ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

KPL ಕ್ರಿಕೆಟ್ ಬೆಟ್ಟಿಂಗ್, ಹೈಗ್ರೌಂಡ್ಸ್ ಪೊಲೀಸರಿಂದ ಹರೀಶ, ಮಹೇಶ ಬಂಧನ

KPL betting: Bengaluru Highground police arrests two person

ಬೆಂಗಳೂರು, ಆಗಸ್ಟ್ 18: ಕರ್ನಾಟಕ ಪ್ರಿಮೀಯರ್ ಲೀಗ್-2019 ಕ್ರಿಕೆಟ್ ಪಂದ್ಯಾವಳಿಗೂ ಕ್ರಿಕೆಟ್ ಬೆಟ್ಟಿಂಗ್ ಬಿಸಿ ತಟ್ಟಿದೆ. ಕೆಪಿಎಲ್ ಆರಂಭವಾಗುತ್ತಿದ್ದಂತೆ ಬೆಟ್ಟಿಂಗ್ ಜಾಲ ಚುರುಕಾಗಿದೆ. ಆದರೆ, ಬೆಂಗಳೂರು ಪೊಲೀಸರು ಬೆಟ್ಟಿಂಗ್ ಜಾಲವನ್ನು ಪತ್ತೆ ಹಚ್ಚುತ್ತಿದ್ದಾರೆ.

ಹೈಗ್ರೌಂಡ್ಸ್ ಪೊಲೀಸ್ ಠಾಣೆ ಸರಹದ್ದಿನ ರೇಸ್ ಕೋರ್ಸ್ ರಸ್ತೆ, ಸ್ವಿಸ್ ಕಾಂಪ್ಲೆಕ್ಸ್ ಮುಂಭಾಗ ಕಾಣಿಸಿಕೊಂಡ ಹರೀಶ, ಮಹೇಶ ಎಂಬಿಬ್ಬರನ್ನು ಪೊಲೀಸರು ಶನಿವಾರ ಸಂಜೆ ಬಂಧಿಸಿದ್ದಾರೆ. ಕರ್ನಾಟಕ ಪ್ರಿಮೀಯರ್ ಲೀಗ್-2019 ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಪಟ್ಟಂತೆ ಹುಬ್ಬಳ್ಳಿ ಟೈಗರ್ಸ್ ಮತ್ತು ಶಿವಮೊಗ್ಗ ಲಯನ್ಸ್ ತಂಡಗಳ ನಡುವೆ ಪಂದ್ಯ ನಡೆಯುತ್ತಿರುವ ವೇಳೆ ಪಂದ್ಯಕ್ಕೆ ಸಂಭಂದಪಟ್ಟಂತೆ ಜೂಜಾಟ ನಡೆಸುತ್ತಿದ್ದ ಆರೋಪ ಇವರ ಮೇಲಿದೆ. ತಂಡಗಳ ಗೆಲುವು ಮತ್ತು ಸೋಲಿನ ಬಗ್ಗೆ ಸಾರ್ವಜನಿಕರಿಂದ ಕ್ರಿಕೆಟ್ ಬೆಟ್ಟಿಂಗ್‍ಗೆ ಪೋನ್ ಮುಖಾಂತರ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಕ್ರಿಕೆಟ್ ಬೆಟ್ಟಿಂಗ್ ಎಂಬ ಜೂಜಾಟ ಆಡಿಸುತ್ತಿದ್ದರು.

ಬೆಟ್ಟಿಂಗ್ ದಂಧೆ ಬಗ್ಗೆ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ವಿಶೇಷ ವಿಚಾರಣಾ ದಳದ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿದ ಬಳಿಕ, ಕಾರ್ಯಪ್ರವೃತ್ತರಾಗಿ, ದಾಳಿ ನಡೆಸಿ, ಅಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಕತ್ರಿಗುಪ್ಪೆ ನಿವಾಸಿ ಮಹೇಶ(46ವರ್ಷ) ಹಾಗೂ ಅಗ್ರಹಾರ ದಾಸರಹಳ್ಳಿ ನಿವಾಸಿ ಹರೀಶ(39ವರ್ಷ) ಅವರನ್ನು ಬಂಧಿಸಿದ್ದಾರೆ.

ವಿಂಡೀಸ್‌ ವಿರುದ್ಧದ ಅಭ್ಯಾಸ ಪಂದ್ಯ, ಚೇತೇಶ್ವರ್‌ ಪೂಜಾರ ಶತಕ ವೈಭವವಿಂಡೀಸ್‌ ವಿರುದ್ಧದ ಅಭ್ಯಾಸ ಪಂದ್ಯ, ಚೇತೇಶ್ವರ್‌ ಪೂಜಾರ ಶತಕ ವೈಭವ

ಆರೋಪಿಗಳ ಬಳಿ ಕ್ರಿಕೆಟ್ ಬೆಟ್ಟಿಂಗ್ ಜೂಜಾಟಕ್ಕೆ ಸಂಬಂಧಿಸಿದ ನಗದು ರೂ.1,97,000/- ಹಾಗೂ 02 ಮೊಬೈಲ್ ಪೋನ್‍ಗಳನ್ನು ವಶಪಡಿಸಿಕೊಳ್ಲಲಾಗಿದ್ದು, ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಈ ಕಾರ್ಯಾಚರಣೆಯನ್ನು ಜಂಟಿ ಪೊಲೀಸ್ ಆಯುಕ್ತರು, ಅಪರಾಧ ರವರಾದ ಸಂದೀಪ್ ಪಾಟೀಲ್, ಐ.ಪಿ.ಎಸ್ ಮತ್ತು ಉಪ ಪೊಲೀಸ್ ಆಯುಕ್ತರು, ಅಪರಾಧ ರವರಾದ ಕುಲದೀಪ್ ಕುಮಾರ್ ಆರ್.ಜೈನ್ ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ, ಸಿಸಿಬಿ, ವಿಶೇಷ ವಿಚಾರಣಾ ದಳದ ಸಹಾಯಕ ಪೊಲೀಸ್ ಆಯುಕ್ತರಾದ ಎನ್.ಹೆಚ್, ರಾಮಚಂದ್ರಯ್ಯ ರವರ ನೇತೃತ್ವದಲ್ಲಿ ಪೊಲೀಸ್ ಇನ್ಸ್‍ಪೆಕ್ಟರ್‍ಗಳಾದ ಕೆ.ಪ್ರಕಾಶ್ ಹಾಗೂ ಶ್ರೀ. ಎ.ಪಿ. ಕುಮಾರ್ ಮತ್ತು ಸಿಬ್ಬಂದಿಗಳಾದ ರವಿಕುಮಾರ್, ನಾಗರಾಜ, ಮತ್ತು ಶಿವಕುಮಾರ್ ರವರುಗಳು ಕೈಗೊಂಡಿರುತ್ತಾರೆ.

Story first published: Sunday, August 18, 2019, 16:20 [IST]
Other articles published on Aug 18, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X