ವಿರಾಟ್ ಕೊಹ್ಲಿ 135: ದಕ್ಷಿಣ ಆಫ್ರಿಕಾಕ್ಕೆ 350 ರನ್ ಗುರಿ ನೀಡಿದ ಭಾರತ
ಭರವಸೆಯ ಆಟಗಾರ ವಿರಾಟ್ ಕೊಹ್ಲಿ ಬಾರಿಸಿದ ಶಕತದ ನೆರವಿನಿಂದ ಭಾರತ ತಂಡ ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾಕ್ಕೆ ಸವಾಲಿನ ಮೊತ್ತದ ಗುರಿಯನ್ನು ನೀಡಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತದ ಆರಂಭ ಕಳಪೆಯಾಗಿತ್ತು. ಶುಭಮನ್ ಗಿಲ್ ಅನುಪಸ್ಥಿತಿಯಲ್ಲಿ ಆರಂಭಿಕರಾಗಿ ಕಾಣಿಸಿಕೊಂಡಿದ್ದು ಯಶಸ್ವಿ ಜೈಸ್ವಾಲ್ ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ಇವರು 2 ಬೌಂಡರಿ, 1 ಸಿಕ್ಸರ್ ಸಹಾಯದಿಂದ 18 ರನ್ ಬಾರಿಸಿ ಔಟ್ ಆದರು. ಎರಡನೇ ವಿಕೆಟ್‌ಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರು ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿದ ಪರಿಣಾಮ ಭಾರತ ಸವಾಲಿನ ಮೊತ್ತ ಕಲೆ ಹಾಕುವತ್ತ ದೃಷ್ಟಿ ನೆಟ್ಟಿತು.

25 ರನ್‌ಗಳಿಗೆ ಮೊದಲು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಭಾರತ ತಂಡಕ್ಕೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಜೋಡಿ ಆಸರೆಯಾಯಿತು. ಈ ಜೋಡಿ 109 ಎಸೆತಗಳಲ್ಲಿ 136 ರನ್ ಸಿಡಿಸಿತು. ಈ ವೇಳೆ ರೋಹಿತ್ ಶರ್ಮಾ 5 ಬೌಂಡರಿ, 3 ಸಿಕ್ಸರ್ ಸಹಾಯದಿಂದ 57 ರನ್ ಸಿಡಿಸಿದರು. ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಬಂದ ರುತುರಾಜ್ ಗಾಯಕ್ವಾಡ್ (8) ದೊಡ್ಡ ಇನಿಂಗ್ಸ್ ಕಟ್ಟಲಿಲ್ಲ. ವಾಷಿಂಗ್ಟನ್ ಸುಂದರ್ (13) ಜವಾಬ್ದಾರಿ ಮರೆತರು.
ವಿರಾಟ್ ಶತಕ
ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ, ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿ ಆರ್ಭಟಿಸಿದರು. ಇವರು 120 ಎಸೆತಗಳಲ್ಲಿ 11 ಬೌಂಡರಿ, ನೆರವಿನಿಂದ 135 ರನ್ ಸಿಡಿಸಿ ಔಟ್ ಆದರು.
ನಾಯಕ ಕೆಎಲ್ ರಾಹುಲ್ 56 ಎಸೆತಗಳಲ್ಲಿ 2 ಬೌಂಡರಿ, 3 ಸಿಕ್ಸರ್ ನೆರವಿನಿಂದ 60 ರನ್ ಸಿಡಿಸಿದರು. ಆಲ್‌ರೌಂಡರ್ ರವೀಂದ್ರ ಜಡೇಜಾ 2 ಬೌಂಡರಿ, 1 ಸಿಕ್ಸರ್ ಸಹಾಯದಿಂದ 32 ರನ್ ಬಾರಿಸಿ ಔಟ್ ಆದರು.ಅಂತಿಮವಾಗಿ ಭಾರತ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 349 ರನ್ ಕಲೆ ಹಾಕಿತು. ದಕ್ಷಿಣ ಆಫ್ರಿಕಾದ ಪರ ಮಾರ್ಕೊ ಜಾನ್ಸನ್, ನಾಂದ್ರೆ ಬರ್ಗರ್, ಕಾರ್ಬಿನ್ ಬಾಷ್, ಒಟ್ನೀಲ್ ಬಾರ್ಟ್ಮನ್ ತಲಾ 2 ವಿಕೆಟ್ ಕಬಳಿಸಿದರು. ದಕ್ಷಿಣ ಆಫ್ರಿಕಾದ ಎಲ್ಲ ಬೌಲರ್‌ಗಳ ಎಕಾನಮಿ 6ಕ್ಕಿಂತಲೂ ಹೆಚ್ಚಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications