For Quick Alerts
ALLOW NOTIFICATIONS  
For Daily Alerts
 

ಕೆಕೆಆರ್‌ ವೇಗಿ, ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಕೋವಿಡ್-19 ಪಾಸಿಟಿವ್

Kolkata Knight Riders pacer Prasidh Krishna has tested positive for COVID-19
ಭಾರತ ತಂಡಕ್ಕೆ ಆಯ್ಕೆಯಾದ ಮೇಲೆ , Prasidಗೆ Covid | Oneindia Kannada

ಬೆಂಗಳೂರು: ಕೋಲ್ಕತ್ತಾ ನೈಟ್ ರೈಡರ್ಸ್ ವೇಗಿ, ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಕೋವಿಡ್-19 ಪಾಸಿಟಿವ್ ಬಂದಿದೆ. ಇದರೊಂದಿಗೆ ಕೆಕೆಆರ್‌ನಲ್ಲಿ ಕೋವಿಡ್-19 ಪಾಸಿಟಿವ್ ಬಂದ ನಾಲ್ಕನೇ ಆಟಗಾರನಾಗಿ ಪ್ರಸಿದ್ಧ್ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಕೆಕೆಆರ್ ಪರ ಆಡುವ ನ್ಯೂಜಿಲೆಂಡ್‌ ಬ್ಯಾಟ್ಸ್‌ಮನ್ ಟಿಮ್ ಸೀಫರ್ಟ್‌ಗೂ ಕೊರೊನಾ ಸೋಂಕು ತಗುಲಿತ್ತು.

ಐಪಿಎಲ್ 14ನೇ ಆವೃತ್ತಿ ನಡೆಯುತ್ತಿದ್ದಾಗ ಕೋಲ್ಕತ್ತಾ ನೈಟ್ ರೈಡರ್ಸ್‌ನ ವರುಣ್ ಚಕ್ರವರ್ತಿ, ಸಂದೀಪ್ ವಾರಿಯರ್‌ಗೆ ಕೋವಿಡ್-19 ಪಾಸಿಟಿವ್ ಬಂದಿತ್ತು. ಇನ್ನು ಸನ್ ರೈಸರ್ಸ್ ಹೈದರಾಬಾದ್‌ನ ವೃದ್ಧಿಮಾನ್ ಸಾಹ, ಡೆಲ್ಲಿ ಕ್ಯಾಪಿಟಲ್ಸ್‌ನ ಅಮಿತ್ ಮಿಶ್ರಾ ಮತ್ತು ಚೆನ್ನೈ ಸೂಪರ್ ಕಿಂಗ್ಸ್‌ನ ಬೌಲಿಂಗ್‌ ಕೋಚ್‌ ಲಕ್ಷ್ಮೀಪತಿ ಬಾಲಾಜಿಗೂ ಸೋಂಕು ತಗುಲಿದ್ದರಿಂದ ಈ ಬಾರಿಯ ಐಪಿಎಲ್ ಅನ್ನು ಸ್ಥಗಿತಗೊಳಿಸಲಾಯ್ತು.

2021ರ ಐಪಿಎಲ್ ನಿಲುಗಡೆಯಾದ ಬಳಿಕವೂ ಐಪಿಎಲ್ ಬಯೋಬಬಲ್ ಒಳಗಿದ್ದ ಆಟಗಾರರಿಗೆ ಕೊರೊನಾ ಸೋಂಕು ತಗುಲುತ್ತಿರುವುದು ವರದಿಯಾಗುತ್ತಿದೆ. ಐಪಿಎಲ್‌ನಲ್ಲಿ ಯುವ ಬೌಲರ್ ಪ್ರಸಿದ್ಧ್ ಕೆಕೆಆರ್‌ಗೆ ಬೌಲಿಂಗ್ ಬಲ ತುಂಬಿದ್ದರು.

25ರ ಹರೆಯದ ಪ್ರಸಿದ್ಧ್ ಕೃಷ್ಣ, ಸದ್ಯ ಬೆಂಗಳೂರಿನಲ್ಲಿದ್ದಾರೆ. ಬೆಂಗಳೂರಿನ ತನ್ನ ಮನೆಗೆ ಹೋಗೋಕೂ ಮೊದಲೇ ಅವರಿಗೆ ಕೋವಿಡ್ ಪಾಸಿಟಿವ್ ಇರುವುದು ಕಂಡುಬಂದಿದೆ. 31 ಐಪಿಎಲ್ ಪಂದ್ಯಗಳಲ್ಲಿ 26 ವಿಕೆಟ್, 3 ಏಕದಿನ ಪಂದ್ಯಗಳಲ್ಲಿ 6 ವಿಕೆಟ್ ಪಡೆದಿದ್ದಾರೆ. 2021ರ ಐಪಿಎಲ್‌ನಲ್ಲಿ ಒಟ್ಟು 7 ಪಂದ್ಯಗಳನ್ನಾಡಿದ್ದ ಪ್ರಸಿದ್ಧ್ 8 ವಿಕೆಟ್ ಪಡೆದಿದ್ದರು.

Story first published: Saturday, May 8, 2021, 15:34 [IST]
Other articles published on May 8, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+