For Quick Alerts
ALLOW NOTIFICATIONS  
For Daily Alerts
 

IND vs NZ: ಹೊಸ ವರ್ಷದಲ್ಲಿ ಟೀಮ್ ಇಂಡಿಯಾ ಗೆಲುವಿನ ಆರಂಭ

ವಡೋದರಾ: ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ (93 ರನ್) ಭರ್ಜರಿ ಬ್ಯಾಟಿಂಗ್ ಹಾಗೂ ಹರ್ಷಿತ್ ರಾಣಾ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಟೀಮ್ ಇಂಡಿಯಾ 4 ವಿಕೆಟ್‌ಗಳಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಿತು. ಈ ಮೂಲಕ ಆತಿಥೇಯ ಭಾರತ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

301 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾದ ಆರಂಭ ಸಾಧಾರಣವಾಗಿತ್ತು. ಆರಂಭಿಕ ರೋಹಿತ್ ಶರ್ಮಾ 29 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್ ಸಹಾಯದಿಂದ 26 ರನ್‌ ಬಾರಿಸಿ ಇಲ್ಲದ ಹೊಡೆತಕ್ಕೆ ಮುಂದಾಗಿ ಔಟ್ ಆದರು. ಮೊದಲ ವಿಕೆಟ್‌ಗೆ ರೋಹಿತ್ ಶರ್ಮಾ ಹಾಗೂ ಶುಭಮನ್‌ ಗಿಲ್ ಜೋಡಿ 39 ರನ್‌ ಕಾಣಿಕೆ ನೀಡಿತು.

Kohli s 93 and Harshit Rana s All-Round Show Lead India to 4-Wicket Victory Over New Zealand

ಎರಡನೇ ವಿಕೆಟ್‌ಗೆ ನಾಯಕ ಶುಭಮನ್‌ ಗಿಲ್‌ ಅವರೊಂದಿಗೆ ಸೇರಿಕೊಂಡು ಅನುಭವಿ ವಿರಾಟ್ ಕೊಹ್ಲಿ, ಒತ್ತಡವನ್ನು ಮೆಟ್ಟಿನಿಂತು ಬ್ಯಾಟ್ ಮಾಡಿದರು. ಈ ಜೋಡಿ ಸಮಯೋಚಿತ ಬ್ಯಾಟಿಂಗ್ ನಡೆಸಿತು. ಈ ಜೋಡಿಯ ಆಟಕ್ಕೆ ಕಿವೀಸ್‌ ಬೌಲರ್‌ಗಳು ಬ್ರೇಕ್ ಹಾಕುವಲ್ಲಿ ವಿಫಲರಾದರು. ಈ ಜೊಡಿ ಕೆಟ್ಟ ಎಸೆತಗಳನ್ನು ದಂಡಿಸುತ್ತಾ ಸಾಗಿತು. ಈ ಜೋಡಿ 107 ಎಸೆತಗಳಲ್ಲಿ 118 ರನ್‌ ಸೇರಿಸಿತು. ಈ ಹಂತದಲ್ಲಿ ನಾಯಕ ಶುಭಮನ್‌ ಗಿಲ್ 3 ಬೌಂಡರಿ, 2 ಸಿಕ್ಸರ್ ಸಹಾಯದಿಂದ 56 ರನ್‌ ಬಾರಿಸಿ ಔಟ್ ಆದರು.

ವಿರಾಟ್‌ ಅಬ್ಬರ

ಮೂರನೇ ವಿಕೆಟ್‌ಗೆ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಸಹ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದರು. ಈ ಜೋಡಿ 76 ಎಸೆತಗಳಲ್ಲಿ 77 ರನ್‌ ಸಿಡಿಸಿದರು. 39.1 ಓವರ್‌ನಲ್ಲಿ ವಿರಾಟ್ ಕೊಹ್ಲಿ 93 ರನ್‌ ಬಾರಿಸಿದ್ದಾಗ ಇಲ್ಲದ ಹೊಡೆತಕ್ಕೆ ಮುಂದಾಗಿ ವಿಕೆಟ್‌ ಒಪ್ಪಿಸಿದರು. ವಿರಾಟ್ ಅವರ ಇನಿಂಗ್ಸ್‌ನಲ್ಲಿ 8 ಬೌಂಡರಿ, 1 ಸಿಕ್ಸರ್ ಸೇರಿವೆ. ಶ್ರೇಯಸ್‌ ಅಯ್ಯರ್ 49 ರನ್‌ ಬಾರಿಸಿ ಔಟ್ ಆದರು.

