಾಟದ ವಿಚಾರವಾಗಿ ಮತ್ತೊಮದು ಮಹತ್ವದ ಸಂಗತಿ ಬೆಳಕಿಗೆ ಬಂದಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ವಿವಾದಾತ್ಮಕ ಮಾಧ್ಯಮಗೋಷ್ಠಿಯ ವಿಚಾರವಾಗಿ ಕಾರಣ ಕೇಳಿ ನೋಟಿಸ್ ನೀಡಲು ನಿರ್ಧರಿಸಿದ್ದರು ಎಂದು ವರದಿಯಾಗಿದೆ. ಆದರೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಈ ವಿಚಾರವಾಗಿ ಮಧ್ಯ ಪ್ರವೇಶಿಸಿ ಗಂಗೂಲಿಯ ಈ ನಿರ್ಧಾರ ಬದಲಾಯಿಸುವಂತೆ ಮಾಡಿದರು ಎನ್ನಲಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಹೈಪ್ರೊಪೈಲ್ ಸರಣಿಯ ಸಂದರ್ಭದಲ್ಲಿ ಈ ವಿಚಾರ ನಕಾರಾತ್ಮಕ ಪರಿಣಾಮ ಬೀರಬಹುದು ಎಂಬ ಕಾರಣಕ್ಕೆ ಜಯ್ ಶಾ ಮಧ್ಯ ಪ್ರವೇಶಿಸಿದ್ದರು ಎನ್ನಲಾಗಿದೆ.

ಇನ್ನು ಬಿಸಿಸಿಐ ಈ ಬೆಳವಣಿಗೆಯ ಹಿನ್ನಲೆಯಲ್ಲಿ ಈವರೆಗೂ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ. ಆಯ್ಕೆ ಸಮಿತಿಯ ಮುಖ್ಯಸ್ಥ ಚೇತನ್ ಶರ್ಮಾ ಅವರು ದಕ್ಷಿಣ ಆಫ್ರಿಕಾ ಪ್ರವಾಸಕ್ಕಾಗಿ ಏಕದಿನ ತಂಡವನ್ನು ಘೋಷಿಸಲು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುವಾಗ ಪ್ರಶ್ನೆಗಳ ಸುರಿಮಳೆ ಎದುರಾಗಿತ್ತು. ಈ ಸಂದರ್ಭದಲ್ಲಿ ಅವರು ಕೂಡ ಟಿ20 ವಿಶ್ವಕಪ್‌ಗೆ ಮುನ್ನ ಟಿ20ಐ ನಾಯಕತ್ವ ತ್ಯಜಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸಭೆಯಲ್ಲಿ ಎಲ್ಲ ಸದಸ್ಯರು ವಿರಾಟ್ ಕೊಹ್ಲಿಗೆ ಕೇಳಿಕೊಂಡರು ಎಂದು ಹೇಳಿದ್ದರು.

ಇದಪ್ಪಾ ಕ್ರೇಜ್ ಅಂದ್ರೆ; 2022ರ ಟಿ20 ವಿಶ್ವಕಪ್‌ಗೂ ಮುನ್ನ ಸಿಡ್ನಿಯಲ್ಲಿ ಘರ್ಜಿಸಿದ ಕೊಹ್ಲಿ!ಇದಪ್ಪಾ ಕ್ರೇಜ್ ಅಂದ್ರೆ; 2022ರ ಟಿ20 ವಿಶ್ವಕಪ್‌ಗೂ ಮುನ್ನ ಸಿಡ್ನಿಯಲ್ಲಿ ಘರ್ಜಿಸಿದ ಕೊಹ್ಲಿ!

ಇನ್ನು ವಿರಾಟ್ ಕೊಹ್ಲಿ ಮಾಧ್ಯಮ ಗೋಷ್ಠಿಯಲ್ಲಿ ತನ್ನ ಹಾಗೂ ನೂತನ ನಾಯಕ ರೋಹಿತ್ ಶರ್ಮಾ ಮಧ್ಯೆ ಯಾವುದೇ ಭಿನ್ನಾಭಿಪ್ರಾಯಗಳು ಕೂಡ ಇಲ್ಲ ಎಂಬುದನ್ನು ಸ್ಪಷ್ಟವಾಗಿ ತಿಳಿಸಿದರು. ಈ ಮಧ್ಯೆ ದಕ್ಷಿಣ ಆಪ್ರಿಕಾ ವಿರುದ್ಧಧ ಟೆಸ್ಟ್ ಸರಣಿಯಲ್ಲಿ ಭಾರತ 1-2 ಅಂತರದಿಮದ ಸೋಲು ಅನುಭವಿಸಿದ ಬಳಿಕ ವಿರಾಟ್ ಕೊಹ್ಲಿ ಟೆಸ್ಟ್ ತಂಡದ ನಾಯಕತ್ವವನ್ನು ಕೂಡ ತ್ಯಜಿಸಿದ್ದಾರೆ. ಟೀಮ್ ಇಂಡಿಯಾದ ನೂತನ ಟೆಸ್ಟ್ ನಾಯಕ ಯಾರು ಎಂಬುದು ಇನ್ನಷ್ಟೇ ಸ್ಪಷ್ಟವಾಗಬೇಕಿದೆ. ಸೀಮಿತ ಓವರ್‌ಗಳ ನಾಯಕ ರೋಹಿತ್ ಶರ್ಮಾ ಟೆಸ್ಟ್ ನಾಯಕತ್ವ ಕೂಡ ವಹಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಕೆಎಲ್ ರಾಹುಲ್ ಕೂಡ ಟೆಸ್ಟ್ ನಾಯಕತ್ವಕ್ಕಾಗಿ ರೇಸ್‌ನಲ್ಲಿದ್ದಾರೆ.

Story first published: Friday, January 21, 2022, 14:50 [IST]
Other articles published on Jan 21, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X