ಆಲ್‌ರೌಂಡರ್‌ ಹರ್ಷಿತ್ ರಾಣಾ 23 ಎಸೆತಗಳಲ್ಲಿ 2 ಬೌಂಡರಿ, 1 ಸಿಕ್ಸರ್ ಸಹಾಯದಿಂದ 29 ರನ್‌ ಸಿಡಿಸಿ ಔಟ್ ಆದರು. ಕನ್ನಡಿಗ ಕೆಎಲ್ ರಾಹುಲ್‌ ಅಜೇಯ 29 ರನ್‌ ಬಾರಿಸಿ ತಂಡಕ್ಕೆ ಗೆಲುವಿನ ಮಾಲೆ ತೊಡಿಸಿದರು. ಅಂತಿಮವಾಗಿ ಭಾರತ 49 ಓವರ್‌ಗಳಲ್ಲಿ 306 ರನ್‌ ಸೇರಿಸಿ ಜಯ ಸಾಧಿಸಿತು.ನ್ಯೂಜಿಲೆಂಡ್‌ ಪರ ಕೈಲ್‌ ಜೇಮಿಸನ್‌ 41 ರನ್‌ ನೀಡಿ 4 ವಿಕೆಟ್‌ ಕಬಳಿಸಿದರು.

ಭರ್ಜರಿ ಆರಂಭ

ನ್ಯೂಜಿಲೆಂಡ್ ತಂಡ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿತು. ಈ ವೇಳೆ ಆರಂಭಿಕರಾದ ಡೆವೊನ್ ಕಾನ್ವೇ ಹಾಗೂ ಹೆನ್ರಿ ನಿಕೋಲ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 21.4 ಓವರ್‌ಗಳಲ್ಲಿ 117 ರನ್‌ ಸೇರಿಸಿತು. ಡೆವೊನ್ ಕಾನ್ವೇ 56, ಹೆನ್ರಿ ನಿಕೋಲ್ಸ್ 62 ರನ್‌ ಸಿಡಿಸಿದರು. ಮಧ್ಯಮ ಕ್ರಮಾಂಕದಲ್ಲಿ ಡ್ಯಾರಿಲ್ ಮಿಚೆಲ್ ಕೆಚ್ಚೆದೆಯ ಬ್ಯಾಟಿಂಗ್ ನಡೆಸಿದರು. ಇವರು 71 ಎಸೆತಗಳಲ್ಲಿ 5 ಬೌಂಡರಿ, 3 ಸಿಕ್ಸರ್ ಸಹಾಯದಿಂದ 84 ರನ್‌ ಸಿಡಿಸಿದರು. ಪದಾರ್ಪಣೆ ಪಂದ್ಯವನ್ನು ಆಡಿದ ಕ್ರಿಶ್ಚಿಯನ್ ಕ್ಲಾರ್ಕ್ ಅಜೇಯ 24 ರನ್‌ ಸಿಡಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು. ಅಂತಿಮವಾಗಿ ನ್ಯೂಜಿಲೆಂಡ್‌ 50 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 300 ರನ್‌ ಸೇರಿಸಿತು. ಭಾರತದ ಪರ ವೇಗದ ಬೌಲರ್‌ಗಳಾದ ಮೊಹಮ್ಮದ್‌ ಸಿರಾಜ್‌, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ ತಲಾ 2 ವಿಕೆಟ್‌ ಪಡೆದರು.

Story first published: Sunday, January 11, 2026, 21:42 [IST]
Other articles published on Jan 11, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+